ಹುಬ್ಬಳ್ಳಿ ಫ್ಲೈ ಓವರ್ ನಿರ್ಮಾಣಕ್ಕೆ ಶಿಲಾನ್ಯಾಸ.. ಗಡ್ಕರಿ, ಮೋದಿಗೆ ಧನ್ಯವಾದ ಸಮರ್ಪಿಸಿದ ಪ್ರಲ್ಹಾದ ಜೋಶಿ

ಈ ಯೋಜನೆಗೆ ಚಾಲನೆ ಸಿಕ್ಕಿರುವುದು ಅತ್ಯಂತ ಸಂತಸದ ಸಂಗತಿ. ಸದರಿ ಫ್ಲೈ ಓವರ್​ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೂ, ಗಡ್ಕರಿಯವರು ವಿಶೇಷ ಕಾಳಿಜಿ ವಹಿಸಿ ಕಾಮಗಾರಿಗೆ ಒಪ್ಪಿಗೆ ನೀಡಿದ್ದಾರೆ. ಉಳಿದ ಹಣವನ್ನ ರಾಜ್ಯ ಸರ್ಕಾರವೇ ಭರಿಸಿ ಕಾಮಗಾರಿ ಪೂರ್ಣ ಮಾಡಬೇಕು.

ಹುಬ್ಬಳ್ಳಿ ಫ್ಲೈ ಓವರ್ ನಿರ್ಮಾಣಕ್ಕೆ ಶಿಲಾನ್ಯಾಸ.. ಗಡ್ಕರಿ, ಮೋದಿಗೆ ಧನ್ಯವಾದ ಸಮರ್ಪಿಸಿದ ಪ್ರಲ್ಹಾದ ಜೋಶಿ
ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್​ ನಿರ್ಮಿಸುವ ಯೋಜನೆಗೆ ಶಿಲಾನ್ಯಾಸ
Follow us
Skanda
| Updated By: ಆಯೇಷಾ ಬಾನು

Updated on: Jan 15, 2021 | 1:51 PM

ಹುಬ್ಬಳ್ಳಿ: ನಗರದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್​ ನಿರ್ಮಿಸುವ ಯೋಜನೆಗೆ ಇಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್​ ಮೂಲಕ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವರು, ಇದೇ ಸಂದರ್ಭದಲ್ಲಿ NH63 ಕಲಘಟಗಿ ರಾಷ್ಟ್ರೀಯ ಹೆದ್ದಾರಿಗೆ CRF ಯೋಜನೆಯಡಿ ₹ 25 ಕೋಟಿ ವೆಚ್ಚದಲ್ಲಿ 2.77 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಮತ್ತು ದಾಸ್ತಿಕೊಪ್ಪದ ಬಳಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಈ ಯೋಜನೆಯನ್ನು ಹುಬ್ಬಳ್ಳಿಗೆ ನೀಡಿದ್ದಕ್ಕಾಗಿ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ತಿಳಿಸಿದ್ದಾರೆ. ಈ ಫ್ಲೈಓವರ್​ನಿಂದ ಟ್ರಾಫಿಕ್​ ಸಮಸ್ಯೆಗೆ ಮುಕ್ತಿ ಸಿಗಲಿದೆ. ಹುಬ್ಬಳ್ಳಿ ಜನತೆಯ ಬಹುದಿನಗಳ ಕನಸು ಸಾಕಾರಗೊಳ್ಳಲಿದೆ ಎಂದು ಹೇಳಿದ್ದಾರೆ.

ಈ ಯೋಜನೆಗೆ ಚಾಲನೆ ಸಿಕ್ಕಿರುವುದು ಅತ್ಯಂತ ಸಂತಸದ ಸಂಗತಿ. ಸದರಿ ಫ್ಲೈ ಓವರ್​ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೂ, ಗಡ್ಕರಿಯವರು ವಿಶೇಷ ಕಾಳಿಜಿ ವಹಿಸಿ ಕಾಮಗಾರಿಗೆ ಒಪ್ಪಿಗೆ ನೀಡಿದ್ದಾರೆ. ಕೇಂದ್ರ ಅನುದಾನದ ನಂತರವೂ ಕಾಮಗಾರಿ ಪೂರ್ಣಗೊಳ್ಳಲು ಬೇಕಿರುವಷ್ಟು ಹಣವನ್ನ ರಾಜ್ಯ ಸರ್ಕಾರವೇ ಭರಿಸಿ ಕಾಮಗಾರಿ ಪೂರ್ಣ ಮಾಡಬೇಕು. ಇದನ್ನು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರೇ ಮುತುವರ್ಜಿ ವಹಿಸಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಕಳೆದ 60 ವರ್ಷಗಳಲ್ಲಿ ಆಗದ ರಸ್ತೆ ಕೆಲಸಗಳು ಗಡ್ಕರಿ ನೈತೃತ್ವದಲ್ಲಿ ನಡೆಯುತ್ತಿವೆ. ಇಡೀ ದೇಶದ ರಸ್ತೆ ವ್ಯವಸ್ಥೆ ಸುಧಾರಣೆ ಆಗುತ್ತಿದೆ. ಹೀಗಾಗಿ ಸದ್ಯ ಗಡ್ಕರಿಯವರನ್ನ ರೋಡ್ಕರಿ ಅಂತ ಕರೆಯುವಂತಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸದಾನಂದ ಗೌಡ, ಜಗದೀಶ ಶೆಟ್ಟರ್, ಬಸವರಾಜ ಹೊರಟ್ಟಿ​ ಮತ್ತಿರರು ಉಪಸ್ಥಿತರಿದ್ದರು.

ಹುಬ್ಬಳ್ಳಿಯಿಂದ ಇನ್ನೆರಡು ಮಾರ್ಗಗಳಲ್ಲಿ ಇಂಡಿಗೋ ವಿಮಾನ ಸೇವೆ: ಪ್ರಲ್ಹಾದ್ ಜೋಶಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ