Nisha Yogeshwar: ನನ್ನ ಕುಟುಂಬದ ಗುಟ್ಟು ಬಯಲಿಗೆಳೆಯುವೆ; ಅಪ್ಪ ಸಿ.ಪಿ ಯೋಗೇಶ್ವರ್ ಕುರಿತ ಶಾಕಿಂಗ್ ವಿಷಯ ಬಿಚ್ಚಿಟ್ಟ ನಿಶಾ

ತಂದೆ ಸಿಪಿ ಯೋಗೇಶ್ವರ್‌ ವಿರುದ್ಧ ಪುತ್ರಿ ನಿಶಾ ಯೋಗೇಶ್ವರ್​ ವಾಗ್ಧಾಳಿ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಮತ್ತೆ ಅವರ ಮಗಳು ನಿಶಾ ಯೋಗೇಶ್ವರ್ ಅಪ್ಪನ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನನ್ನ ಕುಟುಂಬದ ಎಲ್ಲ ಗುಟ್ಟುಗಳನ್ನೂ ರಟ್ಟು ಮಾಡುವೆ ಎಂದು ಹೇಳಿರುವ ಅವರು 3 ದಿನಗಳಿಂದ ದಿನಕ್ಕೊಂದು ವಿಡಿಯೋ ಹೇಳಿಕೆ ರಿಲೀಸ್ ಮಾಡುತ್ತಿದ್ದಾರೆ.

Follow us
ಸುಷ್ಮಾ ಚಕ್ರೆ
|

Updated on:Oct 24, 2024 | 11:40 AM

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಸಿ.ಪಿ. ಯೋಗೇಶ್ವರ್ ಇದೀಗ ಮತ್ತೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ನಿಂದ ಸಿ.ಪಿ. ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸಲಾಗಿದೆ. ಈ ವೇಳೆ ತಂದೆಯ ವಿರುದ್ಧ ಅವರ ಮಗಳು ನಿಶಾ ಯೋಗೇಶ್ವರ್ ದಿನಕ್ಕೊಂದು ವಿಡಿಯೋ ರಿಲೀಸ್ ಮಾಡುತ್ತಿದ್ದಾರೆ. ಈ ಮೂಲಕ ಅವರು ಅಪ್ಪನ ಗೆಲುವಿಗೆ ಅಡ್ಡಿಯಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ.

ವಿಡಿಯೋ ಹೇಳಿಕೆಯನ್ನು ಫೇಸ್​ಬುಕ್​ನಲ್ಲಿ ಬಿಡುಗಡೆ ಮಾಡಿರುವ ನಿಶಾ ಯೋಗೇಶ್ವರ್, ನಮ್ಮ ಕುಟುಂಬದ ಗುಟ್ಟನ್ನು ರಟ್ಟು ಮಾಡುತ್ತೇನೆ. ನನ್ನ ತಂದೆಯಿಂದ ನಾನು ಸಾಕಷ್ಟು ಅವಮಾನ ಅನುಭವಿಸಿದ್ದೇನೆ. ನಾನು 13 ವರ್ಷದವಳಿದ್ದಾಗ ನನ್ನ ತಂದೆ ಬೇರೊಂದು ಸಂಸಾರವನ್ನು ಕಟ್ಟಿಕೊಂಡಿದ್ದನ್ನು ಪತ್ರಿಕೆಗಳ ಮೂಲಕ ತಿಳಿದುಕೊಂಡೆ. ನನಗೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ನನ್ನ ಸಾರ್ವಜನಿಕ ಬದುಕು ಆರಂಭಗೊಂಡಿದ್ದೇ ಕಾಂಗ್ರೆಸ್ ಪಕ್ಷದಿಂದ: ಸಿಪಿ ಯೋಗೇಶ್ವರ್

ನನ್ನ ಜೀವನವನ್ನು ಮತ್ತೆ ಹೊಸದಾಗಿ ಕಟ್ಟಿಕೊಳ್ಳಲು ಒಬ್ಬಳೇ ಬಾಂಬೆಗೆ ತೆರಳಿ ಕಚೇರಿಗಳಿಗೆ ಅಲೆದೆ. ಯಾವ ಅವಕಾಶಗಳೂ ಸಿಗಲಿಲ್ಲ. ಅಲ್ಲಿಂದ ವಾಪಸ್ ಕರೆಸಿಕೊಳ್ಳಲು ಅಪ್ಪ ತುಂಬಾ ಪ್ರಯತ್ನಪಟ್ಟರು. ಅವರ ಮಾತು ಕೇಳಿ 2016ರಲ್ಲಿ ವಾಪಸ್ ಬಂದೆ. ಅನಂತರ ಅವರ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದೆ. ಇಬ್ಬರೂ ಒಟ್ಟಾಗಿ ಬ್ಯುಸಿನೆಸ್ ಮಾಡೋಣ ಎಂದು ಭರವಸೆ ನೀಡಿದರು. ಇದನ್ನು ನಂಬಿ ನಾನು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಬಹುದು ಎಂದುಕೊಂಡಿದ್ದೆ. ನನಗೆ ಲೋಕಸಭಾ ಚುನಾವಣೆಯ ಟಿಕೆಟ್ ಸಿಗಬಹುದು ಎಂಬ ಚರ್ಚೆಗಳು ಕೂಡ ಆಗಿದ್ದವು. ಅದನ್ನೂ ಕೂಡ ತಂದೆಯೇ ತಪ್ಪಿಸಿದ್ದಾರೆ. ನನಗೆ ನನ್ನ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದೇ ಅರ್ಥವಾಗಲಿಲ್ಲ ಎಂದು ನಿಶಾ ಹೇಳಿದ್ದಾರೆ.

ಅಮೆರಿಕಕ್ಕೆ ಹೋಗಿ 4 ವರ್ಷ ವ್ಯಾಸಂಗ ಮುಗಿಸಿ ವಾಪಸ್ ಬಂದಾಗ ಓದಿದ್ದು ಸಾಕು, ಇಲ್ಲೇ ಬದುಕು ಕಟ್ಟಿಕೋ ಎಂದು ಅಪ್ಪ ಹೇಳಿದರು. ಶಿಕ್ಷಣ ನಿಲ್ಲಿಸಬಾರದು ಎಂದು ಮತ್ತೆ ಅಮೆರಿಕಾಗೆ ಹೋಗಿ ಕೊನೆ ಸೆಮಿಸ್ಟರ್ ಮುಗಿಸಿ ಪದವಿ ಪಡೆದುಕೊಂಡೆ. ಇಲ್ಲಿ ಬಂದು ಕೆಲಸ ಕೊಡಿಸಿ ಎಂದಾಗ 3 ವರ್ಷ ಅಲೆಸಿದರು. ನನ್ನ ತಾಯಿ, ತಮ್ಮನ ಭವಿಷ್ಯದ ಬಗ್ಗೆಯೂ ನನಗೆ ಭಯವಿತ್ತು. ಸಿನಿಮಾದಿಂದ ಬಂದ ಅವಕಾಶವನ್ನು ಕೂಡ ಅವರು ತಪ್ಪಿಸಿದರು ಎಂದು ನಿಶಾ ಹೇಳಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ, ಸಂಡೂರು ಬೈ ಎಲೆಕ್ಷನ್​: ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್​ ಟಿಕೆಟ್‌

ನನಗೆ ಮದುವೆ ಮಾಡಿಸುವುದಾಗಿ ಹೇಳಿ 2 ವರ್ಷ ಸಮಯ ದೂಡಿದರು. ಈ ನಡುವೆ ನನ್ನ ಮಲತಾಯಿ ಶೀಲ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದರು. ಮಗಳ ಮದುವೆಗಾಗಿ ಬ್ರೋಕರ್​ನನ್ನು ಭೇಟಿ ಮಾಡಿಸಿದ ಮೊದಲ ತಂದೆ ಯೋಗೇಶ್ವರ್. ನಿನ್ನ ಹಣೆಬರಹದಲ್ಲಿ ಭಿಕ್ಷೆ ಬೇಡುವುದು ಬರೆದಿದ್ದರೆ ಭಿಕ್ಷೆಯನ್ನೇ ಬೇಡಬೇಕು ಎಂದು ಅಪ್ಪ ಹೇಳಿದ್ದರು. ಅವರು ಹೇಳಿದಂತೆ ನಾನೀಗ ನೆಲೆಯಿಲ್ಲದೆ ರಸ್ತೆಯಲ್ಲಿದ್ದೇನೆ ಎಂದು ನಿಶಾ ಬೇಸರ ಹೊರಹಾಕಿದ್ದಾರೆ.

ನನ್ನ ಅಪ್ಪ ಯಾವ ತಂದೆಯೂ ಮಗಳಿಗೆ ಹೇಳದ ಭಾಷೆ ಬಳಸಿ ನನಗೆ ಬೈಯುತ್ತಿದ್ದರು. ರಕ್ತ ಬರುವಂತೆ ಹೊಡೆಯುತ್ತಿದ್ದರು. ಅವರು ನನ್ನ ಜೀವನವನ್ನೇ ಹಾಳು ಮಾಡಿದರು ಎಂದು ನಿಶಾ ಆರೋಪಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Thu, 24 October 24

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್