ಬೆಂಗಳೂರು: ಇಂದು ರಾತ್ರಿ 9 ಗಂಟೆ ನಂತರ ಬೆಂಗಳೂರಿನಿಂದ ಇತರ ಸ್ಥಳಗಳಿಗೆ ಯಾವುದೇ ಬಸ್ ಸಂಚಾರ ಇರುವುದಿಲ್ಲ. ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್ಗೆ ಲಭ್ಯವಾಗಿದೆ. ಈಗಾಗಲೇ ಬುಕಿಂಗ್ ಮಾಡಿರುವ ಬಸ್ಗಳು ಕೂಡ ರಾತ್ರಿ 9 ಗಂಟೆಯ ಒಳಗೆ ಬೆಂಗಳೂರಿನಿಂದ ಹೊರಡಲಿವೆ ಎಂದು ತಿಳಿದುಬಂದಿದೆ. ಲಾಕ್‌ಡೌನ್ ಮುಗಿಯುವವರೆಗೆ ಯಾವುದೇ ಬಸ್ ಸೇವೆ ಇರುವುದಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಇಂದು ರಾತ್ರಿಯಿಂದ ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಸಾವಿರಾರು ಮಂದಿ ಗುಳೆಹೋಗುತ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದತ್ತ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಗಂಟೆ ಮೂಟೆಕೊಂಡು ತಮ್ಮತಮ್ಮ ಊರುಗಳತ್ತ ಪ್ರಯಾಣ ಬೆಳೆಸಲು ಧಾವಿಸುತ್ತಿದ್ದಾರೆ.
ಸಾರಿಗೆ ಸಂಚಾರಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿರುವ ಕಾರಣ ನವಯುಗ ಟೋಲ್ ಬಳಿ ನೂರಾರು ಜನರು ಜಮಾಯಿಸುತ್ತಿದ್ದಾರೆ.
ಸಂಜೆಯಾಗುತ್ತಿದ್ದಂತೆ ಬೆಂಗಳೂರು ಬಿಟ್ಟು ಸ್ವಂತ ಊರುಗಳಿಗೆ ತೆರಳುತ್ತಿದ್ದಾರೆ. ಬೈಕ್, ಬಸ್, ಕಾರ್ ಸೇರಿದಂತೆ ಯಾವ ವಾಹನ ಸಿಗುವುದೋ ಅದರ ಮೂಲಕ ಮನೆ ಸೇರುವ ಹಂಬಲದಲ್ಲಿ ನೂರಾರು ಜನರಿದ್ದಾರೆ. ಜತೆಗೆ ಮಂಡ್ಯ- ಮೈಸೂರು ಭಾಗಗಳಿಗೆ ತೆರಳುವ ಜನರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಜಮಾಯಿಸುತ್ತಿದ್ದಾರೆ.
ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:43 pm, Tue, 27 April 21