ಬಾಂಗ್ಲಾದೇಶದ ಯುವತಿ ಗ್ಯಾಂಗ್‌ರೇಪ್ ಪ್ರಕರಣ; ಯುವತಿಯರ ಮಾಹಿತಿ ಕೇಳಿದ ಎನ್ಐಎ
ಬೆಂಗಳೂರಿನಲ್ಲಿ ಮೇ 27ರಂದು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಂಗ್ಲಾ ಯುವತಿಯ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸ್ಥಳೀಯ ದಾಖಲೆ ನೀಡುವಂತೆ NIA ಮಾಹಿತಿ ಕೇಳಿದೆ.
ಬೆಂಗಳೂರು: ಬಾಂಗ್ಲಾದೇಶದ ಯುವತಿಯ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಶದಲ್ಲಿದ್ದ ಯುವತಿಯರ ಬಗ್ಗೆ ಮಾಹಿತಿ ಹಾಗೂ ಸ್ಥಳೀಯ ದಾಖಲೆ ನೀಡುವಂತೆ NIA ಕೇಳಿದೆ.
ಬೆಂಗಳೂರಿನಲ್ಲಿ ಮೇ 27ರಂದು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಂಗ್ಲಾ ಯುವತಿಯ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಹಾಗೂ ಆರೋಪಿಗಳ ವಶದಲ್ಲಿದ್ದ 7 ಬಾಂಗ್ಲಾ ಯುವತಿಯರನ್ನೂ ನಕಲಿ ಭಾರತೀಯ ದಾಖಲೆ ಸಹಿತ ವಶಕ್ಕೆ ಪಡೆಯಲಾಗಿತ್ತು. ಬಳಿಕ ಪ್ರಕರಣವನ್ನ ಹೆಣ್ಣೂರು ಠಾಣೆಗೆ ವರ್ಗಾಯಿಸಲಾಗಿತ್ತು. ನಕಲಿ ದಾಖಲೆ ಸೃಷ್ಟಿಸಿ ಯುವತಿಯರನ್ನ ಕರೆತಂದಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಎನ್‌ಐಎ ಎಂಟ್ರಿಯಾಗಿದೆ.
ಘಟನೆ ಹಿನ್ನೆಲೆ ಆರೋಪಿಗಳು ಎನ್ಆರ್ಐ ಲೇಔಟ್ನಲ್ಲಿ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದು, ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು.
ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದ ಬಾಂಗ್ಲಾ ಪೊಲೀಸರು ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣದ ಬಂಧಿತರಿಗೆ ಆಧಾರ್ ಕಾರ್ಡ್ ಸಿಕ್ಕಿದ್ದೇಗೆ?
Published On - 8:47 am, Sun, 18 July 21