AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಸದ್ಯಕ್ಕೆ ಲಾಕ್​ಡೌನ್​ ಮಾಡಲ್ಲ.. ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್​ಗೆ ಸೂಚಿಸಿಯೂ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಆರೋಗ್ಯ ಸಚಿವ ಡಾ.ಕೆ.ಸುಧಾಕಾರ್ ಸಹ ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Karnataka Lockdown: ಸದ್ಯಕ್ಕೆ ಲಾಕ್​ಡೌನ್​ ಮಾಡಲ್ಲ.. ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್​ಗೆ ಸೂಚಿಸಿಯೂ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Skanda
|

Updated on:Apr 13, 2021 | 10:30 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಲಾಕ್​ಡೌನ್ ಮೊರೆ ಹೋಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹ ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದು ಬೀದರ್​ನ ಬಸವಕಲ್ಯಾಣದಲ್ಲಿ ಹೇಳಿಕೆ ನೀಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್ ಮಾಡಲು ಸೂಚಿಸಿದೆ ಎಂಬ ಸುಧಾಕರ್ ಹೇಳಿಕೆ ಬಗ್ಗೆ ಪ್ರತ್ಯುತ್ತರಿಸಿ ನಾನು ಕೂಡಾ ಸಲಹಾ ಸಮಿತಿಯಲ್ಲಿ ಇದ್ದೇನೆ. ಯಾರೂ ಲಾಕ್​ಡೌನ್​ಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಹೇಳಬೇಡಿ. ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ತಡೆಯಲು ಜನತೆ ಸಹಕಾರ ನೀಡಬೇಕು. ಜನರು ಇದನ್ನು ಮರೆತರೆ ಅನಾಹುತ ಆಗಲಿದೆ. ಕೊರೊನಾ ತಡೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ತೀರ್ಮಾನಿಸುತ್ತೇವೆ. ಏನೇನು ಮಾಡಬೇಕೆಂದು ನಂತರ ನಿರ್ಧರಿಸುತ್ತೇವೆ ಎಂದು ಹೇಳಿರುವ ಯಡಿಯೂರಪ್ಪ, ಸರ್ವಪಕ್ಷ ಸಭೆಗೆ ಬರುವುದಿಲ್ಲವೆಂಬ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಭೆ ಕರೆಯಿರಿ ಎಂದು ಅವರೇ ಹೇಳಿದ್ದು ಈಗ ಬರಲ್ಲ ಅಂತಾರೆ. ಸಭೆಗೆ ಕರೆಯುತ್ತೇವೆ, ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ – ಸಿದ್ದರಾಮಯ್ಯ

Karnataka Lockdown: 2ನೇ ಅಲೆ ಸಿಕ್ಕಾಪಟ್ಟೆ ಡೇಂಜರಸ್: ಆರ್ಥಿಕ ಚಟುವಟಿಕೆಗೆ ಬ್ರೇಕ್ ಹಾಕದೇ ತಡೆಗಟ್ಟುವುದು ಅಸಾಧ್ಯ, ಲಾಕ್​ಡೌನ್​ ಮುನ್ಸೂಚನೆ? (No Corona Lockdown in Karnataka do not mislead people says CM BS Yediyurappa)

Published On - 9:09 am, Tue, 13 April 21

Follow Us
Skanda
Skanda
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ