AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಗಿಲ್ಲ ಚಿಕ್ಕಿ ಭಾಗ್ಯ: ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ, ಮೊಟ್ಟೆ ಬೇಡವಾದ್ರೆ ಬಾಳೆಹಣ್ಣೊಂದೇ ಆಯ್ಕೆ

ಕರ್ನಾಟಕ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಚಿಕ್ಕಿ ವಿತರಣೆಯನ್ನು ನಿಲ್ಲಿಸಿದೆ. ಚಿಕ್ಕಿಯಲ್ಲಿ ಹೆಚ್ಚಿನ ಸಕ್ಕರೆ ಮತ್ತು ಅನ್ಸ್ಯಾಚುರೇಟೆಡ್ ಕೊಬ್ಬಿನ ಅಂಶ ಪತ್ತೆಯಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಈ ನಿರ್ಧಾರಕ ಕೈಗೊಳ್ಳಲಾಗಿದೆ. ಹೀಗಾಗಿ, ಮಕ್ಕಳಿಗೆ ಬದಲಾಗಿ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ.

ಶಾಲಾ ಮಕ್ಕಳಿಗಿಲ್ಲ ಚಿಕ್ಕಿ ಭಾಗ್ಯ: ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ, ಮೊಟ್ಟೆ ಬೇಡವಾದ್ರೆ ಬಾಳೆಹಣ್ಣೊಂದೇ ಆಯ್ಕೆ
ಚಿಕ್ಕಿ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Feb 18, 2025 | 9:12 AM

Share

ಬೆಂಗಳೂರು, ಫೆಬ್ರವರಿ 18: ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಚಿಕ್ಕಿ ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಚಿಕ್ಕಿ ವಿತರಣೆಯಿಂದ ಮಕ್ಕಳ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಕರ್ನಾಟಕ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ವಿಚಾರವಾಗಿ ಈಗಾಗಲೇ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಮತ್ತು ವಿತರಣೆಯ ಸಮಸ್ಯೆಗಳ ಕುರಿತು ಧಾರವಾಡ ಮತ್ತು ಕಲಬುರಗಿಯಲ್ಲಿನ ಶಿಕ್ಷಣ ಇಲಾಖೆ ಅಪರ ಆಯುಕ್ತರು ಇಲಾಖೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ.

ಸಕ್ಕರೆ, ಹಾನಿಕಾರಕ ಕೊಬ್ಬು ಹೆಚ್ಚಿರುವುದು ಪತ್ತೆ

ಚಿಕ್ಕಿಯಲ್ಲಿ ಹೆಚ್ಚುವರಿ ಅನ್​ಸ್ಯಾಚುರೇಟೆಡ್ ಫ್ಯಾಟ್ ಮತ್ತು ಹೆಚ್ಚಿನ ಸಕ್ಕರೆ ಅಂಶ ಇರುವುದರಿಂದ ಮಕ್ಕಳ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಧಾರವಾಡದ ಅಪರ ಆಯುಕ್ತರು ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಜತೆಗೆ, ಚಿಕ್ಕಿ ವಿತರಣೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿತ್ತು. ಅಸಮರ್ಪಕ ಸಂಗ್ರಹಣೆ ಮತ್ತು ಅವಧಿ ಮೀರಿದ ಚಿಕ್ಕಿ ವಿತರಣೆಯ ಬಗ್ಗೆಯೂ ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿತ್ತಲ್ಲದೆ, ಸಂಭಾವ್ಯ ಆರೋಗ್ಯ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು.

ಚಿಕ್ಕಿ ಬದಲಿಗೆ ಮೊಟ್ಟೆ ಅಥವಾ ಬಾಳೆಹಣ್ಣು

ಮಧ್ಯಾಹ್ನದ ಊಟ ಯೋಜನೆಯಡಿ ಶಾಲೆಗಳಲ್ಲಿ ಚಿಕ್ಕಿಗೆ ಬದಲಾಗಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಬೇಕೆಂದು ಇಲಾಖೆ ಆದೇಶಿಸಿದೆ.

2021 ರಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮೊಟ್ಟೆಗಳಿಗೆ ಪರ್ಯಾಯವಾಗಿ ಬಾಳೆಹಣ್ಣಿನ ಬದಲಿಗೆ ಚಿಕ್ಕಿ ನೀಡಲು ಆರಂಭಿಸಲಾಗಿತ್ತು. ಮೊಟ್ಟೆ ತಿನ್ನದ ಶಾಲಾ ಮಕ್ಕಳಿಗಾಗಿ ಈ ಕ್ರಮ ಕೈಗೊಳ್ಳಲಾಗಿತ್ತು. 2021 ರ ಡಿಸೆಂಬರ್ ಅಂತ್ಯದಲ್ಲಿ ಪ್ರಾಯೋಗಿಕವಾಗಿ ಯೋಜನೆಯನ್ನು ಪ್ರಾರಂಭಿಸುವ ಮೊದಲು, ಚಿಕ್ಕಿಯ ಮಾದರಿಗಳನ್ನು ಕಳುಹಿಸುವಂತೆ ರಾಜ್ಯ ಸರ್ಕಾರ ಕರ್ನಾಟಕ ಹಾಲು ಒಕ್ಕೂಟವನ್ನು ಕೇಳಿತ್ತು.

ಇದನ್ನೂ ಓದಿ: ಸವಾಲಾದ SSLC ಪರೀಕ್ಷೆ: ಕೋಲಾರದಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಣ ಇಲಾಖೆಗೂ ಟಾಸ್ಕ್​!

ರಾಜ್ಯಾದ್ಯಂತ ಕನಿಷ್ಠ 8 ಲಕ್ಷ ಮಕ್ಕಳು ಮೊಟ್ಟೆಯ ಬದಲಿಗೆ ಚಿಕ್ಕಿಯನ್ನು ಆರಿಸಿಕೊಂಡಿದ್ದರು ಎಂದು ಕೆಲವು ಮೂಲಗಳು ತಿಳಿಸಿವೆ. ಆದರೆ, ಇನ್ನೊಂದು ಮೂಲದ ಪ್ರಕಾರ, ಕೇವಲ 2.27 ಲಕ್ಷ ಮಕ್ಕಳು ಮಾತ್ರ ಚಿಕ್ಕಿಯನ್ನು ಆಯ್ಕೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೀಗ ಅವರಿಗೆ, ಬಾಳೆಹಣ್ಣು ಅಥವಾ ಮೊಟ್ಟೆಯ ನಡುವೆ ಯಾವುದಾದರೊಂದನ್ನು ಆಯ್ಕೆ ಮಾಡಲೇಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ