ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ: ಶಾಸಕ ಬಸವರಾಜು ಶಿವಗಂಗಾ

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಡಿಮ್ಯಾಂಡ್ ಮೇಲೆ ಡಿಮ್ಯಾಂಡ್​ ಕೇಳಿಬರ್ತಿದೆ. ಒಂದೊಂದೇ ಸಮುದಾಯಗಳು ತಮ್ಮ ದಾಳವನ್ನ ಉರುಳಿಸ್ತಿವೆ. ನಮ್ಮ ಸಮಯದಾಯಕ್ಕೂ ಸಿಎಂ ಮಾಡಿ, ನಮ್ಮ ಸಮಯದಾಯಕ್ಕೂ ಸಿಎಂ ಮಾಡಿ ಅಂತಾ ಮುಗಿಬಿದ್ದಿದ್ದಾರೆ. ಇದರ ಮಧ್ಯೆ ಈ ಬಾರಿಯೇ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅದರಲ್ಲಿ ಯಾವುದೇ ಸಂಶವಿಲ್ಲ ಎಂದು ಶಾಸಕ ಬಸವರಾಜು ವಿ ಶಿವಗಂಗಾ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ: ಶಾಸಕ ಬಸವರಾಜು ಶಿವಗಂಗಾ
ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ: ಶಾಸಕ ಬಸವರಾಜು ಶಿವಗಂಗಾ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 28, 2024 | 6:58 PM

ದಾವಣಗೆರೆ, ಜೂನ್ 28: ಈ ಬಾರಿಯೇ ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಯಾವುದೇ ಸಂಶವಿಲ್ಲ ಎಂದು ಶಾಸಕ ಬಸವರಾಜು ವಿ ಶಿವಗಂಗಾ (Basavaraju V Shivaganga) ಮತ್ತೆ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹತ್ತು ಜನರನ್ನ ಮಾಡಲಿ ಆದರೆ ಡಿಕೆ ಶಿವಕುಮಾರ್ ಅವರನ್ನ ಮೊದಲು ಸಿಎಂ ಮಾಡಬೇಕು. ಡಿಕೆ ಶಿವಕುಮಾರ್ ಅವರ ಸಂಘಟನೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು. ಅವರೇ ಸಿಎಂ ಆಗಬೇಕಿತ್ತು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಡಿಸಿಎಂ ಆಗಿದ್ದಾರೆ ಎಂದಿದ್ದಾರೆ.

ಜಾತಿಗೊಂದು ಡಿಸಿಎಂ ಮಾಡುವುದಾದರೆ ನಮ್ಮ ಅಭ್ಯಂತರವಿಲ್ಲ ಆದರೆ ಡಿಕೆ ಶಿವಕುಮಾರ್​ ಅನ್ನು ಸಿಎಂ ಮಾಡಿ ನಂತರ ಡಿಸಿಎಂಗಳನ್ನ ಒಂದು ಡಜನ್ ಮಾಡಲಿ. ಅನೇಕ ಶಾಸಕರ ಬೆಂಬಲ ಡಿಕೆ ಶಿವಕುಮಾರ್​ ಅವರಿಗೆ ಇದೇ ಶಾಸಕರ ಹೆಸರು ಪ್ರಸ್ತಾಪ ಮಾಡಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಎಲ್ಲಾ ಜಾತಿಯವರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ ಹಾಗಂತ ಜಾತಿಗೊಂದು ಡಿಸಿಎಂ ಹುದ್ದೆ ನೀಡಲು ಸಾಧ್ಯವೆ? ರಾಜ್ಯದ ಎಲ್ಲಾ ಸಮುದಾಯದ ಪರವಾಗಿ ಸಮರ್ಥ ನಾಯಕ ಎಂಬ ಕಾರಣಕ್ಕೆ ಡಿಕೆ ಶಿವಕುಮಾರ್​ ಅವರನ್ನ ಡಿಸಿಎಂ ಮಾಡಿರುವುದು. ಡಿಸಿಎಂ ಹುದ್ದೆ ಬಗ್ಗೆ ಯಾರು ಮಾತನಾಡಬಾದೆಂದು ಹೈಕಮಾಂಡ್ ಹೇಳಿದೆ. ಹಿರಿಯರೇ ಈ ರೀತಿ ಹೇಳಿಕೆ ನೀಡುವಾಗ ನಾವು ಅವರನ್ನೇ ಪಾಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ, ಇದು ಸರಿ ಅಲ್ಲ: ಶಾಸಕ ಲಕ್ಷ್ಮಣ ಸವದಿ

ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು, ಎಲ್ಲದಕ್ಕೂ ಹೈಕಮಾಂಡ್ ಇದೆ, ಇದು ಸ್ವಾಮೀಜಿಗಳ ಕೆಲಸವಲ್ಲ. ಎಲ್ಲಾ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ, ಇದು ಸರಿ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವಾಮೀಜಿಗಳು ಹೇಳುತ್ತಿರುವುದರ ಹಿಂದೆ ಬಿಜೆಪಿ ನಾಯಕರ ಕೈವಾಡ ಇರಬಹುದು: ಎನ್ ಚಲುವರಾಯಸ್ವಾಮಿ

ಹೈಕಮಾಂಡ್​ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಕಾಂಗ್ರೆಸ್​ನಲ್ಲಿ ಸರಿ ಇಲ್ಲ ಎಂದು ಬಿಜೆಪಿಗರು ಹುಟ್ಟು ಹಾಕುತ್ತಿದ್ದಾರೆ. ಕಾಂಗ್ರೆಸ್ ಚೆನ್ನಾಗಿ ಕೆಲಸ ಮಾಡುತ್ತಿದೆ ಅಂತಾ ಅವರು ಕೇಳಲು ಆಗಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು