ಸುಧಾಕರ್ ಚಿಕ್ಕಬಳ್ಳಾಪುರದಿಂದ ಲೋಕಸಭೆಗೆ ಸ್ಪರ್ಧಿಸಲಿಚ್ಛಿಸಿದ್ದರೆ ತಪ್ಪೇನೂ ಇಲ್ಲ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

|

Updated on: Feb 09, 2024 | 6:06 PM

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಬಹಳ ದುರ್ಬಲವಾಗಿತ್ತು. ಆದರೆ ಸುಧಾಕರ್ ಬಿಜೆಪಿಯಿಂದ ವಿಧಾನ ಸಭೆಗೆ ಆಯ್ಕೆಯಾಗಿ ಕ್ಷೇತ್ರದಲ್ಲಿ ಪಕ್ಷ ನೆಲೆ ಕಂಡುಕೊಳ್ಳುವಂತೆ ಮಾಡಿದ್ದರು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಅವರಿಗೆ ಸೋಲುಂಟಾಯಿತು, ರಾಜಕಾರಣದಲ್ಲಿ ಏರುಪೇರು ಇದ್ದಿದ್ದೇ ಎಂದು ವಿಜಯೇಂದ್ರ ಹೇಳಿದರು.

ದೆಹಲಿ: ನಗರದಲ್ಲಿಂದು ಪಕ್ಷದ ವರಿಷ್ಠರನ್ನು ಭೇಟಿಯಾದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಚಿಕ್ಕಬಳ್ಳಾಪುರ ಲೋಕ ಸಭಾ ಕ್ಷೇತ್ರದಿಂದ (Chikkaballapura LS seat) ಮಾಜಿ ಸಚಿವ ಡಾ ಕೆ ಸುಧಾಕರ್ (Dr K Sudhakar) ಪಕ್ಷದ ಅಭ್ಯರ್ಥಿಯಾಗುವ ಬಯಕೆ ವ್ಯಕ್ತಪಡಿಸಿದ್ದರೆ ತಪ್ಪೇನೂ ಇಲ್ಲ ಎಂದು ಹೇಳಿದರು. ಹಿಂದೆ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿ ಸರ್ಕಾರ ರಚಿಸಲು ಕಾರಣವಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಬಹಳ ದುರ್ಬಲವಾಗಿತ್ತು. ಆದರೆ ಸುಧಾಕರ್ ಬಿಜೆಪಿಯಿಂದ ವಿಧಾನ ಸಭೆಗೆ ಆಯ್ಕೆಯಾಗಿ ಕ್ಷೇತ್ರದಲ್ಲಿ ಪಕ್ಷ ನೆಲೆ ಕಂಡುಕೊಳ್ಳುವಂತೆ ಮಾಡಿದ್ದರು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಅವರಿಗೆ ಸೋಲುಂಟಾಯಿತು, ರಾಜಕಾರಣದಲ್ಲಿ ಏರುಪೇರು ಇದ್ದಿದ್ದೇ ಎಂದು ವಿಜಯೇಂದ್ರ ಹೇಳಿದರು. ಲೋಕ ಸಭಾ ಚುನಾವಣೆಯಲ್ಲಿ ಅವರು ಚಿಕ್ಕಬಳ್ಳಾಪುರದ ಅಭ್ಯರ್ಥಿಯಾಗಲಿದ್ದಾರೆ ಅಂತ ತಾನ್ಯಾವತ್ತೂ ಹೇಳಿಲ್ಲ, ಎಲ್ಲ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರಿಷ್ಠರು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on