ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಶಾಲಾ-ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಜನವರಿ1ರಿಂದಲೇ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಸಂಪುಟ ಸಭೆಯಲ್ಲಿ ಸಿಎಂ BSY ಸಚಿವ ಸುರೇಶ್ ಕುಮಾರ್ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Dec 30, 2020 | 12:30 PM

ಬೆಂಗಳೂರು: ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಶಾಲೆ ಆರಂಭದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸದ್ಯ ಶಾಲಾ-ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಜನವರಿ1ರಿಂದಲೇ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಸಂಪುಟ ಸಭೆಯಲ್ಲಿ ಸಿಎಂ BSY ಸಚಿವ ಸುರೇಶ್ ಕುಮಾರ್ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ.

ಇನ್ನು ಸಭೆಯಲ್ಲಿ ಹಾಜರಿದ್ದ ಆರೋಗ್ಯ ಸಚಿವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಬ್ರಿಟನ್ ವೈರಸ್ ವಿಚಾರದಲ್ಲಿ ಸಮಸ್ಯೆ ಆದ್ರೆ ತಜ್ಞರ ಸಲಹೆ ಪಡೆಯೋಣ ಸದ್ಯಕ್ಕೆ ದಿನಾಂಕ ಬದಲಾಯಿಸೋದು ಬೇಡ ಎಂದು ಸಭೆಯಲ್ಲಿ ಸಂಪುಟದ ಸದಸ್ಯರು ಸಚಿವರ ಸಲಹೆ ಒಪ್ಪಿಕೊಂಡಿದ್ದಾರೆ.

ಶಿಕ್ಷಣ, ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ ಜನವರಿ 1ರಿಂದ ಶಾಲಾ-ಕಾಲೇಜು ಪುನಾರಂಭಗೊಳ್ಳುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊರೊನಾ ಮಾರ್ಗಸೂಚಿ ಸರಿಯಾಗಿ ಪಾಲನೆ ಆಗಬೇಕು. ನಿಯಮ ಪಾಲನೆಗೆ ಅಗತ್ಯ ಕ್ರಮವಹಿಸುವಂತೆ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಜತೆ ಸೇರಿ ಕೆಲಸ ಮಾಡಿ. ಶಾಲಾ-ಕಾಲೇಜು ಪ್ರಾರಂಭದಲ್ಲಿ ಸಮಸ್ಯೆಯಾಗಬಾರದು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಈ ಬಗ್ಗೆ ನಿಗಾವಹಿಸಿ ಎಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಿಎಸ್‌ವೈ ಅಧಿಕಾರಿಗಳು, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

Published On - 12:36 pm, Mon, 28 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ