AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವೆ ನಿರ್ಮಲಾ ಸೀತಾರಾಮನ್​​ಗೂ ಡೀಪ್‌ಫೇಕ್ ಕಾಟ: ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವೀಡಿಯೊ ವೈರಲ್ ಆಗಿದೆ. ಹಣಕಾಸು ಹೂಡಿಕೆ ಕುರಿತಂತೆ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗಿದೆ. ಇದೀಗ ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇಂತಹ ಡೀಪ್‌ಫೇಕ್ ವೀಡಿಯೊಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು, ಆರ್ಥಿಕ ನಷ್ಟ ತಪ್ಪಿಸಲು ಮಾಹಿತಿ ಪರಿಶೀಲಿಸುವುದು ಅತ್ಯಗತ್ಯ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​​ಗೂ ಡೀಪ್‌ಫೇಕ್ ಕಾಟ: ಬೆಂಗಳೂರಿನಲ್ಲಿ ಪ್ರಕರಣ ದಾಖಲು
ನಿರ್ಮಲಾ ಸೀತಾರಾಮನ್
ಅಕ್ಷಯ್​ ಪಲ್ಲಮಜಲು​​
|

Updated on:Dec 04, 2025 | 9:36 AM

Share

ಬೆಂಗಳೂರು, ಡಿ.4: ಡೀಪ್ ಫೇಕ್ ಕಾಟ ಮತ್ತೆ ಶುರುವಾಗಿದೆ. ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು.  ಇದೀಗ ಮತ್ತೆ ಇದರ ಟ್ರೆಂಡ್​​​ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಟಾರ್ಗೆಟ್​​ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್​​ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಎಫ್ಐಆರ್​​ನಲ್ಲಿ ಏನಿದೆ?

ಭಾರತದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್​​​​ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್​​​ ಬುಕ್​​ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್​​ ಠಾಣೆಯ ಸಬ್​​​​​​ ಇನ್ಸ್​ಪೆಕ್ಟರ್​​​​​ ರಮೇಶ್​​​​ ಎಸ್​​ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್​​​​​​​ ಫೇಕ್​​ ಮಾಡಿ ಅದನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್ಐಆರ್​​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್​ಐಎ ತೀವ್ರ ತನಿಖೆ

ಪ್ರಧಾನಿ ಮೋದಿಗೂ ತಪ್ಪಿಲ್ಲ ಡೀಪ್ ಫೇಕ್ ಕಾಟ:

ಪ್ರಧಾನಿ ನರೇಂದ್ರ ಮೋದಿ ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಮಾಡಿರುವ ವಿಡಿಯೋ ಕೂಡ ವೈರಲ್​​ ಆಗಿತ್ತು. ಇಟಲಿ ಅಧ್ಯಕ್ಷರ ಜತೆಗೆ ಮೋದಿ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿತ್ತು. ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಬಗ್ಗೆ ಪ್ರಧಾನಿ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿದರು. ತಂತ್ರಜ್ಞಾನವನ್ನು ಒಳ್ಳೆಯ ವಿಚಾರಕ್ಕೆ ಬಳಸಿಕೊಳ್ಳಬೇಕು ಎಂದು ಯುವಕರಿಗೆ ಕಿವಿಮಾತು ಕೂಡ ಹೇಳಿದ್ದರು. ನವೆಂಬರ್ 2023 ರಲ್ಲಿ, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಕೂಡ ವೈರಲ್​ ಆಗಿತ್ತು. ಈ ಬಗ್ಗೆ ಅವರು ದೂರು ಕೂಡ ನೀಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 am, Thu, 4 December 25

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್