AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಈ ಸಂಬಂಧ ಸುದೀರ್ಘ ಸರಣಿ ಸಭೆ ನಡೆಸಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ. ಇದರ ಮಧ್ಯೆ ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಡಿಕೆ ಶಿವಕಿಮಾರ್ ಗೇಟ್‌ಪಾಸ್ ನೀಡಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌
ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ
ರಮೇಶ್ ಬಿ. ಜವಳಗೇರಾ
|

Updated on: May 27, 2026 | 7:02 PM

Share

ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್ ಕೊಟ್ಟಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR) ಸಭೆಗೆ ಗೈರು ಹಾಜರಿ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿದ್ದಾರೆ.

ಮುಖ್ಯಾಂಶಗಳು

  • ಎಸ್​ಐಆರ್​ ಸಭೆಗೆ ಹಾಜರಾಗದ ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್​ಪಾಸ್
  • ಮೂವರು ಉಪಾಧ್ಯಕ್ಷರು, 29 ಪ್ರಧಾನ ಕಾರ್ಯದರ್ಶಿ ಹುದ್ದೆಗಳಿಂದ ಬಿಡುಗಡೆ
  • ಸಭೆಗೆ ಹಾಜರಾಗದ ಬಗ್ಗೆ ಗಂಭೀರವಾಗಿ ತೆಗೆದುಕೊಂಡಿದ್ದ ಸುರ್ಜೇವಾಲ
  • ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ ಸೇರಿ ಒಟ್ಟು 31 ಗೇಟ್​ಪಾಸ್​ ನೀಡಿದ ಕೆಪಿಸಿಸಿ

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ, ಶಿವಮೂರ್ತಿ ನಾಯಕ್, ಎಂ ಸಿ ವೇಣುಗೋಪಾಲ್, ಷಣ್ಮುಖ ಶಿವಳ್ಳಿ, ಸಿಆರ್ ಮನೋಹರ್ ಸೇರಿದಂತೆ ಮೂವರು ಕೆಪಿಸಿಸಿ ಉಪಾಧ್ಯಕ್ಷರು, 29 ಪ್ರಧಾನ ಕಾರ್ಯದರ್ಶಿಗಳಿಗೆ ಡಿಕೆಶಿವಕುಮಾರ್ ಗೇಟ್ ಪಾಸ್ ನೀಡಿದ್ದಾರೆ.ತಕ್ಷಣವೇ ಈ ನಾಯಕರನ್ನು ಪಕ್ಷದ ಹುದ್ದೆಯಿಂದ ಕೈ ಬಿಡಲಾಗಿದೆ ಎಂದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ನೋಡಿ: Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ

ಪದಾಧಿಕಾರಿಗಳನ್ನ ಕಿತ್ತಾಕಿದ್ದೇಕೆ?

ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿಎಸ್‌ಐಆರ್‌ ಪ್ರಕ್ರಿಯೆ, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ ಕುರಿತ ಪೂರ್ವಭಾವಿ ಸಭೆಯ ನಡೆದಿತ್ತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಲಾ ಸಹ ಭಾಗಿಯಾಗಿದ್ದರು. ಆದ್ರೆ, ಕೆಲ ಪದಾಧಿಕಾರಿಗಳು ಗೈರಾಗಿದ್ದು, ಇದಕ್ಕೆ ಸುರ್ಜೆವಾಲ ಆಕ್ರೋಶೊಂಡಿದ್ದರು. ಅಲ್ಲದೇ ಅವರು ಪಕ್ಷದ ಸಭೆ ಗೈರಾಗಿರುವ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಈ ಸೂಚನೆಯ ಬೆನ್ನಲ್ಲೇ ಗೈರಾಗಿರುವ ನಾಯಕರಿಗೆ ಗೇಟ್‌ಪಾಸ್‌ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ಕರ್ನಾಟಕದಲ್ಲೂ ಎಸ್ ಐ ಆರ್ ಪ್ರತಿಕ್ರಿಯೆ ಆರಂಭಗೊಳ್ಳುತ್ತಿದೆ. ಎಸ್ ಐ ಆರ್ ಆರಂಭಕ್ಕೂ ಮೊದಲೇ ಈ ಪ್ರಕ್ರಿಯೆಯ ಬಗ್ಗೆ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳದಲ್ಲಿ ಎಸ್ ಐ ಆರ್ ಕುರಿತಾಗಿ ಕೇಳಿಬಂದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ಅಲರ್ಟ್ ಆಗಿದ್ದಾರೆ. ಈಗಾಗಲೇ ತಳಮಟ್ಟದಲ್ಲಿ ಎಸ್ ಐ ಆರ್ ಬಗ್ಗೆ ಜಾಗೃತಿ ಮೂಡಿಸುವ ಪ್ರಕ್ರಿಯೆಯೂ ನಡೆಯುತ್ತಿದೆ.

ಹೇಗಿದೆ ನಡೆಯಲಿದೆ ಪ್ರಕ್ರಿಯೆ?

ಇನ್ನು ಕರ್ನಾಟಕದಲ್ಲಿ ಜೂನ್ 20 ರಂದು ಎಸ್‌ಐ ಆರ್‌ ಕುರಿತಾಗಿ ಸಿಬ್ಬಂದಿಗೆ ತರಬೇತಿ ನಡೆಯಲಿದೆ. ಜೂನ್ 30 ರಿಂದ ಬಿ ಎಲ್‌ ಒ ಗಳು ಮನೆಗಳಿಗೆ ಭೇಟಿ ನೀಡಲಿದ್ದಾರೆ. ಈ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ