AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ RSS ವಿರುದ್ಧ ಯಾವುದೇ ಕೇಸ್ ಇಲ್ಲ: ಗೃಹ ಸಚಿವ ಖರ್ಗೆ ಸ್ಪಷ್ಟನೆ

ಆರ್ ಎಸ್ ಎಸ್ ಸಂಘಟನೆಯ ನೋಂದಣಿ ಹಾಗೂ ಕಾನೂನು ಮಾನ್ಯತೆಯ ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಇದೀಗ ರಾಜ್ಯದ ಗೃಹ ಸಚಿವರಾಗಿದ್ದು, ಸಂಘದ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಸದ್ಯ ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುಚರ್ಚಿತ ವಿಚಾರವಾಗಿದೆ. ಇದರ ಮಧ್ಯೆ ಕರ್ನಾಟಕದಲ್ಲಿ ಆರ್​​ಎಸ್​​ಎಸ್ ವಿರುದ್ಧದ ಒಂದೇ ಒಂದು ಕೇಸು ಇಲ್ಲ ಎನ್ನುವುದು ಬಹಿರಂಗವಾಗಿದೆ.

ಕರ್ನಾಟಕದಲ್ಲಿ RSS ವಿರುದ್ಧ ಯಾವುದೇ ಕೇಸ್ ಇಲ್ಲ: ಗೃಹ ಸಚಿವ ಖರ್ಗೆ ಸ್ಪಷ್ಟನೆ
Priyank Kharge, RSS
ರಮೇಶ್ ಬಿ. ಜವಳಗೇರಾ
|

Updated on: Aug 25, 2026 | 8:14 PM

Share

ಬೆಂಗಳೂರು, (ಆಗಸ್ಟ್ 25): ಆರ್ ಎಸ್ ಎಸ್ (RSS) ಸಂಘಟನೆಯ ನೋಂದಣಿ ವಿಚಾರವಾಗಿ ಇದೀಗ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಈ ಕುರಿತಾಗಿ ತಮ್ಮ ನಿಲುವನ್ನು ಪ್ರದರ್ಶನ ಮಾಡಿದ್ದು, ಹೋದಲೆಲ್ಲ ಆರ್​​​ಎಸ್​​​ಎಸ್​ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. RSS ಕೋಮು ಗಲಭೆಗಳನ್ನ ಸೃಷ್ಟಿ ಮಾಡಿದಂತಹ ಸಂಘಟನೆ, ಹೊರತು ಕೋಮುಗಲಭೆ ರಕ್ಷಣೆ ಮಾಡುವಂತಹ ಸಂಘಟನೆ ಅಲ್ಲ ಎಂದು ಸ್ವತಃ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೇಳಿದ್ದಾರೆ. ಆದ್ರೆ, ಇದೀಗ ಅವರೇ ಕೊಟ್ಟ ಉತ್ತರದಲ್ಲಿ ಇದುವರೆಗೂ ರಾಜ್ಯದಲ್ಲಿ ಆರ್​​ಎಸ್​​ಎಸ್​ ಒಂದೇ ಒಂದು ಕೇಸಿಲ್ಲ ಎನ್ನುವುದು ಗಮನಾರ್ಹವಾಗಿದೆ. ಹೌದು….RSS ಶಾಖೆ ಹಾಗೂ ಪಂಥ ಸಂಚಲನದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪ್ರಿಯಾಂಕ್ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ವಿರುದ್ಧ ಮುಗಿಬಿದ್ದಿದ್ದಾರೆ.

ಪ್ರಶ್ನೆಗೆ ಇಲ್ಲ ಎಂದು ಉತ್ತರಿಸಿರುವ ಗೃಹ ಸಚಿವ

ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಅವರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 524 ಅನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಳಿದ್ದರು. ರಾಜ್ಯದಲ್ಲಿ ಆರೆಸ್ಸೆಸ್ ವಿರುದ್ಧ ಎಷ್ಟು ಪ್ರಕರಣಗಳು ದಾಖಲಾಗಿವೆ? ಸಂಘ ಯಾವುದಾದರೂ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದೆಯೇ? ಪಥ ಸಂಚಲನದ ಸಂದರ್ಭದಲ್ಲಿ ಯಾವುದಾದರೂ ಅಹಿತಕರ ಘಟನೆ ದಾಖಲಾಗಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ ಎಂದು ಒಂದೇ ವಾಕ್ಯದಲ್ಲಿ ಹೇಳಿದ್ದಾರೆ.

ಇದನ್ನೂ ನೋಡಿ: ಜಾತಿವಾದ, ಕೋಮುವಾದ, ಮನುವಾದದ ವಿಷ ತುಂಬಿರುವ ಸಾವಿರ ತಲೆಯ ವಿಷಪೂರಿತ ಹಾವು; ಯತೀಂದ್ರ ಸಿದ್ದರಾಮಯ್ಯ

ಗೃಹ ಸಚಿವರ ಮೇಲೆ ಮುಗಿಬಿದ್ದ ಬಿಜೆಪಿ

ಆರೆಸ್ಸೆಸ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ರಾಜ್ಯದ ಗೃಹ ಸಚಿವರು ತಿಳಿಸಿದ್ದಾರೆ. ಆದ್ದರಿಂದ, ಇನ್ನಾದರೂ ನೀವು ಆರೆಸ್ಸೆಸ್ ವಿರುದ್ಧ ವಿಷ ಕಾರುವುದನ್ನು ನಿಲ್ಲಿಸಿ ಎಂದು ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಷ್ಟು ದಿನ RSS ವಿರುದ್ಧ ಮಾಡುತ್ತಿದ್ದ ಆರೋಪಗಳಿಗೆ ಆಧಾರವೇನು ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರೇ ಉತ್ತರಿಸಿ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ಕಿಡಿ

ಪ್ರಿಯಾಂಕ್ ಖರ್ಗೆ ಅವರೇ, ರಾಜ್ಯದಲ್ಲಿ ಆರೆಸ್ಸೆಸ್ ವಿರುದ್ಧ ಎಷ್ಟು ಪ್ರಕರಣಗಳು ದಾಖಲಾಗಿವೆ? ಸಂಘ ಯಾವುದಾದರೂ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದೆಯೇ? ಪಥ ಸಂಚಲನದ ಸಂದರ್ಭದಲ್ಲಿ ಯಾವುದಾದರೂ ಅಹಿತಕರ ಘಟನೆ ದಾಖಲಾಗಿದೆಯೇ ಎನ್ನುವ ಪ್ರಶ್ನೆಗೆ ಆರೆಸ್ಸೆಸ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ರಾಜ್ಯದ ಗೃಹ ಸಚಿವರು ತಿಳಿಸಿದ್ದಾರೆ. ಆದ್ದರಿಂದ, ಇನ್ನಾದರೂ ನೀವು ಆರೆಸ್ಸೆಸ್ ವಿರುದ್ಧ ವಿಷ ಕಾರುವುದನ್ನು ನಿಲ್ಲಿಸಿ. ಓಹ್, ಮರೆತೇ ಹೋಗಿತ್ತು! ರಾಜ್ಯದ ಗೃಹ ಸಚಿವರೂ ತಾವೇ ಅಲ್ಲವೇ? ಆರೆಸ್ಸೆಸ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ, ಆರೆಸ್ಸೆಸ್ ಯಾವುದೇ ಕಾನೂನು ವಿರೋಧಿ ಕಾರ್ಯ ನಡೆಸಿಲ್ಲ ಎನ್ನುವುದು ಸಾಬೀತಾಗಿದ್ದರಿಂದ, ಇನ್ನಾದರೂ ನೀವು ಆರೆಸ್ಸೆಸ್ ಬೆನ್ನು ಬಿಟ್ಟು, ರಾಜ್ಯದ ಕಾನೂನು ಸುವ್ಯವಸ್ಥೆಯತ್ತ ಕೊಂಚ ಗಮನ ಹರಿಸಬಹುದೇ? ಎಂದು ಸಿಟಿ ರವಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್