2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ  ನಿಖಿಲ್ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ನಿಖಿಲ್ ಕುಮಾರಸ್ವಾಮಿ ಮತ್ತಿತರರಿಂದ ಪಿಐಎಲ್​ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಙಾನ ಬಳಸಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ ಎಂದಿದ್ದಾರೆ.

2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ
ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Feb 01, 2024 | 9:01 PM

ಬೆಂಗಳೂರು, ಫೆಬ್ರುವರಿ 1: 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (nikhil kumaraswamy) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸಿಜೆ ದಿನೇಶ್ ಕುಮಾರ್, ನ್ಯಾ.ಶಿವಶಂಕರೇಗೌಡ ಅವರಿದ್ದ ಪೀಠ ನೋಟಿಸ್ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಲೋಕ ಚುನಾವಣೆ: ಬಿಜೆಪಿ ಮಾಸ್ಟರ್ ಪ್ಲ್ಯಾನ್, ಹಳೆ ಮೈಸೂರು ಭಾಗದ ಮೇಲೆ ಕಣ್ಣು, ಪಕ್ಷ ಸಂಘಟನೆಗೆ ಮುಂದಾದ ಬಿಜೆಪಿ ನೂತನ ಸಾರಥಿ

60 ಸಾವಿರ ಗ್ಯಾರಂಟಿ ಕಾರ್ಡ್​ಗಳನ್ನ ಮನೆ ಮನೆಗೆ ಹೋಗಿ ವಿತರಣೆ ಮಾಡಲಾಗಿದೆ. ಕಾರ್ಡ್​ನ್ನ ಎಟಿಎಮ್ ರೀತಿ ಬಳಸಬಹುದು. ಅದರಲ್ಲಿ ಗಿಫ್ಟ್​​ನ್ನ ಖರೀದಿ ಮಾಡಬಹುದು ಎಂದು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಮತದಾನ ಬಳಿಕ ಕಾರ್ಡ್ ಬಳಸಬಹುದೆಂದು ಸುಳ್ಳು ಭರವಸೆ ನೀಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ವ್ಯತ್ಯಾಸ ಆಗಿದೆ. ಮತಕ್ಕೆ ಪ್ರಚಾರ ಆಗಿದ್ದರೇ, ಬಾರ್ ಕೋಡ್ ಯಾಕೆ ಪ್ರಿಂಟ್ ಮಾಡಿದ್ದರು, ಮತದಾರರಿಗೆ ದಾರಿ ತಪ್ಪಿಸುವ ಕೆಲಸ ಆಗಿದೆ ಎನ್ನಲಾಗಿದೆ.

ಪ್ರಮೋದ್ ಸಾವಂತ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ನಿನ್ನೆ ಗೋವಾ ಸಿಎಂ ಪ್ರಮೋದ್ ಸಾವಂತ್​ ಅವರುನ್ನು ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಮೈತ್ರಿ ಸೀಟ್ ಹಂಚಿಕೆ ಬಗ್ಗೆ ಮಾತುಕತೆ ಮಾಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ಪ್ರಾಥಮಿಕ ಮಾತುಕತೆ ಜವಾಬ್ದಾರಿಯನ್ನು ನಿಖಿಲ್​ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನೀಡಿದ್ದಾರೆ. ಈ ಹಿನ್ನಲೆ ಗೋವಾ ಸಿಎಂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸಚಿವ ಚಲುವರಾಯಸ್ವಾಮಿ ಪತ್ನಿ ಸ್ವರ್ಧೆ? ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಧನಲಕ್ಷ್ಮೀಗೆ ಫಿಕ್ಸ್?

ಮಾತುಕತೆ ವೇಳೇ ನಾಲ್ಕು ಸ್ಥಾನಕ್ಕೆ ಬೇಡಿಕೆ ಜೆಡಿಎಸ್ ಇಟ್ಟಿದ್ದಾರೆ. ಈ ಸಂಬಂದ ಮತ್ತೊಂದು ಸುತ್ತಿನ ಮಾತುಕತ ಸಾಧ್ಯತೆ ಇದೆ. ಫೆಬ್ರುವರಿ 3ರಂದು ನಿಖಿಲ್ ಅಥವಾ ಹೆಚ್​ಡಿ ಕುಮಾರಸ್ವಾಮಿ ದೆಹಲಿ ಭೇಟಿ ಸಾಧ್ಯತೆ ಇದೆ. ಜೆಡಿಎಸ್ ನಾಯಕರು ಕೇಂದ್ರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾಗಲಿದ್ದಾರೆ. ಜನವರಿ 16 ಮತ್ತು 16 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಿನ್ನಲೆ ಜನವರಿ 18 ರಂದು ಅಧಿಕೃತ ಸೀಟು ಹಂಚಿಕೆ ಘೋಷಣೆ ನಿರೀಕ್ಷೆ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ಸೀಟು ಹಂಚಿಕೆ ಪ್ರಕ್ರಿಯೆ ಕೊನೆ ಹಂತ ತಲುಪಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್