ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್

ಇಂದಿರಾ ಕ್ಯಾಂಟಿನ್ ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸ್ವತಃ ಸಚಿವ ಹೆಚ್​ಕೆ ಪಾಟೀಲ್ ಅವರೇ ಹೇಳಿಕೆ ನೀಡಿದ್ದರು. ಮಾಧ್ಯಮಗಳ ವರದಿಗಳ ಬೆನ್ನಲ್ಲೇ ಎಚ್ಚೆತ್ತ ಸಚಿವರು ಸ್ಪಷ್ಟನೆ ನೀಡಿದ್ದು, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್
ಇಂದಿರಾ ಕ್ಯಾಂಟೀನ್ ಊಟದ ಬೆಲೆ ಹೆಚ್ಚಳವಿಲ್ಲ ಎಂದು ಹೆಚ್​ಕೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ
Edited By: Rakesh Nayak Manchi

Updated on: Aug 19, 2023 | 10:36 PM

ಬೆಂಗಳೂರು, ಆಗಸ್ಟ್ 19: ಇಂದಿರಾ ಕ್ಯಾಂಟೀನ್ (Indira canteen) ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಚಿವ ಹೆಚ್​ಕೆ ಪಾಟೀಲ್ (HK Patil) ಅವರೇ ಇದೀಗ ಬೆಲೆ ಏರಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಲೆ ಏರಿಕೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಹೆಚ್​ಕೆ ಪಾಟೀಲ್, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ. ಯಥಾ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತೆ ದರ ಇರಲಿದೆ. ಅದರಂತೆ ತಿಂಡಿ ಬೆಲೆ 5 ರೂಪಾಯಿ ಹಾಗೂ ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ ಇರಲಿದೆ ಎಂದಿದ್ದಾರೆ.

ಇದನ್ನೂ ಓದಿ: Indira Canteen: ಇಂದಿರಾ ಕ್ಯಾಂಟೀನ್‌ ಊಟದ ದರ ಏರಿಕೆ: ಸಂಪುಟ ಸಭೆ ನಿರ್ಧಾರ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಇಂದಿರಾ ಕ್ಯಾಂಟೀನ್​ನಲ್ಲಿ ನೀಡುವ ಆಹಾರದ ಬೆಲೆ ಹೆಚ್ಚಳವೂ ಒಂದು. ಇಂದಿರಾ ಕ್ಯಾಂಟೀನ್‌ನಲ್ಲಿ 10 ರೂ. ಇದ್ದ ಒಂದು ಊಟದ ಬೆಲೆ 60 ರೂ.ಗೆ ಏರಿಸಲಾಗಿದೆ. ಗ್ರಾಹಕರಿಂದ 27 ರೂ. ಪಡೆದು ಉಳಿದ ಹಣವನ್ನು (33 ರೂ.) ಸರ್ಕಾರ ಭರಿಸಲಿದೆ ಎಂದು ಹೆಚ್​ಕೆ ಪಾಟೀಲ್ ತಿಳಿಸಿದ್ದರು.

ಐದು ಗ್ಯಾರಂಟಿ ಯೋಜನೆಗಳ ಸಮಪರ್ಕ ಜಾರಿಗಾಗಿ ಕಾಂಗ್ರೆಸ್ ಸರ್ಕಾರವು ಹಣದ ಕ್ರೂಡೀಕರಣಕ್ಕೆ ಚಿಂತನೆ ನಡೆಸುತ್ತಿದೆ. ಈ ಯೋಜನೆಗಳ ಜಾರಿಗಾಗಿ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ಈ ವರ್ಷ ಅಭಿವೃದ್ಧಿ ಕಾರ್ಯ ಅಸಾಧ್ಯ ಎಂದು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಹೇಳಿಕೆ ನೀಡಿದ್ದರು.

ಸದ್ಯ, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬೆಲೆ ಇಳಿಕೆಯ ಆಶ್ವಾಸನೆ ನೀಡಿದ್ದ ಕಾಂಗ್ರೆಸ್, ಇದೀಗ ಮದ್ಯದ ಬೆಲೆ, ವಿದ್ಯುತ್ ದರ ಏರಿಕೆ, ಹಾಲಿನ ದರ ಏರಿಕೆ ಮಾಡಿ ಮಾತು ತಪ್ಪಿದೆ. ಅಲ್ಲದೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಟೀಕಾ ಪ್ರಹಾರ ನಡೆಸುತ್ತಿದೆ. ಈ ನಡುವೆ ಇಂದಿರಾ ಕ್ಯಾಂಟೀನ್ ಆಹಾರದ ಬೆಲೆ ಏರಿಕೆಗೆ ಮಾಡಲು ಸರ್ಕಾರ ಮುಂದಾಗಿತ್ತು. ಆದರೆ, ದುಬಾರಿ ಬೆಲೆಯ ವರದಿ ಹಾಗೂ ವಿಪಕ್ಷಗಳು ಮತ್ತು ಜನರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಹಿನ್ನೆಲೆ ಎಚ್ಚೆತ್ತ ಸರ್ಕಾರವು ಇಂದಿರಾ ಕ್ಯಾಂಟೀನ್ ಊಟದ ಬೆಲೆ ಏರಿಸುವ ನಿರ್ಧಾರದಿಂದ ಹಿಂದೆ ಸರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Sat, 19 August 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us