ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಲಾಕ್‌ಡೌನ್ ಮೊರೆ ಹೋಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹ ತಾಂತ್ರಿಕ ಸಲಹಾ ಸಮಿತಿ ಲಾಕ್‌ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದು ಬೀದರ್ನ ಬಸವಕಲ್ಯಾಣದಲ್ಲಿ ಹೇಳಿಕೆ ನೀಡಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಲಾಕ್‌ಡೌನ್ ಮಾಡಲು ಸೂಚಿಸಿದೆ ಎಂಬ ಸುಧಾಕರ್ ಹೇಳಿಕೆ ಬಗ್ಗೆ ಪ್ರತ್ಯುತ್ತರಿಸಿ ನಾನು ಕೂಡಾ ಸಲಹಾ ಸಮಿತಿಯಲ್ಲಿ ಇದ್ದೇನೆ. ಯಾರೂ ಲಾಕ್ಡೌನ್ಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಹೇಳಬೇಡಿ. ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೊನಾ ತಡೆಯಲು ಜನತೆ ಸಹಕಾರ ನೀಡಬೇಕು. ಜನರು ಇದನ್ನು ಮರೆತರೆ ಅನಾಹುತ ಆಗಲಿದೆ. ಕೊರೊನಾ ತಡೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ತೀರ್ಮಾನಿಸುತ್ತೇವೆ. ಏನೇನು ಮಾಡಬೇಕೆಂದು ನಂತರ ನಿರ್ಧರಿಸುತ್ತೇವೆ ಎಂದು ಹೇಳಿರುವ ಯಡಿಯೂರಪ್ಪ, ಸರ್ವಪಕ್ಷ ಸಭೆಗೆ ಬರುವುದಿಲ್ಲವೆಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಭೆ ಕರೆಯಿರಿ ಎಂದು ಅವರೇ ಹೇಳಿದ್ದು ಈಗ ಬರಲ್ಲ ಅಂತಾರೆ. ಸಭೆಗೆ ಕರೆಯುತ್ತೇವೆ, ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
Karnataka Lockdown News: ಲಾಕ್‌ಡೌನ್ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ – ಸಿದ್ದರಾಮಯ್ಯ
Karnataka Lockdown: 2ನೇ ಅಲೆ ಸಿಕ್ಕಾಪಟ್ಟೆ ಡೇಂಜರಸ್: ಆರ್ಥಿಕ ಚಟುವಟಿಕೆಗೆ ಬ್ರೇಕ್ ಹಾಕದೇ ತಡೆಗಟ್ಟುವುದು ಅಸಾಧ್ಯ, ಲಾಕ್‌ಡೌನ್ ಮುನ್ಸೂಚನೆ?
(No Corona Lockdown in Karnataka do not mislead people says CM BS Yediyurappa)
Published On - 9:09 am, Tue, 13 April 21