Corona in Karnataka: ಏಪ್ರಿಲ್ 20ರ ತನಕ ನೈಟ್ ಕರ್ಫ್ಯೂ ಮುಂದುವರಿಕೆ; ಆನಂತರ ಕೊರೊನಾ ತಡೆಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ

ಈಗಿನಂತೆಯೇ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಉಳಿದಂತೆ ಬೇರೆ ಯಾವುದೇ ತೀರ್ಮಾನವನ್ನು ಇಂದು ಕೈಗೊಂಡಿಲ್ಲ. ವಾರದ ಬಳಿಕ ಕುಳಿತು ಮತ್ತೊಮ್ಮೆ ಚರ್ಚೆ ಮಾಡುತ್ತೇವೆ: ಸಿಎಂ ಯಡಿಯೂರಪ್ಪ

Corona in Karnataka: ಏಪ್ರಿಲ್ 20ರ ತನಕ ನೈಟ್ ಕರ್ಫ್ಯೂ ಮುಂದುವರಿಕೆ; ಆನಂತರ ಕೊರೊನಾ ತಡೆಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ
ಸಿಎಂ ಬಿ.ಎಸ್​. ಯಡಿಯೂರಪ್ಪ
Follow us
guruganesh bhat
| Updated By: ಆಯೇಷಾ ಬಾನು

Updated on:Apr 16, 2021 | 12:15 PM

ಬೆಂಗಳೂರು: ಕೊವಿಡ್ ಮಹಾಮಾರಿ ಬೆಂಗಳೂರಿನಲ್ಲಿ ಮಿತಿಮೀರುತ್ತಿದೆ. ಹೀಗಾಗಿ ಒಂದೂವರೆ ಗಂಟೆ ಕಾಲ ತಜ್ಞರ ಜತೆ ಚರ್ಚಿಸಿದ್ದೇವೆ. ಏಪ್ರಿಲ್ 20ರವರೆಗೆ 8 ನಗರಗಳಲ್ಲಿ  ಈಗಿನಂತೆಯೇ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಉಳಿದಂತೆ ಬೇರೆ ಯಾವುದೇ ತೀರ್ಮಾನವನ್ನು ಇಂದು ಕೈಗೊಂಡಿಲ್ಲ. ವಾರದ ಬಳಿಕ ಕುಳಿತು ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಸಲಹೆಯನ್ನು ಸಹ ಪಡೆಯುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕದಲ್ಲಿ ಮಿತಿಮೀರಿ ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ತುರ್ತು ಸಭೆ ಅಂತ್ಯಗೊಂಡಿದೆ.  ಸಿಎಂ ಯಡಿಯೂರಪ್ಪ ಕೊವಿಡ್ ನಿಯಂತ್ರಣ ವಿಚಾರವಾಗಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಬಹುತೇಕ ಖಚಿತಗೊಂಡಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ತುರ್ತು ಸಭೆಯಲ್ಲಿ ಈ ಕುರಿತು ತಜ್ಞರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಗಳಿಗೆ ನಗರದಲ್ಲಿ ಪರಿಸ್ಥಿತಿ ಕೈಮೀರಿದ ಬಗ್ಗೆ ತಜ್ಞರು, ಉನ್ನತ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಬೇರೆ ರಾಜ್ಯಗಳಿಗೆ ನಮ್ಮ ರಾಜ್ಯವನ್ನು ಹೋಲಿಸಬಾರದು.  ನಮ್ಮ ರಾಜ್ಯಕ್ಕೂ ಬೇರೆ ರಾಜ್ಯಕ್ಕೂ ಪರಿಸ್ಥಿತಿ ಬೇರೆ ಇದೆ. ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಸಲಹೆಯನ್ನು ಪಡೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ಖಾಸಗಿ ಆಸ್ಪತ್ರೆಗಳಿಂದ ಬೆಡ್ ಪಡೆಯುವ ಸಂಬಂಧ ಚರ್ಚೆ ನಡೆಸಲಾಗುವುದು . ಕೊರೊನಾ ಸಂಬಂದಿಸಿದಂತೆ ಅವಲೋಕನ ಮಾಡಲು ಸಿಎಂ  ಯಡಿಯೂರಪ್ಪ ಇಂದು ಸಭೆ ನಡೆಸಿದ್ದಾರೆ. ಸಭೆಯ ನಂತರ ಏನೆಲ್ಲ ಮಾಡಬೇಕು ಅಂತಾ ಮಾಹಿತಿ ನೀಡಿದ್ದಾರೆ. ನಗರ ಮಟ್ಟದಲ್ಲಿ ಇರುವ ಬೆಡ್ ಗಳ ಸಂಖ್ಯೆ ಹೇಗೆ ಹೆಚ್ಚಳ ಮಾಡಬೇಕಿದೆ. ಖಾಸಗಿ ಆಸ್ಪತ್ರೆಗಳಿಂದ ಬೆಡ್ ಪಡೆಯುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್​ನ ತಡೆಗಟ್ಟಲು ತೆಗೆದುಕೊಂಡ ನಿರ್ಣಯಗಳು ಹೀಗಿವೆ. 1.ಕಾರ್ಪೋರೇಟ್ ವಲಯದ ಆಸ್ಪತ್ರೆಗಳು ತಮ್ಮ ಹತ್ತಿರದ ಹೋಟೆಲ್​ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ನೋಡಿಕೊಳ್ಳಲು ತಾತ್ಕಾಲಿಕ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ವಹಿಸುವುದು. 2.ಹೆಚ್ಚು ರೋಗ ಲಕ್ಷಣಗಳುಳ್ಳ ಅಗತ್ಯವಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವುದು. 3.ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ರೋಗಿಗಳಿಗೆ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳುವುದು. 4.ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು. 5.ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು. 6.ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು. 7.ಅಗತ್ಯವಿರುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಐ.ಪಿ.ಎಸ್. ಮತ್ತು ಐ.ಎ.ಎಸ್. ಅಧಿಕಾರಿಗಳನ್ನು ಹಾಗೂ ಬಿ.ಡಬ್ಲ್ಯೂ.ಎಸ್.ಎಸ್.ಬಿ., ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸುವುದು. 8.ಕೊರೊನಾ ವೈರಸ್​ನಿಂದ ತೀವ್ರತರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಉಳಿದಂತೆ ಕೊರೋನಾ ಲಕ್ಷಣಗಳಿಲ್ಲದ ರೋಗಿಗಳಿಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವುದು ಹಾಗೂ ಅಗತ್ಯವಿರುವಷ್ಟು ದಿನಗಳು ಮಾತ್ರ ರೋಗಿಗಳನ್ನು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಗುಣಮುಖರಾದ ಕೂಡಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದು. 9.ರಾಜ್ಯದಲ್ಲಿ ಸದ್ಯಕ್ಕೆ Remdesivir ಕೊರತೆ ಇರುವುದಿಲ್ಲ. ಆದಾಗ್ಯೂ ಹೆಚ್ಚುವರಿ ಡೋಸ್ಗಳನ್ನು ಖರೀದಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸಿ ಹೆಚ್ಚುವರಿ ಡೋಸ್ಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವುದು. 10.ಪ್ರಸಕ್ತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದಿಲ್ಲ. ಆದಾಗ್ಯೂ 5,000 ಆಕ್ಸಿಜನ್ ಸಿಲಿಂಡರ್ಗಳ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದು. 11.ಪದೇ ಪದೇ ಆಕ್ಸಿಜನ್ ಸಿಲಿಂಡರ್ಗಳ ಬದಲಾವಣೆ ತಪ್ಪಿಸಲು ಜಂಬೋ ಸಿಲಿಂಡರ್ಗಳನ್ನು ಖರೀದಿಸಲು ಕೂಡಲೇ ಕ್ರಮ ಕೈಗೊಳ್ಳುವುದು. 12.ಈಗಾಗಲೇ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದು, ಅದೇ ರೀತಿಯಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಟೆಂಡರ್ ಕರೆದಿದ್ದು, ಕೂಡಲೇ ಅದನ್ನು ಅಂತಿಮಗೊಳಿಸಿ ಘಟಕ ಸ್ಥಾಪಿಸಲು ತ್ವರಿತ ಕ್ರಮ ಕೈಗೊಳ್ಳುವುದು. 13.ಫ್ರಂಟ್ಲೈನ್ ವರ್ಕರ್ಗಳಾದ ವೈದ್ಯರು, ನರ್ಸ್ಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕೂಡಲೇ ಕ್ರಮ ಕೈಗೊಳ್ಳುವುದು. 14.ರಾಜ್ಯಾದ್ಯಂತ ಕಾಟ್ಯಾಂಕ್ಟ್ ಟ್ರೇಸಿಂಗ್​ ತ್ವರಿತಗೊಳಿಸುವುದು. 15.ಹೋಮ್ ಐಸೋಲೇಷನ್ ಇರುವ ರೋಗಿಗಳಿಗೆ ಮುದ್ರೆ ಹಾಕಲು ಕ್ರಮ ಕೈಗೊಳ್ಳುವುದು. 16.ಪ್ರತಿದಿನ ನಡೆಸುವ ಕೋವಿಡ್ ಟೆಸ್ಟ್ ಪಲಿತಾಂಶವು (ಟೆಸ್ಟ ರಿಪೋರ್ಟ) 24 ಗಂಟೆಯೋಳಗಾಗಿ ತಪ್ಪದೇ ಲಭ್ಯವಾಗುವಂತೆ ಕ್ರಮವಹಿಸಲಾವುದು ಮತ್ತು ಟೆಸ್ಟಿಂಗ್ ಅವಧಿಯನ್ನು ಇನ್ನೂ ಕಡಿಮೆಗೊಳಿಸಲು ಕೂಡಲೇ ಅಗತ್ಯ ಕ್ರಮ ವಹಿಸುವುದು. 17.ಕಂಟೈನ್ಮೆಂಟ್ ಝೋನ್ಗಳನ್ನು ಮತ್ತು ಮೈಕ್ರೋ ಕಂಟೈನ್ಮೆಂಟ್ ಝೋನ್ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು. 18.ಅನಗತ್ಯವಾಗಿ ಜನ ಗುಂಪು ಸೇರುವುದನ್ನು ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳುವುದು. 19.ಬೇಡಿಕೆಗನುಗುಣವಾಗಿ ಉಚಿತವಾಗಿ 108 ಸೇರಿದಂತೆ ಅಗತ್ಯ ಆಂಬುಲೆನ್ಸ್ ಗಳನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೆಂದ್ರಗಳಲ್ಲೂ ಲಭ್ಯವಿರುವಂತೆ ನೋಡಿಕೊಳ್ಳುವುದು. 20.ಬೆಂಗಳೂರು ನಗರದಲ್ಲಿ ಒಟ್ಟಾರೆಯಾಗಿ 400 ಆಂಬ್ಯೂಲೆನ್ಸ್ಗಳನ್ನು ಕೋವಿಡ್ ರೋಗಿಗಳಿಗೋಸ್ಕರ ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು. 21.ಬೆಂಗಳೂರು ನಗರದಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಸಾಗಿಸಲು 49 ಆಂಬ್ಯೂಲೆನ್ಸ್ಗಳನ್ನು ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು. 22.ಚಿತಾಗಾರಗಳಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಅಂತ್ಯ ಕ್ರಿಯೆಯನ್ನು ಉಚಿತವಾಗಿ ನೆರವೇರಿಸುವುದು. 23.ಬಿ.ಬಿ.ಎಂ.ಪಿ. ಯು ತನ್ನ ಎಲ್ಲಾ ವಲಯಗಳ ಮತ್ತು ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸಿ ಕೋವಿಡ್ ರೋಗಿಗಳ ಸಹಾಯಕ್ಕೆ ಸದಾ ಬದ್ಧರಾಗಿರುವಂತೆ ಕ್ರಮ ವಹಿಸುವುದು ಹಾಗೂ ಸಹಾಯವಾಣಿಗಳಿಗೆ ನುರಿತ ವ್ಯಕ್ತಿಗಳನ್ನು ನೇಮಿಸಿ ಸದೃಢಗೊಳಿಸುವುದು.

ಇದನ್ನೂ ಓದಿ: ಒಂದೇ ಬೆಡ್​ನಲ್ಲಿ ಇಬ್ಬರಿಗೆ ಚಿಕಿತ್ಸೆ, ಆಸ್ಪತ್ರೆ ಹೊರಗೆ ಹೆಣಗಳು; ಕೊರೊನಾದಿಂದ ಪರಿಸ್ಥಿತಿ ಭೀಕರ

Rocking Star Yash : ಬಸ್ ಡ್ರೈವರ್ ಅಪ್ಪನ ಬಗ್ಗೆ ಯಶ್ ಭಾವುಕ ನುಡಿ

(Night curfew in Karnataka is continue till april 20 says CM BS Yediyurappa after surge of covid 19 cases in state )

Published On - 11:07 am, Fri, 16 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್