ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

ನಾಳೆ ಅಂದರೆ ಜನವರಿ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಕೇಂದ್ರ ಸರ್ಕಾರ ಸೇರಿದಂತೆ ಹಲವು ರಾಜ್ಯಗಳು ಅರ್ಧ ದಿನ ಸರ್ಕಾರಿ ರಜೆ ಘೋಷಣೆ ಮಾಡಿವೆ. ಆದ್ರೆ, ಕರ್ನಾಟಕದಲ್ಲೂ ಸಹ ರಜೆ ಘೋಷಣೆ ಮಾಡಬೇಕೆಂದು ಆಗ್ರಹಗಳ ವ್ಯಕ್ತವಾಗಿವೆ. ಆದ್ರೆ, ಸರ್ಕಾರ ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ನಾಳೆ ಕರ್ನಾಟಕದಲ್ಲಿ  ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 21, 2024 | 4:55 PM

ತಮಕೂರು, (ಜನವರಿ 21): ನಾಳೆ (ಜನವರಿ 22) ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ(ಸೋಮವಾರ)  ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ,  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಜ.22ರಂದು ಸರ್ಕಾರಿ ರಜೆ ಕೇಳಿದವರಿಗೆ ಡಿಕೆಶಿ ಹೇಳಿದ್ದಿಷ್ಟು

ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ದಿನ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸಿದ್ದಾರೆ. ಈ ಸಂಬಂಧ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಹಿಂದೂಪರ ಸಂಘಟನೆಗಳು, ಬೆಂಗಳೂರು ವಕೀಲರ ಸಂಘವು ಸಹ ರಜೆ ನೀಡುವಂತೆ ಮನವಿ ಮಾಡಿತ್ತು. ಆದ್ರೆ, ಇದೀಗ ಅಂತಿಮವಾಗಿ ಸಿದ್ದರಾಮಯ್ಯನವರು ರಜೆ ಘೋಷಣೆ ಮಾಡುವುದಿಲ್ಲ ಎಂದು ತಮ್ಮ ನಿಲುವು ಪ್ರಕಟಿಸಿದ್ದಾರೆ.

ಈ ಮೊದಲು ಮಧ್ಯಮಗಳಿಗೆ ಜೊತೆ ಮಾತನಾಡಿದ್ದ  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಪರೋಕ್ಷವಾಗಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಕೆಲ ಸಚಿವರು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸ್ವಲ್ಪ ಸಮಉ ಚರ್ಚಿಸಿದ್ದರು ಎನ್ನಲಾಗಿದೆ. ಇದೀಗ ಅಂತಿಮವಾಗಿ ಸಿಎಂ ರಜೆ ಘೋಷಣೆ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದು ಹಿಂದೂ ಹಾಗೂ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಈಗಾಗಲೇ ಹಲವು ರಾಜ್ಯಗಳು ನಾಳೆ ಅರ್ಧ ದಿನ ಸರ್ಕಾರಿ ರಜೆ ಘೋಷಣೆ ಮಾಡಿವೆ. ಅದರಲ್ಲೂ ಕೇಂದ್ರ ಸರ್ಕಾರ ಸಹ ದೇಶವ್ಯಾಪಿ ತನ್ನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ.

Published On - 4:24 pm, Sun, 21 January 24

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್