ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

NIA Raids In Bengaluru ಈನ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡು ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ
ಎನ್ಐಎ(ಪ್ರಾತಿನಿಧಿಕ ಚಿತ್ರ)
Edited By:

Updated on: Nov 08, 2023 | 9:38 AM

ಬೆಂಗಳೂರು, (ನವೆಂಬರ್ 08): ಬೆಂಗಳೂರಿನಲ್ಲಿ(Bengaluru)  ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ (illegal Bangladeshi immigrant) ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ರೇಡ್ ಮಾಡಿದ್ದಾರೆ. ಇಂದು (ನವೆಂಬರ್ 08) ಬೆಳ್ಳಂಬೆಳಗ್ಗೆ ಬೆಂಗಳೂರಿನ ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ ತಂಡ ದಾಳಿ ಮಾಡಿದ್ದು, 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Loading...
Unable to load recommendations.
Follow Us