ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್

ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್
ಪ್ರಾತಿನಿಧಿಕ ಚಿತ್ರ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 27, 2021 | 4:33 PM

ಬೆಂಗಳೂರು: ಇಂದು ರಾತ್ರಿ 9 ಗಂಟೆ ನಂತರ ಬೆಂಗಳೂರಿನಿಂದ ಇತರ ಸ್ಥಳಗಳಿಗೆ ಯಾವುದೇ ಬಸ್ ಸಂಚಾರ ಇರುವುದಿಲ್ಲ. ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಈಗಾಗಲೇ ಬುಕಿಂಗ್ ಮಾಡಿರುವ ಬಸ್​ಗಳು ಕೂಡ ರಾತ್ರಿ 9 ಗಂಟೆಯ ಒಳಗೆ ಬೆಂಗಳೂರಿನಿಂದ ಹೊರಡಲಿವೆ ಎಂದು ತಿಳಿದುಬಂದಿದೆ. ಲಾಕ್‌ಡೌನ್ ಮುಗಿಯುವವರೆಗೆ ಯಾವುದೇ  ಬಸ್‌ ಸೇವೆ ಇರುವುದಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ. ಇಂದು ರಾತ್ರಿಯಿಂದ ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಸಾವಿರಾರು ಮಂದಿ ಗುಳೆಹೋಗುತ್ತಿದ್ದಾರೆ.  ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದತ್ತ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು,  ಗಂಟೆ ಮೂಟೆಕೊಂಡು ತಮ್ಮತಮ್ಮ ಊರುಗಳತ್ತ ಪ್ರಯಾಣ ಬೆಳೆಸಲು ಧಾವಿಸುತ್ತಿದ್ದಾರೆ.

ಸಾರಿಗೆ ಸಂಚಾರಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿರುವ ಕಾರಣ ನವಯುಗ ಟೋಲ್ ಬಳಿ ನೂರಾರು ಜನರು ಜಮಾಯಿಸುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ಬೆಂಗಳೂರು ಬಿಟ್ಟು ಸ್ವಂತ ಊರುಗಳಿಗೆ ತೆರಳುತ್ತಿದ್ದಾರೆ. ಬೈಕ್, ಬಸ್, ಕಾರ್ ಸೇರಿದಂತೆ ಯಾವ ವಾಹನ ಸಿಗುವುದೋ ಅದರ ಮೂಲಕ ಮನೆ ಸೇರುವ ಹಂಬಲದಲ್ಲಿ ನೂರಾರು ಜನರಿದ್ದಾರೆ. ಜತೆಗೆ ಮಂಡ್ಯ- ಮೈಸೂರು ಭಾಗಗಳಿಗೆ ತೆರಳುವ ಜನರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಜಮಾಯಿಸುತ್ತಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:43 pm, Tue, 27 April 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್