ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ: ಹೈಕೋರ್ಟ್

ಉಡುಪಿ ನಗರಸಭೆ, ಕಡೂರು ಪುರಸಭೆ ಸೇರಿದಂತೆ ಕೆಲ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೋಮವಾರ ಮಧ್ಯಂತರ ಆದೇಶ ಹೊರಡಿಸಿದೆ. ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವ ತನಕ ಆಡಳಿತಾಧಿಕಾರಿ ನೇಮಕ ಬೇಡ ಎಂದು ಸೂಚಿಸಿಲಾಗಿದೆ.

ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ: ಹೈಕೋರ್ಟ್
ಹೈಕೋರ್ಟ್
Updated By: ಗಂಗಾಧರ​ ಬ. ಸಾಬೋಜಿ

Updated on: Oct 27, 2025 | 4:12 PM

ಬೆಂಗಳೂರು, ಅಕ್ಟೋಬರ್​ 27: ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ (administrators) ನೇಮಕ ಬೇಡ ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಆ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ಪೀಠ (High Court) ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್​​​ ಜಾರಿ ಮಾಡಿದೆ.

ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯಿತಿ, ನರಸಿಂಹರಾಜಪುರ ಪಟ್ಟಣ ಪಂಚಾಯಿತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ.ನರಸೀಪುರ ಪುರಸಭೆ ಮತ್ತು ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಆಡಳಿತಾಧಿಕಾರಿ ನೇಮಕ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಚಿತ್ತಾಪುರದಲ್ಲಿ ಪಥಸಂಚಲನ: ಸರ್ಕಾರಕ್ಕೆ ಕೋರ್ಟ್ ಮಹತ್ವದ ಸೂಚನೆ, RSSಗೆ ಕೊಂಚ ನಿರಾಸೆ

ಈ ಎಲ್ಲಾ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಆರ್ . ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೋಮವಾರ ವಿಚಾರಣೆ ಮಾಡಿತು. ವಾದ-ಪ್ರತಿವಾದ ಆಲಿಸಿದ ಪೀಠ, ಚುನಾಯಿತ‌ ಸದಸ್ಯರ ಅಧಿಕಾರವಧಿ ಮುಗಿಯುವ ತನಕ ನೇಮಕ ಬೇಡ ಎಂದು ಹೇಳಿದೆ. ಆ ಮೂಲಕ ಆಡಳಿತಾಧಿಕಾರಿಗಳ ನೇಮಕವನ್ನು ತಡೆಹಿಡಿದಿದೆ.

ಇನ್ನು ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಸ್ಥಳೀಯ ಸಂಸ್ಥೆಗಳಿಗೂ ಆಡಳಿತಾಧಿಕಾರಿ ನೇಮಕ ಬೇಡ: ಹೈಕೋರ್ಟ್ ಆದೇಶ

ಇನ್ನು ಇತ್ತೀಚೆಗೆ ಮಂಡ್ಯ, ಕೋಲಾರ, ಹಾಸನ, ಚಿತ್ರದುರ್ಗ, ಗೌರಿಬಿದನೂರು ನಗರಸಣೆ ಅವಧಿ ಪೂರ್ಣವಾಗುವವರೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​​ ಮಧ್ಯಂತರ ನಿರ್ದೇಶನ ನೀಡಿತ್ತು. ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ . ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ಮಾಡಿತು.

ಇದನ್ನೂ ಓದಿ: ಕೋಮು ದ್ವೇಷದ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್​​ ದಾಖಲು

ವಾದ-ಪ್ರತಿವಾದ ಆಲಿಸಿದ ಪೀಠ, ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಷ್ಟೇ ಅಲ್ಲದೆ ಆಯಾ ಡಿಸಿಗಳಿಗೆ ನೋಟಿಸ್​ ಕೂಡ ಜಾರಿ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.