ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು: ಬಿ.ಸಿ. ಪಾಟೀಲ್

ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು - ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ

ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು: ಬಿ.ಸಿ. ಪಾಟೀಲ್
ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು: ಬಿ.ಸಿ. ಪಾಟೀಲ್
Follow us
ಸಾಧು ಶ್ರೀನಾಥ್​
|

Updated on:Apr 23, 2021 | 2:36 PM

ಬೆಂಗಳೂರು: ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ದೈನಂದಿನ ಕೃಷಿ ಚಟುವಟಿಕೆಗಳಿಗೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕರಿಸಬೇಕು. ಹೂವು, ಹಣ್ಣು,‌ ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್‌ಟಿಒ ಸೇರಿದಂತೆ ಯಾರೂ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಪ್ಪು. ಎಲ್ಲಾ ಇಲಾಖೆಗಳು, ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಸುರಕ್ಷತೆ ಮತ್ತು‌ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವ ಪಾಟೀಲ್ ಸೂಚಿಸಿದ್ದಾರೆ. (no covid 19 restrictions on agriculturists and related activities in karnataka says agriculture minister bc patil)

ಇದನ್ನೂ ಓದಿ: ಆಯಾಸವಿಲ್ಲದೆ ಆದಾಯ ತರುವ ಹುಣಸೆ ಬೆಳೆಗೆ ರಾಜ್ಯದಾದ್ಯಂತ ಉತ್ತಮ ಬೇಡಿಕೆ

Published On - 2:13 pm, Fri, 23 April 21

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ