AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆ ಆರ್ಭಟಕ್ಕೆ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್: ಭಾರತೀಯ ಪುರಾತತ್ವ ಇಲಾಖೆ ಆದೇಶ

ಕೊರೊನಾ ಎರಡನೇ ಅಲೆ ತೀವ್ರತೆಯಿಂದಾಗಿ ಐತಿಹಾಸಿಕ ಸ್ಮಾರಕಗಳನ್ನು ಬಂದ್ ಮಾಡಲಾಗಿದ್ದು, ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಐತಿಹಾಸಿಕ ಪ್ರವಾಸಿ ತಾಣವಾದ ಗೋಲಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ್, ಬೇಸಿಗೆ ಅರಮನೆ ಸೇರಿದಂತೆ ಇತರೆ ಸ್ಮಾರಕಗಳಿಗೆ ಪ್ರವೇಶವನ್ನು ತಡೆಹಿಡಿಯಲಾಗಿದೆ.

ಕೊರೊನಾ ಎರಡನೇ ಅಲೆ ಆರ್ಭಟಕ್ಕೆ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್: ಭಾರತೀಯ ಪುರಾತತ್ವ ಇಲಾಖೆ ಆದೇಶ
ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್
sandhya thejappa
| Updated By: shruti hegde|

Updated on: Apr 16, 2021 | 11:04 AM

Share

ವಿಜಯಪುರ: ಕೊವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಎರಡನೇ ಅಲೆ ಆರ್ಭಟದ ಹೆಚ್ಚಳ ಭೀತಿ ಕೂಡಾ ರಾಜ್ಯದ ಜನರಿಗೆ ಕಾಡುತ್ತಿದೆ. ಈ ನಿಟ್ಟಿನಲ್ಲಿ ಭಾರತೀಯ ಪುರಾತತ್ವ ಇಲಾಖೆ ವ್ಯಾಪ್ತಿಯಲ್ಲಿರುವ ಐತಿಹಾಸಿಕ ಸ್ಮಾರಕ ಪ್ರವೇಶವನ್ನು ಬಂದ್ ಮಾಡಲಾಗಿದೆ. ಈ ಕುರಿತಂತೆ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಇನ್ನೂ ವಿವಿಧ ಜಿಲ್ಲೆಗಳ ಐತಿಹಾಸಿಕ ಸ್ಮಾರಕಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. 

ವಿಜಯಪುರ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಬಂದ್ ಮಾಡಲಾಗಿದ್ದು, ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಐತಿಹಾಸಿಕ ಪ್ರವಾಸಿ ತಾಣವಾದ ಗೋಲಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ್, ಬೇಸಿಗೆ ಅರಮನೆ ಸೇರಿದಂತೆ ಇತರೆ ಸ್ಮಾರಕಗಳಿಗೆ ಪ್ರವೇಶವನ್ನು ತಡೆಹಿಡಿಯಲಾಗಿದೆ. ಮುಂಬರುವ ಮೇ 15ರ ವರೆಗೂ ಪ್ರವೇಶ ನಿಷೇಧಕ್ಕೆ ಆದೇಶ ಹೊರಡಿಸಿದ್ದು, ವಾಯು ವಿಹಾರಕ್ಕೆಂದು ಗೋಲಗುಮ್ಮಟ ಆವರಣಕ್ಕೆ ಪ್ರವೇಶಿಸುವುದನ್ನೂ ನಿಷೇಧಿಸಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಭಾರತೀಯ ಪುರಾತತ್ವ ಇಲಾಖೆ ಈ ಕ್ರಮ ಕೈಗೊಂಡಿದೆ.

ಹಾಸನದ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ದೇವಾಲಯದ ಬಾಗಿಲು ಬಂದ್ ಕೊರೊನಾ ಹಾವಳಿ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಇಂದಿನಿಂದ ಐತಿಹಾಸಿಕ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ದೇವಾಲಯಕ್ಕೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಕೇಂದ್ರ ಪುರಾತತ್ವ ಇಲಾಖೆ ಆದೇಶದಂತೆ ಮೇ 15ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ಕಳೆದ ವರ್ಷ ಕೂಡ ಲಾಕ್​ಡೌನ್ ಕಾರಣದಿಂದ ದೇಗುಲವನ್ನು ಬಂದ್ ಮಾಡಲಾಗಿತ್ತು.

ಬೆಳಗ್ಗೆ ಮತ್ತು ಸಂಜೆ ಪ್ರತಿನಿತ್ಯ ಪೂಜೆ ನಡೆಸಲು ಅರ್ಚಕರಿಗೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗುತ್ತಿದೆ. ಕೇಂದ್ರದ ಆದೇಶದಿಂದ ಇದೇ ತಿಂಗಳು 23 ಮತ್ತು 24ರಂದು ನಡೆಯಲಿರುವ ಬ್ರಹ್ಮರಥೋತ್ಸವ ಆಚರಣೆಯ ಮೇಲೂ ಪರಿಣಾಮವಾಗುವ ಸಾಧ್ಯತೆ ಇದೆ.

ನಿನ್ನೆಯಿಂದ ವಾರ್ಷಿಕ ಉತ್ಸವದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿತ್ತು. ಇದೀಗ ದಿಢೀರ್ ದೇವಾಲಯ ಬಂದ್ ಆದೇಶದಿಂದ ಭಕ್ತರಿಗೆ ಭಾರೀ ನಿರಾಸೆ ಉಂಟಾಗಿದೆ. ಈಗಾಗಲೇ ದೇವರ ದರ್ಶನಕ್ಕೆ ಬಂದಿದ್ದ ಭಕ್ತಾದಿಗಳು ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿನ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಬೀಗ ಹುನಗುಂದ ತಾಲ್ಲೂಕಿನ ಐತಿಹಾಸಿಕ ಐಹೊಳೆ, ಬಾದಾಮಿ ಹಾಗೂ ಪಟ್ಟದಕಲ್ಲು, ಮಹಾಕೂಟ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿಗಳಿಲ್ಲದೇ ಪ್ರವಾಸಿತಾಣಗಳೆಲ್ಲ ಖಾಲಿ ಖಾಲಿ ಅನಿಸುತ್ತಿದೆ.

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯನ್ನು ನಿರ್ಲಕ್ಷ್ಯ ಮಾಡಬೇಡಿ..; ಜೂನ್​ ಮೊದಲ ವಾರದ ಹೊತ್ತಿಗೆ ಮತ್ತಷ್ಟು ಭೀಕರತೆ ಸೃಷ್ಟಿಸಲಿದೆ ಸೋಂಕು !

ಕೊರೊನಾ ಸೋಂಕಿತರ ಪತ್ತೆಗೆ ಮೊಬೈಲ್ ಟೆಸ್ಟಿಂಗ್ ವ್ಯಾನ್​ಗಳ ಮೊರೆ ಹೋದ ಕಲಬುರಗಿ ಜಿಲ್ಲಾಡಳಿತ

(No entry for Historical Monuments for corona 2nd wave spread in karnataka)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!