ಕೇರಳದಲ್ಲಿ ನಿಫಾ ವೈರಸ್ ಪತ್ತೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ

Nipah Virus: ಹಣ್ಣುಗಳನ್ನು ಚೆನ್ನಾಗಿ ತೊಳೆದು ಸೇವಿಸಿ. ಪ್ರಾಣಿ, ಪಕ್ಷಿಗಳು ಕಚ್ಚಿದ ಹಣ್ಣು ಸೇವಿಸಬೇಡಿ. ಜ್ವರ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದಲ್ಲಿ ತಪಾಸಣೆ ನಡೆಸಿ ಡಿಹೆಚ್ಒ ವೆಂಕಟೇಶ್ ಹೇಳಿದ್ದಾರೆ.

ಕೇರಳದಲ್ಲಿ ನಿಫಾ ವೈರಸ್ ಪತ್ತೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ
ನಿಫಾ ವೈರಸ್​
TV9kannada Web Team

| Edited By: ganapathi bhat

Sep 07, 2021 | 3:05 PM

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಅಧಿಕವಾಗಿದೆ. ಹೀಗಾಗಿ ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ. ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹ ನಡೆಯುತ್ತಿದೆ. ಬಳಿಕ ಬಿಬಿಎಂಪಿ, ಜಿಲ್ಲಾ ಕೇಂದ್ರದಕ್ಕೆ ಮಾಹಿತಿ ರವಾನೆ ಮಾಡಲಾಗುತ್ತಿದೆ. ಈ ಸಂಬಂಧ, ಬೆಂಗಳೂರು ಗ್ರಾಮಾಂತರ ಜಿಲ್ಲಾದಿಕಾರಿಯಿಂದ ಪರಿಶೀಲನೆ ನಡೆಸಲಾಗಿದೆ.

ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್, ಎಸಿ ಅರುಣ್ ಕುಮಾರ್ ನೇತೃತ್ವದ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ 500 ರಿಂದ 600 ಪ್ರಯಾಣಿಕರು ಕೇರಳದಿಂದ ಬರುತ್ತಿದ್ದು ಎಲ್ಲರ ಮೇಲೆಯೂ‌ ನಿಗಾ ವಹಿಸಲಾಗುತ್ತಿದೆ.

ನಿಫಾ ರೋಗ ಲಕ್ಷಣ ಪತ್ತೆಗಾಗಿ ಥರ್ಮಲ್ ಸ್ಕ್ಯಾನಿಂಗ್ ಕೇರಳದಲ್ಲಿ ಮತ್ತೆ ಪತ್ತೆ ಆಗಿರುವ ನಿಫಾ ಕುರಿತು ಗಡಿ ಜಿಲ್ಲೆಗಳಲ್ಲಿ ಅಧಿಕ ಎಚ್ಚರ ವಹಿಸಲಾಗುತ್ತಿದೆ. ರೋಗ ಲಕ್ಷಣ ಪತ್ತೆಗಾಗಿ ಥರ್ಮಲ್ ಸ್ಕಾನಿಂಗ್ ನಡೆಸಲಾಗುತ್ತಿದೆ. ಈ ಬಗ್ಗೆ, ತಲಪಾಡಿ ಗಡಿಭಾಗದಲ್ಲಿ ಎಸಿಪಿ ರಂಜಿತ್ ಬಂಡಾರು ಹೇಳಿಕೆ ನೀಡಿದ್ದಾರೆ. ಮಂಗಳೂರು ಹೊರವಲಯದ ತಲಪಾಡಿ ಗಡಿಯಲ್ಲಿ ಸದ್ಯ ಟೆಕ್ನಿಕಲ್ ಆಗಿ ಯಾವುದೇ ತಪಾಸಣೆ ಇಲ್ಲ. ಸದ್ಯ ಥರ್ಮಲ್ ಸ್ಯಾನಿಂಗ್ ಆರಂಭಿಸುತ್ತೇವೆ. ಹಾಗೂ ಉಳಿದ ತಾಂತ್ರಿಕ ವ್ಯವಸ್ಥೆಗಳನ್ನು ಆರೋಗ್ಯ ಇಲಾಖೆ ವ್ಯವಸ್ಥೆ ಮಾಡುತ್ತೆ. ನಿಫಾ ರೋಗ ಲಕ್ಷಣ ಇದ್ದವರನ್ನು ವಾಪಾಸ್ ಕಳಿಸುತ್ತೇವೆ. ಕೊವಿಡ್ ನೆಗೆಟಿವ್ ರಿಪೋರ್ಟ್ ಇದ್ದು ಟೆಂಪರೇಚರ್ ಜಾಸ್ತಿ ಬಂದ್ರು ವಾಪಾಸ್ ಕಳಿಸುತ್ತೇವೆ ಎಂದು ರಂಜಿತ್ ಮಾಹಿತಿ ನೀಡಿದ್ದಾರೆ.

ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ, ಟಿವಿ9ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಸದ್ಯ ಕೊಡಗು ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಜನರು ಆತಂಕಪಡುವುದು ಬೇಡ. ಬಾವಲಿಗಳು ಸತ್ತುಬಿದ್ದಿದ್ದರೆ ಕೂಡಲೇ ಮಾಹಿತಿ ನೀಡಿ. ಆರೋಗ್ಯ ಇಲಾಖೆಗೆ ಮಾಹಿತಿ ನೀಡಲು ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ನಿಫಾಗೆ ಚಿಕಿತ್ಸೆ ನೀಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿ 5, ತಾಲೂಕು ಆಸ್ಪತ್ರೆಯಲ್ಲಿ 2 ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿಕೆ ನೀಡಿದ್ದಾರೆ.

ಹಣ್ಣುಗಳನ್ನು ಚೆನ್ನಾಗಿ ತೊಳೆದು ಸೇವಿಸಿ. ಪ್ರಾಣಿ, ಪಕ್ಷಿಗಳು ಕಚ್ಚಿದ ಹಣ್ಣು ಸೇವಿಸಬೇಡಿ. ಜ್ವರ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದಲ್ಲಿ ತಪಾಸಣೆ ನಡೆಸಿ ಡಿಹೆಚ್ಒ ವೆಂಕಟೇಶ್ ಹೇಳಿದ್ದಾರೆ.

ಇದನ್ನೂ ಓದಿ: Nipah virus ಕೇರಳದ ಮೂರು ಜಿಲ್ಲೆಗಳಲ್ಲಿ ನಿಫಾ ವೈರಸ್ ಎಚ್ಚರಿಕೆ; ನಿಫಾಗೆ ಬಲಿಯಾದ ಬಾಲಕನ ನಿಕಟ ಸಂಪರ್ಕದಲ್ಲಿದ್ದ 8 ಮಂದಿಗೆ ಸೋಂಕು ಇಲ್ಲ

ಇದನ್ನೂ ಓದಿ: Nipah Virus ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ: ರೋಗ ಲಕ್ಷಣಗಳೇನು? ತಡೆಯುವುದು ಹೇಗೆ?

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada