ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

No ghar wapsi for congress mlas: ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್
Follow us
ಸಾಧು ಶ್ರೀನಾಥ್​
|

Updated on:Jul 06, 2021 | 12:33 PM

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿದ್ದಂತೆ ಪ್ರಮುಖ ಪ್ರತಿಪಕ್ಷವಾದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಭಿನ್ನಮತ ಮುಂದುವರಿದಿದೆ. ಒಂದಷ್ಟು ದಿನ ‘ಮುಂದಿನ ಮುಖ್ಯಮಂತ್ರಿ’ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಗಳು ನಡೆದವು. ಅದಾದ ಬಳಿಕ ಈಗ ಘರ್ ವಾಪಸಿ ಬಗ್ಗೆ ಚರ್ಚೆ ಬಿಸಿಯೇರಿದೆ. ಮುಖ್ಯವಾಗಿ ರಾಜ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಿನ್ನ ನಿಲುವುಗಳನ್ನು ತಳೆದಿದ್ದಾರೆ.

ಪಕ್ಷ ಬಿಟ್ಟು ಹೋದವರ ಘರ್ ವಾಪಸಾತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಪಕ್ಷ ಬಿಟ್ಟು ಹೋದ ಶಾಸಕರನ್ನ ವಾಪಸ್ ಸೇರಿಸಿಕೊಳ್ಳೋ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಕಡ್ಡಿಮುರಿದಂಗೆ ಹೇಳಿದ್ದಾರೆ.

ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಟಿವಿ9 ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನು ಹೇಳಿದ್ದರು?: ಇಷ್ಟಕ್ಕೂ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸೇರಿದ್ದ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇನೆಂದ್ರೆ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದವರನ್ನು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುತ್ತೇವೆ ಅಂದಿದ್ದರು.

ಆಪರೇಷನ್ ಕಮಲದಲ್ಲಿ ಪಕ್ಷ ತೊರದವರಿಗೆ ಅವಕಾಶ ಇದೆ. ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ ಸೇರಲು ಅವಕಾಶ ಇದೆ. ಕಾಂಗ್ರೆಸ್‌ಗೆ ಮತ್ತೆ ಸೇರಲು ಅರ್ಜಿ ಹಾಕಿದರೆ ಪರಿಶೀಲಿಸುತ್ತೇವೆ ಎಂದು ಟಿವಿ9 ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು.

ರಾಜಕೀಯದಲ್ಲಿ ಒಂದೇ ನಿಲುವು ತಾಳಲು ಸಾಧ್ಯವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಬದಲಿಸಬೇಕಾಗುತ್ತದೆ. ಅರ್ಜಿ ಹಾಕಿದ್ದಲ್ಲಿ ವಾಪಸ್ ಕರೆಸಿಕೊಳ್ಳುವ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಪಕ್ಷ ತ್ಯಜಿಸಿ BJP ಸರ್ಕಾರದಲ್ಲಿ ಮಂತ್ರಿಯಾದವರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿಸಿದ್ದರು.

(No ghar wapsi for 17 congress mlas who deserted party to join bjp clarifies clp leader siddaramaiah)

Published On - 12:08 pm, Tue, 6 July 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM