KSRTC BMTC Strike: ಮಾರ್ಚ್​ ತಿಂಗಳ ಸಂಬಳ ರಿಲೀಸ್ ಆಗುತ್ತೆ.. ಆದ್ರೆ, ಸ್ವಲ್ಪ ತಡವಾಗುತ್ತೆ: ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ

Karnataka Transport Employees Strike: ಮಾರ್ಚ್ ತಿಂಗಳು ಹಣಕಾಸು ವರ್ಷ ಅಂತ್ಯವಾಗುವ ಮಾಸ. ಹೀಗಾಗಿ ಈ ತಿಂಗಳ ವೇತನ ವಿಳಂಬವಾಗುವ ಸಾಧ್ಯತೆ ಇದೆ. ಇದರ ಹೊರತಾಗಿ ಮುಷ್ಕರ ನಿರತರ ಮಾರ್ಚ್ ತಿಂಗಳ ವೇತನಕ್ಕೆ ತಡೆ ನೀಡುವ ಯಾವುದೇ ವಿಚಾರ ನಮ್ಮ ಮುಂದೆ ಇಲ್ಲ. ಸದ್ಯಕ್ಕೆ ಇಂತಹ ನಿರ್ಧಾರಗಳ ಬಗ್ಗೆ ಪ್ರಸ್ತಾಪ ಇಲ್ಲ: ಎಂಡಿ ಶಿವಯೋಗಿ ಕಳಸದ

KSRTC BMTC Strike: ಮಾರ್ಚ್​ ತಿಂಗಳ ಸಂಬಳ ರಿಲೀಸ್ ಆಗುತ್ತೆ.. ಆದ್ರೆ, ಸ್ವಲ್ಪ ತಡವಾಗುತ್ತೆ: ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ
ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ
Follow us
| Updated By: Digi Tech Desk

Updated on:Apr 07, 2021 | 1:19 PM

ಬೆಂಗಳೂರು: ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ನಾಲ್ಕು ನಿಗಮದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಏತನ್ಮಧ್ಯೆ ಮುಷ್ಕರಕ್ಕಿಳಿದಿರುವ ನೌಕರರಿಗೆ ಮಾರ್ಚ್​ ತಿಂಗಳದ ವೇತನ ಇನ್ನೂ ಸಿಕ್ಕಿಲ್ಲವಾದ್ದರಿಂದ ಸರ್ಕಾರ ಆಟ ಆಡಿಸಬಹುದು ಎಂಬ ಭಯವೂ ಇದೆ. ಮುಷ್ಕರ ಹತ್ತಿಕ್ಕಲು ಸರ್ಕಾರ ಸಂಬಳವನ್ನೇ ಅಸ್ತ್ರವನ್ನಾಗಿಸಿಕೊಳ್ಳಬಹುದೆಂದು ಸ್ವತಃ ಸಾರಿಗೆ ಸಿಬ್ಬಂದಿಗಳೇ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಇದಕ್ಕೆಲ್ಲಾ ತೆರೆ ಎಳೆದಿರುವ ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ, ವೇತನ ತಡೆ ವಿಚಾರ ನಮ್ಮ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್, ಮಾರ್ಚ್ ತಿಂಗಳು ಹಣಕಾಸು ವರ್ಷ ಅಂತ್ಯವಾಗುವ ಮಾಸ. ಹೀಗಾಗಿ ಈ ತಿಂಗಳ ವೇತನ ವಿಳಂಬವಾಗುವ ಸಾಧ್ಯತೆ ಇದೆ. ಇದರ ಹೊರತಾಗಿ ಮುಷ್ಕರ ನಿರತರ ಮಾರ್ಚ್ ತಿಂಗಳ ವೇತನಕ್ಕೆ ತಡೆ ನೀಡುವ ಯಾವುದೇ ವಿಚಾರ ನಮ್ಮ ಮುಂದೆ ಇಲ್ಲ. ಸದ್ಯಕ್ಕೆ ಇಂತಹ ನಿರ್ಧಾರಗಳ ಬಗ್ಗೆ ಪ್ರಸ್ತಾಪ ಇಲ್ಲ ಎನ್ನುವ ಮೂಲಕ ಸಂಬಳಕ್ಕೆ ಕತ್ತರಿ ಹಾಕುವ ಬಗ್ಗೆ ನಿರಾಕರಿಸಿದ್ದಾರೆ.

ಆದರೆ, ಇದೇ ಸಂದರ್ಭದಲ್ಲಿ 6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲ ಎನ್ನುವುದನ್ನೂ ಅವರು ತಿಳಿಸಿದ್ದು, 6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲವೆಂದು ಸರ್ಕಾರ ಈ ಮೊದಲೇ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರವೇ ಸ್ಪಷ್ಟನೆ ನೀಡಿರುವುದರಿಂದ ಅದರ ಬಗ್ಗೆ ಬೇರೆ ಮಾತಿಲ್ಲ. ಮುಷ್ಕರ ನಿರತರಿಗೆ ಆರ್ಥಿಕ ಪರಿಸ್ಥಿತಿ ಮನವರಿಕೆ ಮಾಡಿದ್ದೇವೆ. ಸದ್ಯಕ್ಕೆ ಸರ್ಕಾರದ ನಿರ್ದೇಶನದಂತೆ ಖಾಸಗಿ ಬಸ್ ಓಡಿಸಲಾಗುತ್ತಿದೆ ಎಂದು ಶಿವಯೋಗಿ ಕಳಸದ ವಿವರಿಸಿದ್ದಾರೆ.

ನೌಕರರಿಗಿದ್ದ ಆತಂಕವೇನು? ರಾಜ್ಯದಲ್ಲಿ ನಾಲ್ಕು ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸುಮಾರು ಒಂದೂಕಾಲು ಲಕ್ಷಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, ಇತರೆ ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳ ಇನ್ನೂ ವಿತರಣೆಯಾಗಿಲ್ಲ. ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ತೊಡಗುವುದು ಬಹುತೇಕ ಖಚಿತ ಎಂಬುದರ ಮುನ್ಸೂಚನೆ ಪಡೆದ ಸಾರಿಗೆ ನಿಗಮಗಳು ನೌಕರರ ಸಂಬಳ ವಿತರಣೆಗೆ ತಡೆ ನೀಡಲು ತಿಳಿಸಿವೆ ಎಂದು ನೌಕರರು ಮತ್ತಷ್ಟು ಆತಂಕದ ಮಡುವಿಗೆ ಬಿದ್ದಿದ್ದಾರೆ.

ಸಾರಿಗೆ ಸಿಬ್ಬಂದಿಯ ಮುಷ್ಕರವನ್ನು ಬ್ರೇಕ್​ ಹಾಕುವ ನಿಟ್ಟಿನಲ್ಲಿ ಹೇಗಾದರೂ ಮಾಡಿ ಅವರನ್ನು ಮಣಿಸಬೇಕು ಎಂಬಂತಹ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಂತೆ ಕಾಣುತ್ತಿದೆ. ಅಷ್ಟೂ ನೌಕರರಿಗೆ ಸಂಬಳ ತಡೆಹಿಡಿದರೆ ಜೀವನೋಪಾಯವಾದ ಸಂಬಳಕ್ಕೆ ಕತ್ತರಿಬಿದ್ದು, ಜೀವನ ಮತ್ತಷ್ಟು ದುಸ್ತರಗೊಳ್ಳಲಿದೆ. ಆಗ ನೌಕರರು ಮುಷ್ಕರ ನಿಲ್ಲಿಸಲಿದ್ದಾರೆ ಎಂಬುದು ಸರ್ಕಾರದ ಮುಂದಾಲೋಚನೆಯಾಗಿದೆ ಎಂದು ಕೆಎಸ್​ಆರ್​ಟಿಸಿ ಚಾಲಕರು ಬೆಂಗಳೂರಿನ ಮೆಜಿಸ್ಟಿಕ್​ನಲ್ಲಿ ಟಿವಿ9 ಡಿಜಿಟಲ್ ಜೊತೆ ಮಾತನಾಡುತ್ತಾ ತಮ್ಮ ಆತಂಕ ಹೊರಹಾಕಿದ್ದಾರೆ.

Published On - 1:02 pm, Wed, 7 April 21

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ