ಹಳ್ಳಿಗಳಿಂದ ಬೆಂಗಳೂರಿಗೆ ಜನರು; ವಾಪಸ್ಸಾಗುವವರಿಗೆ ಕೊವಿಡ್ ಪರೀಕ್ಷೆ ಇಲ್ಲದ ಕಾರಣ ಹೆಚ್ಚಿದ ಆತಂಕ

ವಿವಿಧ ಜಿಲ್ಲೆಗಳಿಂದ ಇಂದು ಮತ್ತು ನಾಳೆ ಬೆಂಗಳೂರಿಗೆ ಮರಳುವವರ ಸಂಖ್ಯೆ ಹೆಚ್ಚಿದ್ದು, ಈಗ ಪರೀಕ್ಷೆ ನಡೆಸದೇ ಇರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆಯೇ ಎಂಬ ಅಭಿಪ್ರಾಯ ಮೂಡುತ್ತಿದೆ.

ಹಳ್ಳಿಗಳಿಂದ ಬೆಂಗಳೂರಿಗೆ ಜನರು; ವಾಪಸ್ಸಾಗುವವರಿಗೆ ಕೊವಿಡ್ ಪರೀಕ್ಷೆ ಇಲ್ಲದ ಕಾರಣ ಹೆಚ್ಚಿದ ಆತಂಕ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 13, 2021 | 5:15 PM

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ನಾಳೆಯಿಂದ (ಜೂನ್ 14) ಮೊದಲ ಹಂತದ ಲಾಕ್​ಡೌನ್ ಸಡಿಲಿಕೆಯಾಗುತ್ತಿರುವ ಹೊತ್ತಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿಗೆ ರೈಲುಮಾರ್ಗದ ಮೂಲಕ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುತ್ತಿದ್ದಾರೆ. ಆದರೆ ಬೆಂಗಳೂರನ್ನು ಪ್ರವೇಶಿಸುವವರಿಗೆ ಕೊವಿಡ್ ಪರೀಕ್ಷೆ ನಡೆಸಲಾಗುತ್ತಿಲ್ಲ. ಇದು ಬೆಂಗಳೂರಿನಲ್ಲಿ ಮತ್ತೆ ಕೊವಿಡ್ ಸೋಂಕು ಹೆಚ್ಚಳಕ್ಕೆ ಕಾರಣವಾಗುವ ಆತಂಕ ಮೂಡಿಸಿದೆ.

ಸಿಎಂ ಯಡಿಯೂರಪ್ಪ ಬೆಂಗಳೂರು ನಗರಕ್ಕೆ ಹಳ್ಳಿಗಳಿಂದ ಮರಳುವವರಿಗೆ ಕೊವಿಡ್ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ. ಆದರೆ ಯಶವಂತಪುರ ರೈಲು ನಿಲ್ದಾಣದಲ್ಲಿ ಕೊವಿಡ್ ಪರೀಕ್ಷೆ ನಡೆಸಲಾಗುತ್ತಿಲ್ಲ. ವಿವಿಧ ಜಿಲ್ಲೆಗಳಿಂದ ಇಂದು ಮತ್ತು ನಾಳೆ ಬೆಂಗಳೂರಿಗೆ ಮರಳುವವರ ಸಂಖ್ಯೆ ಹೆಚ್ಚಿದ್ದು, ಈಗ ಪರೀಕ್ಷೆ ನಡೆಸದೇ ಇರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆಯೇ ಎಂಬ ಅಭಿಪ್ರಾಯ ಮೂಡುತ್ತಿದೆ.

ರಾಜ್ಯದ 19 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿರುವುದರಿಂದ ಬೆಂಗಳೂರಿನತ್ತ ಜನರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಹೀಗಾಗಿ ಕೊವಿಡ್ ಟೆಸ್ಟಿಂಗ್ ಹೆಚ್ಚಳ ಮಾಡುವ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಆದರೂ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸುವವರಿಗೆ ಕೊವಿಡ್ ಪರೀಕ್ಷೆ ಮಾಡಲಾಗುತ್ತಿಲ್ಲ.

ಖಾಸಗಿ ಶಾಲಾ ಶುಲ್ಕದ ವಿಚಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆ ಮಾತನಾಡಿ ಕಾನೂನು ಚೌಕಟ್ಟಲ್ಲಿ ಏನೇನು ಮಾಡಬಹುದೆಂದು ಚಿಂತಿಸಿ ಕ್ರಮ ಕೈಗೊಳ್ಳುತ್ತೇವೆ. ಜೂನ್ 16ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಾರೆ. ಅವರಿಗೆ ವಹಿಸಿದ ಜವಾಬ್ಧಾರಿ ವಹಿಸಲು ಸಹಕಾರ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ನಿನ್ನೆಯ ಸೋಂಕಿತರೆಷ್ಟು? ಕರ್ನಾಟಕದಲ್ಲಿ ನಿನ್ನೆ (ಜೂನ್ 12)  9,785 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2,454 ಜನರಿಗೆ ಸೋಂಕು ಖಚಿತವಾಗಿದೆ. ರಾಜ್ಯದಲ್ಲಿ 144 ಜನರು ಕೊವಿಡ್​ನಿಂದ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ 21 ಜನರು ನಿಧನರಾಗಿದ್ದಾರೆ. ರಾಜ್ಯದಲ್ಲಿ ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ 27,57,324ಕ್ಕೆ ಏರಿಕೆಯಾಗಿದೆಸೋಂಕಿತರ ಪೈಕಿ ಈವರೆಗೆ 25,32,719 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,788 ಜನರ ಸಾವನ್ನಪ್ಪಿದ್ದಾರೆ

ಇದೇ ಅವಧಿಯಲ್ಲಿ ರಾಜ್ಯದಲ್ಲಿ 21, 614 ಜನರು ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 1,91,796 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಇದನ್ನೂ ಓದಿ: ಕೊವಿಡ್ ನಿಯಂತ್ರಿಸುವಲ್ಲಿ ಯಶಸ್ವಿಯಾದ ಉತ್ತರ ಕನ್ನಡ ಜಿಲ್ಲಾಡಳಿತ; 6 ಪಂಚಾಯತಿ ವ್ಯಾಪ್ತಿಯ ಗ್ರಾಮಗಳು ಕೊರೊನಾ ಮುಕ್ತ

ಕೊವಿಡ್​ ಸಮಯದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಲೆ ಜ್ಞಾನ ಹೆಚ್ಚಿಸುವ ಕೆಲವು ಸಲಹೆಗಳು ಹೀಗಿವೆ (No Covid testing for People arrives to Bengaluru from villages)

Published On - 4:29 pm, Sun, 13 June 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ