ತುಮಕೂರು: ಒಂದೆಡೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವಿಷಯವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮಧ್ಯೆ ಪರಸ್ಪರ ನಿಂದನೆ ತಾರಕಕ್ಕೆ ತಲುಪಿವಾಗ ಕೆ.ಆರ್.ಎಸ್. ಡ್ಯಾಮ್ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.
ಮುಂಜಾಗ್ರತೆಯಾಗಿ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿ ಬಂದ್ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ. ಕಳೆದ 3-4 ದಿನಗಳಿಂದ ಅಲ್ಲಿ ಯಾವುದೇ ಗಣಿಗಾರಿಕೆ ನಡೆದಿಲ್ಲ ಎಂದು ಸಚಿವ ನಿರಾಣಿ ಹೇಳಿದ್ದಾರೆ.
ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಅಂತ ಬರುತ್ತೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಈ ಸಂಬಂಧ ತನಿಖೆ ಮಾಡಲಾಗುತ್ತಿದೆ. ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತುಮಕೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:
ಕೆಆರ್ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ
(no leakage in KRS Dam all mining activities around the dam stopped says mining minister murugesh nirani)
Published On - 2:01 pm, Mon, 5 July 21