ಸರ್ಕಾರದ ಮಾರ್ಗಸೂಚಿ: ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಸಮಯದಲ್ಲೂ ಬದಲಾವಣೆ
ಕರ್ಫ್ಯೂ ಜಾರಿ ಸಮಯದಲ್ಲೂ ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಈ ಮೊದಲು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಲಾಗಿತ್ತು. ಆದರೆ, ಸರ್ಕಾರ ಈಗ ಸಮಯ ಬದಲಿಸಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮಾತ್ರ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ ಮಾಡುವುದಾಗಿ ಹೇಳಿತ್ತು. ಆದರೆ, ಈಗ ಸರ್ಕಾರ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಸಂಜೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಈ ವಿಚಾರ ಹೊರ ಬಿದ್ದಿದೆ.
ಕರ್ಫ್ಯೂ ಜಾರಿ ಸಮಯದಲ್ಲೂ ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಈ ಮೊದಲು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಲಾಗಿತ್ತು. ಈಗ ಸಮಯ ಬದಲಾವಣೆ ಆಗಿದ್ದು, ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮಾತ್ರ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಡಿಸೆಂಬರ್ 25ರಂದು ಕ್ರಿಸ್ಮಸ್ ಆಚರಣೆ ಮಾಡಲಾಗುತ್ತಿದೆ. ನೈಟ್ ಕರ್ಫ್ಯೂನಿಂದ ಕ್ರಿಸ್ಮಸ್ ಆಚರಣೆಗೆ ತೊಂದರೆ ಆಗಲಿದೆ ಎನ್ನಲಾಗಿತ್ತು. ಆದರೆ, ಕ್ರಿಸ್ಮಸ್ ವೇಳೆ ಧಾರ್ಮಿಕ ಕಾರ್ಯಕ್ರಮಕ್ಕೆ ಅಡಚಣೆ ಆಗುವುದಿಲ್ಲ ಎಂದು ಗೈಡ್ಲೈನ್ನಲ್ಲಿ ಹೇಳಲಾಗಿದೆ.
ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ ಆದರೆ ನಿಯಮಗಳು ಏನಿರಲಿದೆ ಎನ್ನುವ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲ ಮೂಡಿತ್ತು. ಅಲ್ಲದೆ, ಕರ್ಫ್ಯೂ ಜಾರಿಗೆ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೂಡ ಮಾಡಿಕೊಳ್ಳಬೇಕಿತ್ತು. ಹೀಗಾಗಿ, ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ.
ರಾತ್ರಿ ವೇಳೆ ಬಸ್, ರೈಲು, ವಿಮಾನ ಸಂಚಾರಕ್ಕೆ ಅವಕಾಶ ಇದೆ. ಹೀಗಾಗಿ ಪ್ರಯಾಣಿಕರನ್ನು ಪಿಕಪ್, ಡ್ರಾಪ್ ಮಾಡಲು ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸರಕು ಸಾಗಣೆಗೆ ಯಾವುದೇ ನಿರ್ಬಂಧವನ್ನು ಸರ್ಕಾರ ಹೇರಿಲ್ಲ.
ಇನ್ನು, 24 ಗಂಟೆ ಕೆಲಸ ನಿರ್ವಹಿಸಬೇಕಾದ ಕೈಗಾರಿಕೆಗಳಿಗೆ ನಿರ್ಬಂಧ ಇಲ್ಲ. ನೈಟ್ ಶಿಫ್ಟ್ನಲ್ಲಿ ಶೇ.50ರಷ್ಟು ಸಿಬ್ಬಂದಿ ಬಳಕೆಗೆ ಅವಕಾಶ ಇದೆ. ರಾತ್ರಿ ಕೆಲಸ ಮುಗಿಸಿ ಸಂಚಾರ ನಡೆಸುವ ಕಾರ್ಮಿಕರಿಗೆ ಕಂಪನಿ ಐಡಿ ಕಾರ್ಡ್ ಕಡ್ಡಾಯ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಪಾರ್ಟಿಗಳಿಗೆ ನಿಷೇಧ:
2021 ಹೊಸವರ್ಷಕ್ಕೆ ಸಾರ್ವಜನಿಕವಾಗಿ ಪಾರ್ಟಿ ಮಾಡುವುದರ ಮೇಲೆ ಸರ್ಕಾರ ನಿರ್ಬಂಧ ವಿಧಿಸಿದೆ. ಕ್ಲಬ್-ಪಬ್-ರೆಸ್ಟೋರೆಂಟ್ ತೆರೆಯಬಹುದು. ಆದರೆ, ಕ್ಲಬ್-ಪಬ್-ರೆಸ್ಟೋರೆಂಟ್‌ನಲ್ಲಿ ನ್ಯೂಇಯರ್ ಪಾರ್ಟಿಗೆ ನಿಷೇಧ ಇರಲಿದೆ. ದೈಹಿಕ ಅಂತರವಿಲ್ಲದೇ ಯಾರೂ ಒಂದೆಡೆ ಸೇರುವಂತಿಲ್ಲ.
Published On - 5:41 pm, Wed, 23 December 20