AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ’: ಕ್ಷಮೆಯಾಚಿಸಿದ ಫೋನ್​ಪೇ ಸಿಇಒ ಸಮೀರ್ ನಿಗಂ

ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರವಾಗಿ ಫೋನ್​ಪೇ ಸಿಇಒ ಸಮೀರ್​​​​​​​​​ ನಿಗಮ್​ ಇತ್ತೀಚೆಗೆ ಮಾಡಿದ್ದ ಟ್ವೀಟ್​ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಆ ಟ್ವೀಟ್​ನಿಂದ ರೊಚ್ಚಿಗೆದ್ದ ಕನ್ನಡಿಗರು ಫೋನ್​ಪೇಯನ್ನು ಅನ್​​ ಇನ್​ಸ್ಟಾಲ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದರು. ಇದೀಗ ಸಮಸ್ತ ಕರುನಾಡಿನ ಜನರಲ್ಲಿ ಸಮೀರ್​​​​​​​​​ ನಿಗಮ್ ಕ್ಷಮೆಯಾಚಿಸಿದ್ದಾರೆ.

‘ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ’: ಕ್ಷಮೆಯಾಚಿಸಿದ ಫೋನ್​ಪೇ ಸಿಇಒ ಸಮೀರ್ ನಿಗಂ
‘ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ’: ಕ್ಷಮೆಯಾಚಿಸಿದ ಫೋನ್​ಪೇ ಸಿಇಒ ಸಮೀರ್ ನಿಗಂ
Kiran Surya
| Edited By: |

Updated on:Jul 21, 2024 | 10:03 PM

Share

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ, ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ (Phonepe) ಕಂಪನಿ ಸಿಇಒ ಸಮೀರ್​​​​​​​​​ ನಿಗಮ್ (Sameer Nigam)​ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು. ಹೀಗಾಗಿ ಬಾಯ್ಕಾಟ್ ಬಿಸಿ ಮುಟ್ಟಿಸಿದ್ದರು. ಇದೀಗ ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಫೋನ್ ಪೇ ಸಿಇಒ ಸಮೀರ್​​​​​​​​​ ನಿಗಮ್, ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆಯಾಚಿಸುವೆ. ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸುತ್ತೇನೆಂದು ಹೇಳಿದ್ದಾರೆ.

ಫೋನ್ ಪೇ ಸಿಇಒ ಸಮೀರ್​​​​​​​​​ ನಿಗಮ್ ಟ್ವೀಟ್

ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕಳೆದ ವಾರ ನಾನು ನೀಡಿದ ವೈಯಕ್ತಿಕ ಹೇಳಿಕೆಗೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿರುವುದನ್ನು ಮಾಧ್ಯಮ ವರದಿಗಳನ್ನು ಓದಿದ್ದೇನೆ. ಕರ್ನಾಟಕವನ್ನು ಮತ್ತು ಕನ್ನಡಿಗರನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ ಎಂಬುವುದನ್ನು ಪ್ರಮುಖವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ.

ಇದನ್ನೂ ಓದಿ: 25,000 ಜನರಿಗೆ ಕೆಲಸ ಕೊಟ್ಟಿದ್ದೇನೆ, ನನ್ನ ಮಕ್ಕಳು ಕರ್ನಾಟಕದಲ್ಲಿ ಕೆಲಸ ಮಾಡಬಾರದಾ?: ಮೀಸಲಾತಿ ಮಸೂದೆಗೆ ಫೋನ್​ಪೆ ಸಂಸ್ಥಾಪಕರ ಕಿಡಿ

ನನ್ನ ಹೇಳಿಕೆಯಿಂದ ಯಾರದ್ದಾದರೂ ಭಾವನೆಗಳಿಗೆ ನೋವುಂಟುಮಾಡಿದರೆ, ನಾನು ನಿಜವಾಗಿಯೂ ಕ್ಷಮೆಯಾಚಿಸುತ್ತೇನೆ ಮತ್ತು ನಿಮಗೆ ಬೇಷರತ್ ಕ್ಷಮೆಯನ್ನು ನೀಡಲು ಬಯಸುತ್ತೇನೆ. ಕನ್ನಡ ಮತ್ತು ಇತರೆ ಎಲ್ಲಾ ಭಾರತೀಯ ಭಾಷೆಗಳ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ವಾಸ್ತವವಾಗಿ, ಭಾಷಾ ವೈವಿಧ್ಯತೆ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯು ಎಲ್ಲಾ ಭಾರತೀಯರು ಹೆಮ್ಮೆಪಡಬೇಕಾದ ರಾಷ್ಟ್ರೀಯ ಆಸ್ತಿಯಾಗಿದೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ.  ಎಲ್ಲಾ ಭಾರತೀಯರು ಸ್ಥಳೀಯ ಮತ್ತು ಸಾಂಸ್ಕೃತಿಕ ಮಾನದಂಡಗಳನ್ನು ಗೌರವಿಸಬೇಕು ಮತ್ತು ಆಚರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಫೋನ್‌ ಪೇ ವಿರುದ್ಧ ಸಿಡಿದೆದ್ದ ಕನ್ನಡಿಗರು; ರಾಜ್ಯದಲ್ಲಿ #Boycott PhonePe ಅಭಿಯಾನ

ರಾಜ್ಯದ ನೀರು ಕುಡಿದು, ಕನ್ನಡಿಗರನ್ನೇ ಅಪಮಾನ ಮಾಡುವಂತೆ ಸಮೀರ್​​ ನಿಗಮ್ ಅವರು ಟ್ವೀಟ್ ಮಾಡಿದ್ದು ರಾಜ್ಯದಲ್ಲಿ ಕಿಡಿ ಹೊತ್ತಿಸಿತ್ತು. ಹಾಗಾಗಿ ಬಾಯ್ಕಾಟ್ ಅಭಿಯಾನ ಶುರುವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sun, 21 July 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್