ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ
NIA Raids In Bengaluru ಈನ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ

ಎನ್ಐಎ(ಪ್ರಾತಿನಿಧಿಕ ಚಿತ್ರ)
ಬೆಂಗಳೂರು, (ನವೆಂಬರ್ 08): ಬೆಂಗಳೂರಿನಲ್ಲಿ(Bengaluru) ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ (illegal Bangladeshi immigrant) ಮನೆಗಳ ಮೇಲೆ ಎನ್ಐಎ (NIA) ಅಧಿಕಾರಿಗಳು ರೇಡ್ ಮಾಡಿದ್ದಾರೆ. ಇಂದು (ನವೆಂಬರ್ 08) ಬೆಳ್ಳಂಬೆಳಗ್ಗೆ ಬೆಂಗಳೂರಿನ ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ ತಂಡ ದಾಳಿ ಮಾಡಿದ್ದು, 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.