ಆರ್ಮಿ ಕ್ಯಾಂಟೀನ್​ಗಳಿಗೆ ಅಬಕಾರಿ ಸುಂಕ ವಿಧಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಆರ್ಮಿ ಕ್ಯಾಂಟೀನ್​ಗಳಿಗೆ ಯಾವುದೇ ಕಾರಣಕ್ಕೂ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಕುರಿತ ವರದಿಗಳ ಬಗ್ಗೆ ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ ಅವರು, ಮಿಲಿಟರಿ ಕ್ಯಾಂಟೀನ್​​ಗಳಿಗೆ ಕರ್ನಾಟಕ ಸರ್ಕಾರ ಎಕ್ಸೈಸ್ ಡ್ಯುಟಿ ವಿಧಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಮಾಜಿ ಸೈನಿಕರ ಕಡೆಯಿಂದ ಮೆಚ್ಚುಗೆ ವ್ಯಕ್ತವಾಯಿತು.

ಆರ್ಮಿ ಕ್ಯಾಂಟೀನ್​ಗಳಿಗೆ ಅಬಕಾರಿ ಸುಂಕ ವಿಧಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ

Updated on: May 28, 2025 | 2:08 PM

ಬೆಂಗಳೂರು, ಮೇ 28: ಆರ್ಮಿ ಕ್ಯಾಂಟೀನ್​​ಗಳಿಗೆ ಪೂರೈಕೆ ಮಾಡುವ ಮದ್ಯದ ಅಬಕಾರಿ ತೆರಿಗೆ ಹೆಚ್ಚಳಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress Govt) ಮುಂದಾಗಿದೆ ಎಂಬ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಲ್ಲಗಳೆದಿದ್ದಾರೆ. ಆಪರೇಷನ್ ಸಿಂಧೂರ್ ಯಶಸ್ಸಿನ ಸಂಭ್ರಮ ಆಚರಣೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಮಿ ಕ್ಯಾಂಟೀನ್ ವಸ್ತುಗಳಿಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಕ್ಯಾಂಟೀನ್​​ಗಳಿಗೆ ಕರ್ನಾಟಕ ಸರ್ಕಾರ ಎಕ್ಸೈಸ್ ಡ್ಯುಟಿ ವಿಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಹಾಗೆ, ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಈ ವಿಚಾರವನ್ನು ಘೋಷಣೆ ಮಾಡುತ್ತಿದ್ದಂತೆಯೇ ಸಭೆಯಲ್ಲಿ ನೆರದಿದ್ದವರು ಚಪ್ಪಾಳೆ ಮೂಲಕ ಸ್ವಾಗತಿಸಿದರು.

ಇದನ್ನೂ ಓದಿ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಆರ್​ಟಿಪಿಸಿಆರ್ ಲ್ಯಾಬ್ ಪುನರಾರಂಭ
ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ
ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು

ನಿವೃತ್ತ ಸೇನಾ ಸಿಬ್ಬಂದಿಯ ಕಲ್ಯಾಣಕ್ಕಾಗಿ ಎಕ್ಸ್ ಸರ್ವಿಸ್ ಮೆನ್ ವೆಲ್ಫೇರ್ ಕಾರ್ಪೊರೇಷನ್ ಸ್ಥಾಪಿಸಬೇಕೆಂಬ ಮನವಿ ಇದೆ. ಅದನ್ನು ಸ್ಥಾಪಿಸುವ ಸಂಬಂಧ ಕಾರ್ಯಪ್ರವೃತ್ತರಾಗಲಿದ್ದೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ನೀವೆಲ್ಲ ದೇಶದ ಜತೆಗಿದ್ದೀರಿ. ನಾವು ನಿಮ್ಮ ಜತೆಗಿದ್ದೇವೆ ಎಂದು ಮಾಜಿ ಸೈನಿಕರನ್ನು ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು.

‘ಜೈ ಹಿಂದ್’ ಕಾರ್ಯಕ್ರಮದ ವಿಡಿಯೋ


ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಸಿ ವೇಣುಗೋಪಾಲ್ ಅವರು ಆರ್ಮಿ ಜಾಕೆಟ್ ಧರಿಸಿದರು.

ಇದನ್ನೂ ಓದಿ: ಯೋಧರು ಖರೀದಿಸುವ ಮದ್ಯದ ತೆರಿಗೆ ಹೆಚ್ಚಿಸಲು ಮುಂದಾದ ಕಾಂಗ್ರೆಸ್ ಸರ್ಕಾರ

ಆರ್ಮಿ ಕ್ಯಾಂಟೀನ್​​ನಲ್ಲಿ ಮಾರಾಟ ಮಾಡುವ ಮದ್ಯದ ಮೇಲಿನ ತೆರಿಗೆಯನ್ನೂ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಕೆಲವು ದಿನಗಳ ಹಿಂದೆ ತಿಳಿಸಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಮೂರು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದೆ. ಅದರ ಬೆನ್ನಲ್ಲೇ ಆರ್ಮಿ ಕ್ಯಾಂಟೀನ್​ಗೂ ಅಬಕಾರಿ ಸುಂಕ ವಿಧಿಸುವ ಸುಳಿವಿನ ಬಗ್ಗೆ ವಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Wed, 28 May 25

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us