ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆ ನೋಡಲು ಗೋವಾಗೆ ಬಂದವರಿಗೆ ಭಾರೀ ನಿರಾಸೆ.. ಗೋವಾ ಬೀಚುಗಳೇ ಗತಿ!

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ಹೀಗಾಗಿ ಬೆಳಗಾವಿಯಿಂದ ಬಂದ ಜನ ಸಾಮಾನ್ಯರಿಗೆ, ಅಭಿಮಾನಿಗಳಿಗೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರಿಗೆ ಗೋವಾದ ದಿ ಲೀಲಾ ಪ್ಯಾಲೇಸ್ ಹೋಟೆಲ್‌ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿಲ್ಲ. ಹೀಗಾಗಿ ಮದುವೆಗೆ ಬಂದ ಮಂದಿ ಬೀಜ್​ನಲ್ಲಿ ಕಾಲ ಕಳೆಯುತ್ತಿದ್ದಾರೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆ ನೋಡಲು ಗೋವಾಗೆ ಬಂದವರಿಗೆ ಭಾರೀ ನಿರಾಸೆ.. ಗೋವಾ ಬೀಚುಗಳೇ ಗತಿ!
ಗೋವಾದ ದಿ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ಬಿಗಿ ಭದ್ರತೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Nov 27, 2020 | 11:23 AM

ಗೋವಾ: ರಾಜಧಾನಿ ದೆಹಲಿ ವಾಯುಮಾಲಿನ್ಯದಿಂದ ತುಂಬಿದ್ದು ಗ್ಯಾಸ್ ಚೇಂಬರ್​ನಂತಾಗಿದೆ. ಹೀಗಾಗಿ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಗ್ಯಾಸ್ ಚೇಂಬರ್​ನಂತಿರುವ ರಾಜಧಾನಿಯನ್ನು ತೊರೆದು ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ.

ಇದೇ ವೇಳೆ.. ಬೆಳಗಾವಿಯ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪುತ್ರ ಮೃಣಾಲ್ ವಿವಾಹವನ್ನು ಭದ್ರಾವತಿಯ ಶಾಸಕ ಬಿ‌.ಕೆ.ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ್ ಅವರ ಪುತ್ರಿ ಡಾ. ಹಿತಾ ಜೊತೆ ಇಂದು ಗೋವಾದಲ್ಲಿ ನಡೆದಿದೆ. ಈ ಮದುವೆಯಲ್ಲಿ VVIPಯಾಗಿ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಆದ್ರೆ ಇದರಿಂದ ಬೆಳಗಾವಿಯಿಂದ ಬಂದ ಲಕ್ಷ್ಮೀ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.

ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ವಿವಾಹ ಹಿನ್ನೆಲೆಯಲ್ಲಿ ದಿ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯಲಿರುವ ವಿವಾಹದಲ್ಲಿ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಸದ್ಯ ಈಗ ಸೋನಿಯಾ ಗಾಂಧಿ ಅದೇ ಹೋಟೆಲ್‌ನಲ್ಲಿ ತಂಗಿದ್ದಾರೆ. ಹೀಗಾಗಿ ದಿ ಲೀಲಾ ಪ್ಯಾಲೇಸ್‌ಗೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪಾಸ್ ಇದ್ದ ವಾಹನಗಳಿಗಷ್ಟೇ ಹೋಟೆಲ್​ಗೆ ಎಂಟ್ರಿ ನೀಡಲು ಅವಕಾಶ ನೀಡಲಾಗುತ್ತಿದೆ. ಆದರೆ ಬೆಳಗಾವಿಯಿಂದ ಮದುವೆ ನೋಡಲು ಬಂದವರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ.

ಮದುವೆ ನೋಡಲು ಬಂದವರು ಬೀಜ್​ನಲ್ಲಿ ಕಾಲಹರಣ: ಹೆಬ್ಬಾಳ್ಕರ್ ಮಗನ ಮದುವೆಗೆ ಬಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರು, ಜನತೆ ಪೇಚಿಗೆ ಸಿಲುಕಿದ್ದಾರೆ. ಹೋಟೆಲ್ ಒಳಗೆ ಎಂಟ್ರಿ ಇಲ್ಲದ ಕಾರಣ ಬೆಳಗಾವಿ ಜನರಿಗೆ ಮದುವೆ ನೋಡುವ ಭಾಗ್ಯ ಕೈ ತಪ್ಪಿದೆ. ಮದುವೆಗೆಂದು ಬಂದವರು ಅನಿವಾರ್ಯವಾಗಿ ಗೋವಾದ ಬೀಚ್​ನಲ್ಲಿ ಸುತ್ತಾಡ್ತಿದ್ದಾರೆ.

ಮದುವೆ ನೋಡಲೆಂದು ಬೆಳಗಾವಿಯಿಂದ ಬಂದಿದ್ದೇವೆ. ಇಲ್ಲಿ ಹೋಟೆಲ್ ಸಿಬ್ಬಂದಿ ನಮ್ಮನ್ನ ಒಳಗೆ ಪ್ರವೇಶಕ್ಕೆ ಅವಕಾಶ ಕೊಡುತ್ತಿಲ್ಲ. ನಮಗೆ ಇದು ಭಾರೀ ನಿರಾಸೆ ಉಂಟಾಗುವಂತೆ ಮಾಡಿದೆ. ಲಕ್ಷ್ಮೀ ಮೇಡಂ ಅವರಿಗೇ ಫೋನ್ ಮಾಡಿದ್ದೇವೆ. ಅವರು ಬಂದು ನಮ್ಮನ್ನ ಒಳಗೆ ಕರೆಸಿಕೊಳ್ಳುವ ನಿರೀಕ್ಷೆ ಇದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮದುವೆಗೆ ಕ್ಷಣಗಣನೆ! ಸೋನಿಯಾ ಗಾಂಧಿ ಮದುವೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ

Published On - 11:23 am, Fri, 27 November 20

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ