AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

No Water Supply: ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಬರಲ್ಲ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಡೀ ಬೆಂಗಳೂರಿನಲ್ಲಿ ನೀರಿನ ಪೂರೈಕೆ ಸ್ಥಗಿತ ಮಾಡಲಿದೆ. ಹೀಗಾಗಿ ಜೂನ್ 4 ಮತ್ತು ಜೂನ್ 5ರಂದು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ.

No Water Supply: ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಬರಲ್ಲ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 30, 2024 | 1:10 PM

Share

ಬೆಂಗಳೂರು, ಮೇ.30: ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ (Lok Sabha Election Result) ಹೊರ ಬೀಳಲಿದೆ. ಆದರೆ ಅದೇ ದಿನ ಬೆಂಗಳೂರಿನ ಜನರಿಗೆ ನೀರಿನ ಸಮಸ್ಯೆ ಎದುರಾಗಲಿದೆ. ಕಾವೇರಿ 5ನೇ ಹಂತದ (Cauvery 5th Stage) ಕಾಮಗಾರಿ ಹಿನ್ನೆಲೆ ಇಡೀ ಬೆಂಗಳೂರು ನಗರದಲ್ಲಿ ಜೂನ್ 4 ಮತ್ತು 5ರಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಕಾವೇರಿ ನೀರಿನ ಪೂರೈಕೆಯಲ್ಲಿ ಸರಬರಾಜು ವ್ಯತ್ಯಯವಾಗಲಿದೆ.

ಕಾವೇರಿ 5 ನೇ ಹಂತದ ಅನುಷ್ಠಾನದ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್‌ 4 ಮತ್ತು 5 ರಂದು ಕಾವೇರಿ 1, 2 ಮತ್ತು 3ನೇ ಹಂತಗಳ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಜಲಮಂಡಳಿಯು ಜೂನ್ 4 ರಂದು ಒಟ್ಟು ಆರು ಕಡೆ ಎರಡು ಹಂತದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಉದ್ದೇಶಿಸಿದೆ. ಕಾಮಗಾರಿ ನಡೆಯುವ ಅವಧಿಯಲ್ಲಿ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ನಂತರ ಜೂನ್ 5 ರಂದು ನಗರದಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಪ್ರೇಯಸಿಯೊಂದಿಗಿರಲು ಆಕೆಯ ಮನೆಗೆ ಹುಡುಗಿ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ; ಕಡೆಗೂ ಸಿಕ್ಕಿಬಿದ್ದ!

ಮೊದಲ ಹಂತದಲ್ಲಲಿ ಕಾವೇರಿ 1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 4 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕಾಮಗಾರಿ ನಡೆಸುವುದರಿಂದ 12 ಗಂಟೆ ನೀರು ಪೂರೈಕೆ ಇರುವುದಿಲ್ಲ.

ಇನ್ನು ಮತ್ತೊಂದೆಡೆ ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್‌ನಲ್ಲಿ ಅದೇ ದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಸಹಕರಿಸುವಂತೆ ಜಲಮಂಡಳಿ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ