ಕೋಲಾರ ದೇವರಾಜ ಅರಸು ಮೆಡಿಕಲ್ ಕಾಲೇಜಿನ 93 ವಿದ್ಯಾರ್ಥಿ/ಸಿಬ್ಬಂದಿಗೆ ಸೋಂಕು
ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಒಟ್ಟು 503 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 93ಜನ ಕೊರೊನಾ ವರದಿ ಪಾಸಿಟಿವ್ ಬಂದಿದೆ.
ಕೋಲಾರ: ಜಿಲ್ಲೆಯ ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ನರ್ಸಿಂಗ್ ಕಾಲೇಜಿನ ಒಟ್ಟು 93 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೊರ ರಾಜ್ಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಒಟ್ಟು 503 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 93ಜನ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕಿತರನ್ನು ಹಾಸ್ಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ಕೇರಳಾದಿಂದ ಬಂದಿದ್ದ 27 ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಪಶ್ಚಿಮ ಬಂಗಾಳದ ಓರ್ವ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈಗ ಮತ್ತೆ 93ರಲ್ಲಿ ಸೋಂಕು ಕಾಣಿಸಿಕೊಂಡಿರುವುದು ನರ್ಸಿಂಗ್ ಕಾಲೇಜು ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಸೋಂಕಿತರ ಪತ್ತೆ ಹಚ್ಚುವ ಕಾರ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಿಂದ ಮುಂದುವರೆದಿದೆ.
27 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿದ ಆತಂಕ