ಭಟ್ಕಳದಲ್ಲಿ ಎನ್‌ಐಎ ದಾಳಿ: ಐಸಿಸ್ ನಂಟು ಶಂಕೆಯ ಮೇಲೆ ಮೂವರು ವಶಕ್ಕೆ
ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಶುಕ್ರವಾರ ದಾಳಿ ನಡೆಸಿ, ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.
ವಿವಿಧೆಡೆ ಕಾರ್ಯಾಚರಣೆ ದೇಶದ ವಿವಿಧೆಡೆ ಇತ್ತೀಚೆಗೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ಭದ್ರತಾ ಸಿಬ್ಬಂದಿ ಹಲವು ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿಯೂ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಮಂಗಳೂರಿನ ಅಮರ್ ಅಬ್ದುಲ್ ರೆಹಮಾನ್ ಬಂಧಿತರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ.
ಕರ್ನಾಟಕ ಸೇರಿದಂತೆ ದೇಶದ 5 ಕಡೆ ಎನ್‌ಐಎ ಬುಧವಾರ ದಾಳಿ ನಡೆಸಿತ್ತು. ಕರ್ನಾಟಕದ ಬಂಧಿತ ಉಗ್ರರು ಕೇರಳದ ಮೊಹಮದ್ ಅಮೀನ್ ಜೊತೆಗೆ ನಂಟು ಹೊಂದಿದ್ದರು ಎಂದು ಆರೋಪಿಸಲಾಗಿದೆ. ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.
(NIA takes three people into custody to investigate on alleged ISIS relations)
ಇದನ್ನೂ ಓದಿ: ಕರ್ನಾಟಕದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ: ಎನ್‌ಐಎ ಕಾರ್ಯಾಚರಣೆ
Published On - 3:36 pm, Fri, 6 August 21