AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯನ್ನು ವಕ್ಫ್​ಗೆ ವರ್ಗಾಯಿಸಲಾಗುತ್ತಿಲ್ಲ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್ ಆಸ್ತಿಗಳ ಇಂದೀಕರಣ ವಿಚಾರವಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಡಿಯೋ ಹೇಳಿಕೆ ನೀಡಿದ್ದು, ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ. ಹಾಗಾಗಿ ಯಾವುದೇ ವದಂತಿಗಳಿಗೆ ರೈತರು ಮತ್ತು ಆಸ್ತಿ ಮಾಲೀಕರು ಕಿವಿಗೊಡಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯನ್ನು ವಕ್ಫ್​ಗೆ ವರ್ಗಾಯಿಸಲಾಗುತ್ತಿಲ್ಲ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ
ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯನ್ನು ವಕ್ಫ್​ಗೆ ವರ್ಗಾಯಿಸಲಾಗುತ್ತಿಲ್ಲ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 26, 2024 | 9:44 PM

Share

ವಿಜಯಪುರ, ಅಕ್ಟೋಬರ್​ 26: ವಕ್ಫ್ (Waqf Board) ಕಿಚ್ಚು ಜಿಲ್ಲೆಯಲ್ಲಿ ಕಡಿಮೆಯಾಗುತ್ತಿಲ್ಲ. ಜಮೀನುಗಳನ್ನು ವಕ್ಪ್ ಬೋರ್ಡಿಗೆ ಒಳಪಡಿಸಲಾಗುತ್ತಿದೆ ಎಂಬ ಭಯ ರೈತರನ್ನು ಕಾಡುತ್ತಿದೆ. ಹೀಗಿರುವಾಗ ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್​ ಹೇಳಿದ್ದಾರೆ. ಇದರ ಬೆನ್ನಲ್ಲೇ ಜಿಲ್ಲೆಯ ವಕ್ಫ್ ಆಸ್ತಿ ಇಂದಿಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದೆಂದು ಡಿಸಿ ಟಿ ಭೂಬಾಲನ್​ ಸ್ಪಷ್ಟನೆ ನೀಡಿದ್ದಾರೆ.

ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ: ಡಿಸಿ ಟಿ ಭೂಬಾಲನ್

ವಿಡಿಯೋ ಮೂಲಕ ಹೇಳಿಕೆ ನೀಡಿರುವ ಡಿಸಿ ಟಿ ಭೂಬಾಲನ್, ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ. ಯಾವುದೇ ಖಾಸಗಿ ವ್ಯಕ್ತಿ, ಖಾಸಗಿ ಸಂಸ್ಥೆ, ಸರ್ಕಾರಿ ಸಂಸ್ಥೆಯವರು ಅವರ ಬಳಿಯ ಸೂಕ್ತ ದಾಖಲಾತಿ ಕಂದಾಯ ಇಲಾಖೆಗೆ ನೀಡಬೇಕು. ಸಂಬಂಧಿಸಿದವರಿಗೆ ಕಂದಾಯ ಇಲಾಖೆ ಅಧಿಕಾರಿಗಳು ನೋಟಿಸ್‌ ನೀಡುತ್ತಾರೆ. ನಂತರ ಹಕ್ಕನ್ನು ಖಚಿತಪಡಿಸಿಕೊಂಡು ದಾಖಲಾತಿಗಳನ್ನು ಇಂದೀಕರಣ ಮಾಡುವುದು ಕಂದಾಯ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ವಕ್ಫ್​ ಕಾಯ್ದೆ ವಿರುದ್ಧ ಹೊತ್ತಿದ ಕಿಚ್ಚು: ಕಾಯ್ದೆಯನ್ನೇ ರದ್ದು ಮಾಡುವಂತೆ ಕೇಂದ್ರಕ್ಕೆ ರೈತರು ಒತ್ತಾಯ

1974ರಲ್ಲಿ ವಕ್ಫ್‌ ಬೋರ್ಡ್ ಗೆಜೆಟ್ ನೋಟಿಫಿಕೇಷನ್‌ ಹೊರಡಿಸಿತ್ತು. ವಕ್ಫ್‌ ಆಸ್ತಿಗಳ ಕಂದಾಯ ಇಲಾಖೆಗೆ ಇಂದೀಕರಣ ಮಾಡಲು ಪಟ್ಟಿ ನೀಡಿದ್ದಾರೆ. ವಿಜಯಪುರ ಜಿಲ್ಲಾ ವಕ್ಫ್‌ ಬೋರ್ಡ್ ಅಧಿಕಾರಿಗಳು ನೀಡಿದ್ದಾರೆ. ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಪ್ರಕ್ರಿಯೆಗಾಗಿ ರೈತರಿಗೆ, ಮಾಲೀಕರಿಗೆ ನೋಟಿಸ್‌ ನೀಡಲಾಗುತ್ತದೆ. ನೋಟಿಸ್‌ಗೆ ಭಯಪಡುವ ಅಗತ್ಯವಿಲ್ಲವೆಂದು ಡಿಸಿ ಧೈರ್ಯ ತುಂಬಿದ್ದಾರೆ.

ಸೂಕ್ತ ದಾಖಲಾತಿ ಕಂದಾಯ ಇಲಾಖೆಯ ಆಧಿಕಾರಿಗಳಿಗೆ ಸಲ್ಲಿಸಲು ಸಲಹೆ ನೀಡಿದ್ದು, ದಾಖಲಾತಿ ಆಧರಿಸಿ ಅಧಿಕಾರಿಗಳು ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ತಹಶೀಲ್ದಾರ್ ನೋಟಿಸ್‌ ನೀಡದೇ ಇಂದೀಕರಣ ಮಾಡಿದರೆ, ರೈತರು-ಮಾಲೀಕರು ಎಸಿಗೆ, ನಂತರ ಡಿಸಿಗೆ ಮೇಲ್ಮನವಿಯನ್ನು ಸಲ್ಲಿಸಬಹುದು. ನೋಟಿಸ್ ಬಂದ ತಕ್ಷಣ ಯಾರ ಹಕ್ಕೂ ತಕ್ಷಣ ಬದಲಾವಣೆಯಾಗಲ್ಲ. ಸೂಕ್ತ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಬೇಕು ಎಂದಿದ್ದಾರೆ.

ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ: ಸಚಿವ ಎಂ.ಬಿ ಪಾಟೀಲ್​

ಇನ್ನು ಸಚಿವ ಎಂ.ಬಿ ಪಾಟೀಲ್​ ಈ ಬಗ್ಗೆ ಟ್ವೀಟ್ ಮಾಡಿದ್ದು, ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.

ಹಜರತ್ ಪೀರ ದಸ್ತಿಗೀರ ಸಾಬ್ ಮೊಹಮ್ಮದ ಚಿಂಗ್ ಸಿಯಾ ತಖಿಯಾ ದರ್ಗಾ ವಿಜಯಪುರ ಮಹಾಲಬಾಗಯತ ಸೇರಿದ ಆಸ್ತಿಯಾಗಿದ್ದು, ಕೆಳಗಡೆ ತಪ್ಪಾಗಿ ಹೊನವಾಡ ಎಂದು ಸೇರಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಈ ಯಾವ ರೈತರಿಗೂ ವಕ್ಫ ಸಮಿತಿ ಅಥವಾ ಸರ್ಕಾರದ ಇಲಾಖೆಯಿಂದ ಯಾವುದೇ ನೋಟಿಸಗಳು ಬಂದಿಲ್ಲ.

ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್​ ಹೆಸರು: ಕಂಗಾಲಾದ ಅನ್ನದಾತ

ಈಗಾಗಲೇ ಜಿಲ್ಲೆಯಲ್ಲಿ ಹಲವು ರೈತರಿಗೆ ವಕ್ಫ್ ಆಸ್ತಿ ನೋಟಿಸು ಬಂದಿದೆ ಎಂಬ ದೂರುಗಳಿದ್ದು, ವಕ್ಫ್ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಎಲ್ಲ ದಾಖಲೆಗಳನ್ನು ಕೂಲಕುಂಷವಾಗಿ ಪರಿಶೀಲಿಸುತ್ತಾರೆ. ಒಂದೇ ಒಂದು ಇಂಚು ರೈತರ ಜಾಗವು ಅನಗತ್ಯವಾಗಿ, ಆಧಾರ, ದಾಖಲೆಗಳಿಲ್ಲದೆ ವಕ್ಫ ಆಸ್ತಿ ಎಂದು ಸೇರಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಶೀಘ್ರದಲ್ಲೇ ಸಭೆ ನಡೆಸಿ, ಎಲ್ಲ ಗೊಂದಲಗಳಿಗೆ ಉತ್ತರ ನೀಡಲಾಗುವುದು. ಈ ನಿಟ್ಟಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಾಗಲಿ ಮತ್ತೊಬ್ಬರಾಗಲಿ ರಾಜಕಾರಣ ಮಾಡಿ ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ, ಆತಂಕ ಮೂಡಿಸುವುದು ಬೇಡ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಮಾತು
ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಮಾತು
ದೆಹಲಿ ಸ್ಫೋಟ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಘೋಷಿಸಿದ ಸಿಎಂ ರೇಖಾ ಗುಪ್ತ
ದೆಹಲಿ ಸ್ಫೋಟ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಘೋಷಿಸಿದ ಸಿಎಂ ರೇಖಾ ಗುಪ್ತ
‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
ಪುನತ್ಸಂಗ್ಚು- II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಮೋದಿ- ಭೂತಾನ್ ರಾಜ
ಪುನತ್ಸಂಗ್ಚು- II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಮೋದಿ- ಭೂತಾನ್ ರಾಜ
ಬಿಹಾರ ಮತದಾನೋತ್ತರ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಬಿಹಾರ ಮತದಾನೋತ್ತರ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಚಂದ್ರಪ್ರಭಾ ಪತ್ನಿಯ ಫೇವರೇಟ್ ಬಿಗ್​​ಬಾಸ್ ಸ್ಪರ್ಧಿಗಳು ಯಾರು?
ಚಂದ್ರಪ್ರಭಾ ಪತ್ನಿಯ ಫೇವರೇಟ್ ಬಿಗ್​​ಬಾಸ್ ಸ್ಪರ್ಧಿಗಳು ಯಾರು?
ಪಾಕಿಸ್ತಾನದಲ್ಲೂ ಕೋರ್ಟ್​ ಹೊರಗೆ ನಿಲ್ಲಿಸಿದ್ದ ಕಾರು ಸ್ಫೋಟ; 12 ಜನರು ಸಾವು
ಪಾಕಿಸ್ತಾನದಲ್ಲೂ ಕೋರ್ಟ್​ ಹೊರಗೆ ನಿಲ್ಲಿಸಿದ್ದ ಕಾರು ಸ್ಫೋಟ; 12 ಜನರು ಸಾವು
ಆಟೋ ಓಡಿಸಿದ ಅಪ್ರಾಪ್ತ ವಿದ್ಯಾರ್ಥಿನಿ
ಆಟೋ ಓಡಿಸಿದ ಅಪ್ರಾಪ್ತ ವಿದ್ಯಾರ್ಥಿನಿ
ದೆಹಲಿ ಸ್ಫೋಟದ ಸಂತ್ರಸ್ತರಿಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ ಭೂತಾನ್
ದೆಹಲಿ ಸ್ಫೋಟದ ಸಂತ್ರಸ್ತರಿಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ ಭೂತಾನ್
ದೆಹಲಿ ಸ್ಫೋಟ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ
ದೆಹಲಿ ಸ್ಫೋಟ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ