ಬೆಂಗಳೂರು: ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ದೈನಂದಿನ ಕೃಷಿ ಚಟುವಟಿಕೆಗಳಿಗೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕರಿಸಬೇಕು. ಹೂವು, ಹಣ್ಣು, ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್‌ಟಿಒ ಸೇರಿದಂತೆ ಯಾರೂ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಪ್ಪು. ಎಲ್ಲಾ ಇಲಾಖೆಗಳು, ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಸುರಕ್ಷತೆ ಮತ್ತು ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವ ಪಾಟೀಲ್ ಸೂಚಿಸಿದ್ದಾರೆ.
(no covid 19 restrictions on agriculturists and related activities in karnataka says agriculture minister bc patil)
ಇದನ್ನೂ ಓದಿ: ಆಯಾಸವಿಲ್ಲದೆ ಆದಾಯ ತರುವ ಹುಣಸೆ ಬೆಳೆಗೆ ರಾಜ್ಯದಾದ್ಯಂತ ಉತ್ತಮ ಬೇಡಿಕೆ
Published On - 2:13 pm, Fri, 23 April 21