
ಬೆಂಗಳೂರು, ಡಿ.4: ಡೀಪ್ ಫೇಕ್ ಕಾಟ ಮತ್ತೆ ಶುರುವಾಗಿದೆ. ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ಮತ್ತೆ ಇದರ ಟ್ರೆಂಡ್ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಟಾರ್ಗೆಟ್ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಭಾರತದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್ ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಮೇಶ್ ಎಸ್ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್ ಫೇಕ್ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್ಐಆರ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್ಐಎ ತೀವ್ರ ತನಿಖೆ
ಪ್ರಧಾನಿ ನರೇಂದ್ರ ಮೋದಿ ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಮಾಡಿರುವ ವಿಡಿಯೋ ಕೂಡ ವೈರಲ್ ಆಗಿತ್ತು. ಇಟಲಿ ಅಧ್ಯಕ್ಷರ ಜತೆಗೆ ಮೋದಿ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಬಗ್ಗೆ ಪ್ರಧಾನಿ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿದರು. ತಂತ್ರಜ್ಞಾನವನ್ನು ಒಳ್ಳೆಯ ವಿಚಾರಕ್ಕೆ ಬಳಸಿಕೊಳ್ಳಬೇಕು ಎಂದು ಯುವಕರಿಗೆ ಕಿವಿಮಾತು ಕೂಡ ಹೇಳಿದ್ದರು. ನವೆಂಬರ್ 2023 ರಲ್ಲಿ, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಅವರು ದೂರು ಕೂಡ ನೀಡಿದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:35 am, Thu, 4 December 25