ಖರ್ಗೆ ಖಡಕ್​ ಮಾತಿನ ನಂತರ ಶಕ್ತಿ ಯೋಜನೆ ಬಗ್ಗೆ ಡಿಕೆಶಿ ವರಸೆ ಬದಲು

ಶಕ್ತಿ ಯೋಜನೆ ಅಂದ್ರೆ ಮಹಿಳೆಯ ಉಚಿತ ಬಸ್ ಪ್ರಯಾಣದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ(ಅಕ್ಟೋಬರ್ 30) ಆಡಿದ ಮಾತು ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಶಕ್ತಿ ಯೋಜನೆಯನ್ನ ಪರಿಷ್ಕರಣೆ ಮಾಡ್ತಾರಾ? ಅಥವಾ ಯೋಜನೆಗೆ ಜರಡಿ ಹಿಡಿಯುವ ಕೆಲಸ ಮಾಡ್ತಾರಾ, ಉಳ್ಳವರಿಗೆ ಟಿಕೆಟ್ ಕೊಟ್ಟು, ಇಲ್ಲದವರಿಗೆ ಮಾತ್ರ ಫ್ರೀ ಪ್ರಯಾಣಕ್ಕೆ ಅವಕಾಶ ಮಾಡಿಕೊಡ್ತಾರಾ? ಅಥವಾ ಶಕ್ತಿಯೋಜನೆಯನ್ನು ನಿಲ್ಲಿಸಿ ಬಿಡುತ್ತಾರಾ ಎನ್ನುವ ಚರ್ಚೆಗಳು ಶುರುವಾಗಿದ್ದವು. ಆದ್ರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಮಾತಿನ ಬಳಿಕ ಡಿಕೆಶಿ ತಮ್ಮ ಹೇಳಿಕೆ ಹಿಂದಿನ ವರಸೆ ಬದಲಿಸಿದ್ದಾರೆ.

ಖರ್ಗೆ ಖಡಕ್​ ಮಾತಿನ ನಂತರ ಶಕ್ತಿ ಯೋಜನೆ ಬಗ್ಗೆ ಡಿಕೆಶಿ ವರಸೆ ಬದಲು
ಡಿಕೆ ಶಿವಕುಮಾರ್, ಖರ್ಗೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 31, 2024 | 3:04 PM

ಬೆಂಗಳೂರು, (ಅಕ್ಟೋಬರ್ 31): ಶಕ್ತಿ ಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಆಡಿದ ಮಾತುಗಳು ಭಾರೀ ಸಂಚಲನ ಮುಡಿಸಿದ್ದು, ಇದೀಗ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದೆ. ಹೌದು….ಡಿಕೆ ಶಿವಕುಮಾರ್ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ಮಾಡುವ ಸುಳಿವು ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆರಳಿದ್ದಾರೆ. ಬಜೆಟ್​ನಲ್ಲಿ ಏನಿದೆ ಅದರಂತೆ ಗ್ಯಾರಂಟಿ ಯೋಜನೆ ಕೊಡಿ ಎಂದು ಸಿಎಂ, ಡಿಸಿಎಂಗೆ ಖಡಕ್​ ಆಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು(ಅಕ್ಟೋಬರ್ 31) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಡಿಕೆ ನೋಡಿ ಗ್ಯಾರಂಟಿ ಬಗ್ಗೆ ನೀನೇನೋ‌ ಹೇಳಿದ್ಯಲ್ಲಪ್ಪ ಎಂದು ಕೇಳಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್, ನಾನು ಏನೂ‌ ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ನೋಡಿಲ್ಲಪ್ಪ, ನಾನು ನೋಡುತ್ತೇನೆ. ಪೇಪರ್​ನಲ್ಲಿ ನೀನು ಹೇಳಿದ್ದೀಯಾ ಎಂದು ಬಂದಿದೆ ಎಂದು ಖರ್ಗೆ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇಲ್ಲ ಪರಿಷ್ಕರಣೆ ಅಂತ ಬಂದಿದೆ ಎಂದರು.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ಬಳಿಕ ಮಾತನಾಡಿದ ಖರ್ಗೆ, ಅದನ್ನೇ ಹೇಳ್ತಿರೋದು ನಾನು. ಬಜೆಟ್​ನಲ್ಲಿ ಏನಿದೆ ಅದರಂತೆ ಗ್ಯಾರಂಟಿ ಯೋಜನೆ ಕೊಡಿ ಎಂದು ಸಿಎಂ, ಡಿಸಿಎಂಗೆ ಖಡಕ್​ ಸೂಚನೆ ನೀಡಿದರು.

ಖರ್ಗೆ ಮಾತಿನಿಂದ ವರಸೆ ಬದಲಿಸಿದ ಡಿಕೆಶಿ

ಖರ್ಗೆ ಖಡಕ್​ ಸೂಚನೆ ಬಳಿಕ ಡಿಕೆ ಶಿವಕುಮಾರ್ ತಮ್ಮ ವರಸೆಯನ್ನೇ ಬದಲಿಸಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆ ಇರುತ್ತದೆ. ರಾಜ್ಯದಲ್ಲಿ ಮುಂದಿನ ಬಾರಿಯೂ ನಮ್ಮ ಸರ್ಕಾರವೇ ಬರಲಿದೆ. ಹಾಗಾಗಿ ಇನ್ನೂ ಎಂಟೂವರೆ ವರ್ಷ ಗ್ಯಾರಂಟಿ ಯೋಜನೆ ಇರುತ್ತೆ ಎಂದು ಹೇಳಿದರು. ಈ ಮೂಲಕ ಶಕ್ತಿ ಯೋಜನೆ ಪರಿಷ್ಕರಣೆ ತಾವೇ ಹುಟ್ಟುಹಾಕಿದ್ದ ಚರ್ಚೆಗೆ ಈಗ ಅವರೇ ಬ್ರೇಕ್ ಹಾಕಿದ್ದಾರೆ.

ಅಷ್ಟಕ್ಕೂ ಡಿಕೆಶಿ ಹೇಳಿದ್ದೇನು?

ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸುವಂತೆ ಸ್ತ್ರೀಯರಿಂದಲೇ ಒತ್ತಡವಿದೆ. ಅನೇಕ ಹೆಣ್ಣುಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವಂತಹ ಶಕ್ತಿಯಿದೆ. ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ನಮಗೆ ಉಚಿತ ಪ್ರಯಾಣ ಬೇಡವೆಂದಿದ್ದಾರೆ. ಅನುಕೂಲ ಸ್ಥಿತಿಯಲ್ಲಿರುವ ಶೇಕಡಾ 5-10ರಷ್ಟು ಹೆಣ್ಣುಮಕ್ಕಳು ಹೇಳುತ್ತಿದ್ದಾರೆ. ನಾವು ಹಣ ನೀಡಿ ಟಿಕೆಟ್ ಪಡೆಯಲು ಮುಂದಾದರೂ ತೆಗೆದುಕೊಳ್ಳುತ್ತಿಲ್ಲ. ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ನಿರ್ವಾಹಕರು ಹಣ ಪಡೆದು ಟಿಕೆಟ್ ನೀಡುತ್ತಿಲ್ಲ ಅಂತ ಮಹಿಳೆಯರು ನಮಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ಚರ್ಚೆ ಮಾಡುತ್ತೇವೆ. ​ಇದರ ಬಗ್ಗೆ ಶೀಘ್ರದಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಸಭೆ ಮಾಡತ್ತೇವೆ. ಪ್ರತ್ಯೇಕವಾಗಿ ಸಭೆ ನಡೆಸಿ ಶಕ್ತಿ ಯೋಜನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದಿದ್ದರು.

ಈ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಶಕ್ತಿ ಯೋಜನೆಗೆ ಸರ್ಕಾರ ಬ್ರೇಕ್ ಹಾಕುತ್ತಾ, ಅಥವಾ ಶಕ್ತಿ ಯೋಜನೆಯನ್ನ ಪರಿಷ್ಕರಣೆ ಮಾಡುತ್ತಾ, ಉಳ್ಳವರಿಗೆ ಟಿಕೆಟ್ ಕೊಟ್ಟು, ಇಲ್ಲದವ್ರಿಗೆ ಮಾತ್ರ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡುತ್ತಾ ಅನ್ನೋ ಪ್ರಶ್ನೆ ಮೂಡಿತ್ತು. ಇದೀಗ ಖರ್ಗೆ ಖಡಕ್ ಮಾತಿನಿಂದ ಎಲ್ಲಾ ಚರ್ಚೆ, ಗೊಂದಲಗಳಿಗೆ ಡಿಕೆ ಶಿವಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಶಕ್ತಿ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲೇ ಎರಡನೇ ಅತಿ ದೊಡ್ಡ ಗ್ಯಾರಂಟಿ ಯೋಜನೆ. ಶಕ್ತಿ ಯೋಜನೆ ಮೂಲಕ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿಯನ್ನ ಜಾರಿಗೆ ತರಲಾಗಿದೆ. ಅದೆಷ್ಟೋ ಬಡ ಹೆಣ್ಣುಮಕ್ಕಳಿಗೆ ಈ ಶಕ್ತಿ ಯೋಜನೆಯಿಂದ ಆರ್ಥಿಕ ಉಳಿತಾಯ ವಾಗುತ್ತಿದೆ. ಶಕ್ತಿ ಯೋಜನೆ ಜಾರಿ ಬಳಿಕ ಮಹಿಳೆಯರ ಬಸ್​ ಪ್ರಮಾಣ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ
ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ
ಅಪರೂಪದ ಮಹಿಳೆ ವಿಜಯಲಕ್ಷ್ಮಿ ನಿಜ ಅರ್ಥದಲ್ಲಿ ಕ್ಷಮಯಾ ಧರಿತ್ರಿ: ಯಮುನಾ
ಅಪರೂಪದ ಮಹಿಳೆ ವಿಜಯಲಕ್ಷ್ಮಿ ನಿಜ ಅರ್ಥದಲ್ಲಿ ಕ್ಷಮಯಾ ಧರಿತ್ರಿ: ಯಮುನಾ
ಮಸ್ಟಾಂಗ್, ವೆಲ್​ಫೈಯರ್​; ಹೇಗಿದೆ ನೋಡಿ ದರ್ಶನ್ ಕಾರ್ ಕಲೆಕ್ಷನ್
ಮಸ್ಟಾಂಗ್, ವೆಲ್​ಫೈಯರ್​; ಹೇಗಿದೆ ನೋಡಿ ದರ್ಶನ್ ಕಾರ್ ಕಲೆಕ್ಷನ್
ಬೆನ್ನುನೋವಿನ ಸಮಸ್ಯೆಗಾಗಿ ಇಂದು ಮಧ್ಯಾಹ್ನ ವೈದ್ಯರನ್ನು ಕಾಣಲಿರುವ ದರ್ಶನ್
ಬೆನ್ನುನೋವಿನ ಸಮಸ್ಯೆಗಾಗಿ ಇಂದು ಮಧ್ಯಾಹ್ನ ವೈದ್ಯರನ್ನು ಕಾಣಲಿರುವ ದರ್ಶನ್
ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಕಡಿತಗೊಳಿಸುವ ಸಾಧ್ಯತೆ: ಕುಮಾರಸ್ವಾಮಿ
ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಕಡಿತಗೊಳಿಸುವ ಸಾಧ್ಯತೆ: ಕುಮಾರಸ್ವಾಮಿ
‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ
ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ