ನನ್ನ ತೆರಿಗೆ ನನಗೆ ಕೊಡಿ ಅಂತಾ ಬೆಂಗಳೂರು ಜನ ಕೇಳಿದ್ರೆ ಏನು ಹೇಳ್ತೀರಿ? ಕಾಂಗ್ರೆಸ್​ಗೆ ನಿರ್ಮಲಾ ಪ್ರಶ್ನೆ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬರ ಪರಿಹಾರ ವಿಚಾರವಾಗಿ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದೆ. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸದ್ಯ ಈ ವಿಚಾರವಾಗಿ ಬೆಂಗಳೂರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದು, ಸುಪ್ರೀಂಗೆ ಹೋಗುವುದಕ್ಕೆ ರಾಜ್ಯ ಸರ್ಕಾರಕ್ಕೆ ಸ್ವತಂತ್ರವಿದೆ, ನಾವು ಸ್ವಾಗತಿಸುತ್ತೇವೆ. ಈ ಹಿಂದೆ ಕೇರಳ ಸರ್ಕಾರ ಸಹ ಸುಪ್ರೀಂಕೋರ್ಟ್‌ಗೆ ಹೋಗಿತ್ತು ಎಂದು ಹೇಳಿದ್ದಾರೆ.

Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 06, 2024 | 5:43 PM

ಬೆಂಗಳೂರು, ಏಪ್ರಿಲ್ 06: ಬರ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ಕೋಲಾರದಲ್ಲಿ ಕೂಡ ಸಿಎಂ ಸಿದ್ದರಾಮಯ್ಯ (Siddaramaiah) ಬರ ಪರಿಹಾರದ ಬಗ್ಗೆ ಮತ್ತೆ ಪ್ರಸ್ತಾಪಿಸಿದ್ದಾರೆ. ಇದೀಗ ಈ ವಿಚಾರವಾಗಿ ನಗದರಲ್ಲಿ ಮಾಧ್ಯಮದವರೊಂದಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದು, ಸುಪ್ರೀಂಗೆ ಹೋಗುವುದಕ್ಕೆ ರಾಜ್ಯ ಸರ್ಕಾರಕ್ಕೆ ಸ್ವತಂತ್ರವಿದೆ, ನಾವು ಸ್ವಾಗತಿಸುತ್ತೇವೆ. ಈ ಹಿಂದೆ ಕೇರಳ ಸರ್ಕಾರ ಸಹ ಸುಪ್ರೀಂಕೋರ್ಟ್‌ಗೆ ಹೋಗಿತ್ತು ಎಂದು ಹೇಳಿದ್ದಾರೆ.

ಬೆಂಗಳೂರು ಜನ ಕೇಳಿದ್ರೆ ಏನು ಹೇಳ್ತೀರಿ?

ಕಾಂಗ್ರೆಸ್‌ ನಾಯಕರಿಂದ ನನ್ನ ತೆರಿಗೆ ನನ್ನ ಹಕ್ಕು ಅಭಿಯಾನ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆ ಇದೆ. KIABನಿಂದ ಬರಲು ಒಂದೂವರೆ ಗಂಟೆ ಬೇಕು, ನಗರ ಅಭಿವೃದ್ಧಿ ಆಗಬೇಕು. ನನ್ನ ತೆರಿಗೆ ನನಗೆ ಕೊಡಿ ಅಂತಾ ಬೆಂಗಳೂರು ಜನ ಕೇಳಿದ್ರೆ ಏನು ಹೇಳ್ತೀರಿ ಎಂದು ಪ್ರಶ್ನಿಸಿದ್ದಾರೆ. ತೆರಿಗೆ ಎನ್ನುವುದು ಒಬ್ಬರ ಹಾಗೂ ಒಂದು ಸ್ಥಳದ ಅಭಿವೃದ್ಧಿಗಾಗಿ ಅಲ್ಲ. ಎಲ್ಲರ ಸಮಾನ ಅಭಿವೃದ್ಧಿಗೆ ಎನ್ನುವುದು ತಿಳಿದಿರಲಿ ಎಂದಿದ್ದಾರೆ.

ಪ್ರಧಾನಿ ಮೋದಿಯವರು ಬರ ಪರಿಹಾರ ವಿಳಂಬ ಮಾಡಲ್ಲ: ನಿರ್ಮಲಾ

ದೇಶದಲ್ಲಿ 12 ರಾಜ್ಯಗಳಲ್ಲಿ ನೈಸರ್ಗಿಕ‌ ವಿಕೋಪಗಳು ಸಂಭವಿಸಿವೆ. ಎಸ್‌ಡಿಆರ್‌ಎಫ್ ಅಡಿ 929.60 ಕೋಟಿ ರೂ. ಅನುದಾನ ಇದೆ. ಇದರಲ್ಲಿ 697 ಕೋಟಿ ರೂ. ಕೇಂದ್ರ ಪಾಲು ಕೊಡಲಾಗಿದೆ. ಈ ಹಣ ಮುಂಚಿತವಾಗಿಯೇ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ಮೋದಿಯವರು ಬರ ಪರಿಹಾರ ವಿಳಂಬ ಮಾಡಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬರ ಪರಿಹಾರದಿಂದ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಟ್ಟ ಸಿದ್ದರಾಮಯ್ಯ: ವಿಜಯೇಂದ್ರ ಗಂಭೀರ ಆರೋಪ

ಬರಕ್ಕೆ ಕೇಂದ್ರ ಹಣ ಕೊಟ್ಟಿಲ್ಲ ಅಂತಾರೆ, ಆದರೆ ಈಗಾಗಲೇ ಎಸ್‌ಡಿಆರ್‌ಎಫ್​ನಲ್ಲಿ ಹಣ ಇದೆ. ಈಗ ಪ್ರಸ್ತಾವನೆ ಸಲ್ಲಿಸಿರುವ ಪರಿಹಾರವೂ ಬರಲಿದೆ. ಈಗಾಗಲೇ ತೆರಿಗೆ ಹಂಚಿಕೆ ಕಳೆದ ಮಾರ್ಚ್​ವರೆಗೆ ಪೂರ್ಣ ಕೊಡಲಾಗಿದೆ. ನಾಲ್ಕು ಪಟ್ಟು ಹೆಚ್ಚು ಕೊಡಲಾಗಿದೆ. 15ನೇ ಹಣಕಾಸು ಆಯೋಗ ತನ್ನ ಮಧ್ಯಂತರ ವರದಿಯಲ್ಲಿ 5495 ರೂ. ವಿಶೇಷ ಅನುದಾನ ಕೊಡಬೇಕು ಅಂತ ಶಿಫಾರಸ್ಸು ಮಾಡಿದ್ದು ಹೌದು. ಆದರೆ ಅಂತಿಮ‌ ವರದಿಯಲ್ಲಿ ಆ ಶಿಫಾರಸು ಇರಲಿಲ್ಲ. ಹಾಗಾಗಿ ಆ ವಿಶೇಷ ಅನುದಾನ ಕರ್ನಾಟಕಕಕ್ಕೆ ಕೊಡುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ.

ಮತ್ತೊಂದು 6000 ಸಾವಿರ ಕೋಟಿ ರೂ. ವಿಶೇಷ ಅನುದಾನ ಕೊಡಬೇಕು ಅಂತಾರೆ, ಅದು ಸುಳ್ಳು. ಹಣಕಾಸು ಆಯೋಗ ಹೇಳದೇ ಹೋದರೂ ರಾಜ್ಯಕ್ಕೆ ಕೇಂದ್ರ 8035.09 ಕೋಟಿ ರೂ. ಬಡ್ಡಿರಹಿತ ಸಾಲ ಕೊಡಲಾಗಿದೆ. ಇದನ್ನ ಕಾಂಗ್ರೆಸ್​ನವರು ಎಲ್ಲೂ ಮಾತನಾಡಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಅವೈಜ್ಞಾನಿಕ ಘೋಷಣೆಗಳಿವೆ: ನಿರ್ಮಲಾ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜಾರಿ ಮಾಡಲಾಗದ ಘೋಷಣೆಗಳಿವೆ. ಹಣಕಾಸು ಮುಗ್ಗಟ್ಟು ಎದುರಾಗುವಂಥ ಉಚಿತ ಯೋಜನೆ ಘೋಷಿಸಲಾಗಿದೆ. ಬೇರೆಬೇರೆ ರಾಜ್ಯಗಳಲ್ಲಿ ಘೋಷಿಸಿರುವ ಉಚಿತ ಸ್ಕೀಂ ಇನ್ನೂ ಜಾರಿ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಅವೈಜ್ಞಾನಿಕ ಘೋಷಣೆಗಳಿವೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್​​ನಲ್ಲಿ ರಿಟ್​ ಅರ್ಜಿ: ಸಿದ್ದರಾಮಯ್ಯ

ಜಲ ಯೋಜನೆಗಳಿಗೆ ಕರ್ನಾಟಕ ಸರ್ಕಾರ ಉತ್ತೇಜನ ಕೊಟ್ಟಿಲ್ಲ. 20 ಸಾವಿರ ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು ಸ್ಥಗಿತವಾಗಿವೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ರಾಜ್ಯಾದ್ಯಂತ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ಕಾಲರ ಸೇರಿದಂತೆ ಕೆಲವು ರೋಗಗಳು ಹಬ್ಬುವ ಆತಂಕ ಇದೆ ಎಂದಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದ ಸಾಕ್ಷಿ ಹೆಸರು ಬಹಿರಂಗ ಸರಿಯಲ್ಲ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು ದುರದೃಷ್ಟಕರ. ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಪ್ರಕರಣ ನಡೆಯಬಾರದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಆರೋಗ್ಯ ಸಚಿವರೇ ಸಾಕ್ಷಿಯ ಮಾಹಿತಿ ಬಹಿರಂಗಪಡಿಸಿದ್ದು ಸರಿಯಲ್ಲ. ಸಾಕ್ಷಿಗಳ ರಕ್ಷಣೆ ಮಾಡಬೇಕೆಂಬ ಕನಿಷ್ಠ ಜ್ಞಾನ ಇಲ್ಲವಾ ಇವರಿಗೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಓಲೈಕೆ ರಾಜಕಾರಣ ನಡೆಯುತ್ತಿದೆ. ಚಾಮರಾಜಪೇಟೆಯಲ್ಲಿ ಪಶುಸಂಗೋಪನೆ  ಇಲಾಖೆಯ ಜಮೀನು ಅಲ್ಪಸಂಖ್ಯಾತ ಇಲಾಖೆಗೆ ಕೊಟ್ಟಿದ್ದೇಕೆ? ಇದು ಓಲೈಕೆ ರಾಜಕಾರಣ ಅಲ್ವಾ ಮಹಿಳೆಯರ ರಕ್ಷಣೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿಲ್ಲ. ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಶಾಮನೂರು ಹೇಳಿಕೆಯನ್ನ ಒಪ್ಪಲ್ಲ. ಮಹಿಳೆ ಕುರಿತು ಶಾಮನೂರು ದೃಷ್ಟಿಕೋನ ಏನೆಂಬುದು ಗೊತ್ತಾಗುತ್ತೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ