10 ಕ್ಷಯ ರೋಗಿಗಳ ದತ್ತು: ಪ್ರಧಾನಿ ಮೋದಿ ಆಶಯದ ಕ್ಷಯಮುಕ್ತ ಭಾರತ ಅಭಿಯಾನಕ್ಕೆ ಕೈ ಜೋಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

| Updated By: ಸಾಧು ಶ್ರೀನಾಥ್​

Updated on: Sep 23, 2022 | 9:28 PM

tuberculosis patients: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 10 ಕ್ಷಯ ರೋಗಿಗಳನ್ನ ದತ್ತು ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕ್ಷಯರೋಗ ಮುಕ್ತ ಭಾರತ ಅಭಿಯಾನಕ್ಕೆ ಪ್ರೇರಣೆ ನೀಡಿದ್ದಾರೆ.

10 ಕ್ಷಯ ರೋಗಿಗಳ ದತ್ತು: ಪ್ರಧಾನಿ ಮೋದಿ ಆಶಯದ ಕ್ಷಯಮುಕ್ತ ಭಾರತ ಅಭಿಯಾನಕ್ಕೆ ಕೈ ಜೋಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಧಾನಿ ಮೋದಿ ಆಶಯದ ಕ್ಷಯಮುಕ್ತ ಭಾರತ ಅಭಿಯಾನಕ್ಕೆ ಕೈ ಜೋಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us on

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು ಕರೆ ನೀಡಿರುವ ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕೈ ಜೋಡಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 10 ಕ್ಷಯ ರೋಗಿಗಳನ್ನ (tuberculosis patients) ದತ್ತು ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕ್ಷಯರೋಗ ಮುಕ್ತ ಭಾರತ ಅಭಿಯಾನಕ್ಕೆ ಪ್ರೇರಣೆ ನೀಡಿದ್ದಾರೆ.

ಭಾರತದಲ್ಲಿ ಪ್ರತಿ ವರ್ಷ ಅಂದಾಜು 26 ಲಕ್ಷ ಕ್ಷಯರೋಗ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಸುಮಾರು 4.45 ಲಕ್ಷ ಜನ ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಇಂದಿಗೂ ಭಾರತದಲ್ಲಿ ಕ್ಷಯರೋಗ ನಿರ್ಮೂಲನೆ ಸವಾಲಾಗಿ ಪರಿಣಮಿಸಿದೆ.

2025 ರ ವೇಳೆಗೆ ಭಾರತವನ್ನ ಕ್ಷಯರೋಗ ಮುಕ್ತವನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನ ರೂಪಿಸಿದೆ. ಟಿ.ಬಿ ಮುಕ್ತ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಕ್ಷಯ ರೋಗದ ವಿರುದ್ಧದ ಹೋರಾಟವನ್ನು ಜನಾಂದೋಲನ ಮಾದರಿಯಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಭಿಯಾನ ಬೆಂಬಲಿಸಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಭಿಯಾನದಲ್ಲಿ ಎಲ್ಲರು ಭಾಗಿಯಾಗಿ ಕ್ಷಯರೋಗದ ಕುರಿತು ಜಾಗೃತರಾಗಲು ಮನವಿ ಮಾಡಿದ್ದಾರೆ.

ಮಹತ್ವದ ಅಭಿಯಾನಕ್ಕಾಗಿ ಕೇಂದ್ರ ಅರೋಗ್ಯ ಸಚಿವಾಲಯ Ni-kshay 2.0 Platform ಆರಂಭಿಸಿದ್ದು, http://communitysupport.nikshay.in ವೆಬ್ ಸೈಟ್ ಗೆ ಭೇಟಿ ನೀಡಿ ನೋಂದಾಯಿಸಿಕೊಂಡು ನೀವು “ನಿಕ್ಷಯ ಮಿತ್ರ” ರಾಗಿ.. ” ಬನ್ನಿ ಭಾರತವನ್ನು ಕ್ಷಯ ಮುಕ್ತಗೊಳಿಸೋಣ” ಎಂದು ಸಚಿವ ಪ್ರಲ್ಹಾದ್ ಜೋಶಿ ತಮ್ಮ ಟ್ವೀಟರ್ ನಲ್ಲಿ ಕರೆ ನೀಡಿದ್ದಾರೆ.