ಬಸ್ ಚಾಲಕರ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC; ವಿಶ್ರಾಂತಿ ಕಡ್ಡಾಯ

| Updated By: Rakesh Nayak Manchi

Updated on: Mar 28, 2024 | 8:54 AM

ಕೆಎಸ್​ಆರ್​ಟಿಸಿ ಬಸ್​ ಚಾಲಕರಿಗೆ ಈ ಹಿಂದೆ ಡಬಲ್​ ಡ್ಯೂಟಿ ಮಾಡುವ ಅನಿವಾರ್ಯವಿತ್ತು. ಇದರಿಂದಾಗಿ ಬಸ್ ಅಪಘಾತಕ್ಕೀಡಾಗುತ್ತಿದ್ದವು. ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಹೆಚ್ಚುವರಿ ಡ್ಯೂಟಿಯಿಂದ ಮುಕ್ತಿ ನೀಡಲಾಗಿದೆ. ಅಲ್ಲದೆ, ವಿಶ್ರಾಂತಿ ಕಡ್ಡಾಯ ಮಾಡಲಾಗಿದೆ. ರಾತ್ರಿ ಮತ್ತು ದೂರದ ಪ್ರಯಾಣದ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಆದೇಶಿಸಲಾಗಿದೆ.

ಬಸ್ ಚಾಲಕರ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC; ವಿಶ್ರಾಂತಿ ಕಡ್ಡಾಯ
ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಹೆಚ್ಚುವರಿ ಡ್ಯೂಟಿಯಿಂದ ಮುಕ್ತಿ ನೀಡಲಾಗಿದೆ. ಅಲ್ಲದೆ, ವಿಶ್ರಾಂತಿ ಕಡ್ಡಾಯ ಮಾಡಲಾಗಿದೆ.
Follow us on

ಬೆಂಗಳೂರು, ಮಾ.28: ಕೆಎಸ್​ಆರ್​ಟಿಸಿ (KSRTC) ಬಸ್​ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ನಡೆಯುತ್ತಿದ್ದವು. ಇದಕ್ಕೆ ಕಾರಣ ಹೆಚ್ಚುವರಿ ಡ್ಯೂಟಿ ಮತ್ತು ವಿಶ್ರಾಂತಿ ಇಲ್ಲದೇ ಇರುವುದು. ಇದೇ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್​ಆರ್​ಟಿಸಿ, ಬಸ್​ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ಅಲ್ಲದೆ, ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.

ಇಂದಿನಿಂದ ರಾತ್ರಿ ಮತ್ತು ದೂರದ ಪ್ರಯಾಣದ ನಂತರ ಚಾಲಕರು ವಿಶ್ರಾಂತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಎಂಟು ಗಂಟೆಗಳಿಗಿಂತ ಹೆಚ್ಚು ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಸೈಕಲ್ ಸವಾರ ಸ್ಥಳದಲ್ಲೇ ಸಾವು

ಕೆಎಸ್​ಆರ್​ಟಿಸಿ ಬಸ್​ಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಡಬಲ್ ಡ್ಯೂಟಿ ಮತ್ತು ರಾತ್ರಿ ವಿಶ್ರಾಂತಿಯನ್ನು ನೀಡದಿರುವುದರಿಂದ ನಿದ್ದೆಗೆಟ್ಟು ಬಸ್ ಚಲಾಯಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಮಿತಿಯು ಕೆಎಸ್​ಆರ್​ಟಿಸಿಗೆ ವರದಿ ಸಲ್ಲಿಸಿತ್ತು.

ಇದರ ಬೆನ್ನಲ್ಲೇ, ವರದಿ ಆಧರಿಸಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಡಬಲ್​ ಡ್ಯೂಟಿಗೆ ಬ್ರೇಕ್ ಹಾಕಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ. ಇದರಿಂದ ಕೆಎಸ್ಆರ್​ಟಿಸಿ ಬಸ್​ಗಳ ಅಪಘಾತಗಳು ತಪ್ಪುತ್ತವೆ. ನೂರಾರು ಅಮಾಯಕರ ಪ್ರಾಣ ಉಳಿಸಲು ಸಹಾಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ