Nitin Gadkari: ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್​ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

Bengaluru-Chennai Expressway: ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್​ವೇ ಬೆಂಗಳೂರು ಮತ್ತು ಚೆನ್ನೈನಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸುತ್ತದೆ ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

Nitin Gadkari: ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್​ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್​ವೇ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿImage Credit source: Nitin Gadkari Twitter Page
Follow us
| Updated By: ಸುಷ್ಮಾ ಚಕ್ರೆ

Updated on:Jan 05, 2023 | 11:16 AM

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಇಂದು (ಜನವರಿ 5) ಕರ್ನಾಟಕಕ್ಕೆ ಭೇಟಿ ನೀಡಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ. 10 ಲೇನ್​ನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru-Chennai Expressway) ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ ಕಡಿತಗೊಳಿಸುವ ಗುರಿಯನ್ನು ಹೊಂದಿದೆ. ಇಂದು ಕರ್ನಾಟಕದ ಪಿಡಬ್ಲುಡಿ ಸಚಿವ ಸಿಸಿ ಪಾಟೀಲ್ (CC Patil)  ಅವರೊಂದಿಗೆ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದರು.

ನಾವು 16,730 ಕೋಟಿ ರೂ. ಮೌಲ್ಯದ ಈ 262 ಕಿಮೀ ಉದ್ದದ 8 ಲೇನ್ ಹೆದ್ದಾರಿಯನ್ನು ನಿರ್ಮಿಸುತ್ತಿದ್ದೇವೆ. ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರ 300 ಕಿಮೀ.ಯಿಂದ 262 ಕಿಮೀಗೆ ಕಡಿಮೆಯಾಗಲಿದೆ ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿ 2 ದಿನ ರಾಜ್ಯ ಪ್ರವಾಸ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸಮೀಕ್ಷೆ

ಈ ಯೋಜನೆಯು ವಾಹನ ಸವಾರರಿಗೆ ಇಂಧನದ ಬಳಕೆಯನ್ನು ಕಡಿಮೆ ಮಾಡುತ್ತದೆ. ಇದು ಬೆಂಗಳೂರು ಮತ್ತು ಚೆನ್ನೈನಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸುತ್ತದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಕೇಂದ್ರಗಳನ್ನು ಚೆನ್ನೈ ಬಂದರಿಗೆ ಸಂಪರ್ಕಿಸುತ್ತದೆ ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ 26 ಹೊಸ ಹಸಿರು ಮೋಟಾರು ಮಾರ್ಗಗಳಲ್ಲಿ 262-ಕಿಮೀ ಉದ್ದದ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​ವೇ ಕೂಡ ಒಂದಾಗಿದೆ. ಮೇ 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದರ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿದ್ದರು. 14,870 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡ ನಂತರ ಈ ಎಕ್ಸ್​ಪ್ರೆಸ್​ವೇ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಸಾಗಲಿದೆ.

ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಇಂದು ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲನೆ

ಮಾರನಹಳ್ಳಿ ಮತ್ತು ಅಡ್ಡಹೊಳೆ (ಶಿರಾಡಿ ಘಾಟ್) ನಡುವಿನ ಚತುಷ್ಪಥ ಯೋಜನೆಗಾಗಿ ಕೇಂದ್ರವು ನಿರ್ಮಾಣವನ್ನು ಪ್ರಾರಂಭಿಸಿದೆ ಮತ್ತು ಒಟ್ಟು 1,976 ಕೋಟಿ ರೂ.ಗಳಿಗೆ ಬಿಡ್‌ಗಳನ್ನು ಕೋರಲಾಗಿದೆ ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿರುವ ಗಡ್ಕರಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Thu, 5 January 23