ರಾಷ್ಟ್ರನಾಯಕರೊಂದಿಗಿನ ಸಿಎಂ ಸಭೆಯ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದ್ದೇನು?
ಈ ಮಧ್ಯೆ ಬಿಎಸ್ವೈ ನಾಯಕತ್ವ ಬದಲಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ ಎಂಬ ಮಾಹಿತಿಯೂ ಸಿಕ್ಕಿತ್ತು. ಇದೀಗ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ.
ದೆಹಲಿ: ಬಿಜೆಪಿ ನಾಯಕರಾದ ಅಮಿತ್ ಷಾ, ಜೆ.ಪಿ.ನಡ್ಡಾ, ಅರುಣ್ಕುಮಾರ್ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ. ಕರ್ನಾಟಕ ಭವನದಿಂದ ಈಗಾಗಲೇ ಏರ್ಪೋರ್ಟ್ಗೆ ತೆರಳಿದ್ದಾರೆ. ಇನ್ನು ನಾಯಕರ ಜತೆಗಿನ ಸಭೆಯ ಬಳಿಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶೀಘ್ರದಲ್ಲೇ ಗುಡ್ನ್ಯೂಸ್ ಹೊರಬೀಳಲಿದೆ ಎಂದಿದ್ದರು. ಅದು ಬಿಟ್ಟು ಸಭೆಯಲ್ಲೇ ಏನಾಯಿತು ಎಂಬ ಬಗ್ಗೆ ಇನ್ನೂ ವಿಸ್ತಾರವಾಗಿ ಏನೂ ಹೇಳಿಲ್ಲ.
ಈ ಮಧ್ಯೆ ಬಿಎಸ್ವೈ ನಾಯಕತ್ವ ಬದಲಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ ಎಂಬ ಮಾಹಿತಿಯೂ ಸಿಕ್ಕಿತ್ತು. ಇದೀಗ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲಗಳೂ ಇಲ್ಲ. ಗೊಂದಲ ಇರುವುದು ಮಾಧ್ಯಮಗಳಲ್ಲಿ ಮಾತ್ರ ಎಂದು ಹೇಳಿದ್ದಾರೆ.
ಮೀಟಿಂಗ್ನಲ್ಲಿ.. ಸಂಪುಟ ವಿಸ್ತರಣೆಗಿಂತಲೂ ನಾಯಕತ್ವ ಬದಲಾವಣೆಗೆ ಹೆಚ್ಚು ಒತ್ತು ಕೊಟ್ರಾ ಅಮಿತ್ ಶಾ?