ಕಳೆದ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಸೇರಿ ಕೆಲಸ ಮಾಡಿದ್ದರಿಂದ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲಾಗಿತ್ತು: ಹೆಚ್ ಡಿ ಕುಮಾರಸ್ವಾಮಿ

ಕಳೆದ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಸೇರಿ ಕೆಲಸ ಮಾಡಿದ್ದರಿಂದ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲಾಗಿತ್ತು: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 11, 2024 | 11:38 AM

ರಾಜಕಾರಣದಲ್ಲಿ ಇನ್ನೂ ಪಳಗಬೇಕಿರುವ ಮತ್ತು ಈ ಕ್ಷೇತ್ರದಲ್ಲಿ ಇದುವರೆಗೆ ಗಮನ ಸೆಳೆಯುವ ಯಾವುದೇ ಸಾಧನೆ ಮಾಡದ ನಿಖಿಲ್ ಕುಮಾರಸ್ವಾಮಿ ಮೇಲೆ ಕುಮಾರಸ್ವಾಮಿ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿರುವಂತಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯಕರ್ತರೊಂದಿಗೆ ನಿಖಿಲ್ ಸಭೆಗಳನ್ನು ನಡೆಸುತ್ತಿದ್ದಾರೆಯೇ ಹೊರತು ಕುಮಾರಸ್ವಾಮಿ ಅಲ್ಲ. ಬಿಜೆಪಿ ಜೊತೆ ಹೊಂದಾಂಣಿಕೆ ಮಾಡಿಕೊಂಡಿದ್ದು ಪಕ್ಷದ ಅನೇಕ ಕಾರ್ಯಕರ್ತಯರಿಗೆ ಇಷ್ಟವಾಗಿರದ ಕಾರಣ ಅವರಿಗೆ ಮುಖ ತೋರಿಸಲು ಕುಮಾರಸ್ವಾಮಿ ಹಿಂಜರಿಯುತ್ತಿದ್ದಾರೆಯೇ?

ಚಿಕ್ಕಮಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಚಿಕ್ಕಮಗಳೂರು ಜಿಲ್ಲೆ ಪ್ರವಾಸದಲ್ಲಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮುಂಬರುವ ಲೋಕಸಭಾ ಚುನಾವಣೆಗಾಗಿ (Lok Sabha polls) ತಮ್ಮ ಪಕ್ಷ ತಯಾರಿಗಳನ್ನು ಶುರುವಿಟ್ಟುಕೊಂಡಿದೆ ಎಂದು ಹೇಳಿದರು. ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕೋಲಾರದಲ್ಲಿ ನಿನ್ನೆ ಸಾಯಂಕಾಲ 6 ಗಂಟೆಯವರೆಗೆ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದಾರೆ ಮತ್ತು ಇವತ್ತು ಮಂಡ್ಯದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ತಯಾರಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಅವರು, ಈ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸಿದರೂ ಗೆಲ್ಲುವ ವಾತಾವರಣವಿದೆ. ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಥಿತಿ ಭಿನ್ನವಾಗಿತ್ತು. ಕಾಂಗ್ರೆಸ್, ಬಿಜೆಪಿ ಜೊತೆಯಾಗಿ ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡಿದ್ದರಿಂದ ನಿಖಿಲ್ ಕುಮಾರಸ್ವಾಮಿಗೆ ಸೋಲುಂಟಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು. ಬಸನಗೌಡ ಪಾಟೀಲ್  ಯತ್ನಾಳ್ ಸೇರಿದಂತೆ ಎಲ್ಲ ಬಿಜೆಪಿ ನಾಯಕರು ತನ್ನೊಂದಿಗೆ ಸ್ನೇಹದಿಂದಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ