ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ.. ಕೊರೊನಾ ತಡೆಯಲು ಜನರ ಸಹಕಾರ ಬೇಕು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎಂಬ ಚಿಂತೆ ಜನ ಸಾಮಾನ್ಯರಲ್ಲಿತ್ತು. ಸದ್ಯ ಈಗ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ.. ಕೊರೊನಾ ತಡೆಯಲು ಜನರ ಸಹಕಾರ ಬೇಕು - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಆಯೇಷಾ ಬಾನು
|

Updated on: Mar 14, 2021 | 2:09 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಮತ್ತೆ ಗುಪ್ತಗಾಮಿನಿಯಂತೆ ಎಲ್ಲೆಡೆ ಹರಡುವ ಭೀತಿ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎಂಬ ಚಿಂತೆ ಜನ ಸಾಮಾನ್ಯರಲ್ಲಿತ್ತು. ಸದ್ಯ ಈಗ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗಲು ಅವಕಾಶ ನೀಡಲ್ಲ. ಕೊರೊನಾ ಹರಡುವಿಕೆ ತಡೆಗಟ್ಟಲು ಜನರ ಸಹಕಾರ ಬೇಕು. ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ, ದಿನೇದಿನೆ ಹೆಚ್ಚಾಗ್ತಿದೆ. ನೆರೆ ರಾಜ್ಯಗಳಿಂದ ಬರುವವರಿಗೆ ನಿಯಮ ರೂಪಿಸುತ್ತಿದ್ದೇವೆ. ಸರ್ಕಾರದ ಮುಖ್ಯಕಾರ್ಯದರ್ಶಿ ಜತೆ ಚರ್ಚೆ ಮಾಡಿದ್ದೇನೆ. ಎಲ್ಲೆಲ್ಲಿ ಏನೇನು ಮಾಡಬಹುದೆಂದು ಚರ್ಚೆ ಮಾಡಿದ್ದೇನೆ. ನಾಳೆ ಕಲಾಪಕ್ಕೂ ಮುನ್ನ ಸಚಿವರ ಜತೆ ಜನರಿಗೆ ಯಾವ ರೀತಿ ಸ್ಪಂದಿಸಬೇಕೆಂದು ಚರ್ಚೆ ಮಾಡುವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ರು.

ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಚಿಂತನೆ ಇಲ್ಲ ಕೊರೊನಾ ಕೇಸ್ ಹೆಚ್ಚುತ್ತಿದೆ. ಆದ್ರೆ ಲಾಕ್​ಡೌನ್ ಮಾಡುವ ಯೋಚನೆ ಇಲ್ಲ. ಹೀಗಾಗಿ ಜನ ನಮ್ಮ ಜೊತೆ ಕೈಜೋಡಿಸಬೇಕು. ಹೆಚ್ಚು ಜನ ಸೇರಲು ಬಿಡಲ್ಲ, ಕಾನೂನುಕ್ರಮ ಕೈಗೊಳ್ತೇವೆ. ಇದರ ಬಗ್ಗೆ ಚರ್ಚಿಸಲು ನಾಳೆ ತಜ್ಞರ ಸಭೆ ಕರೆದಿದ್ದೇವೆ. ಜನರು ಸಹಕರಿಸಿದ್ರೆ ಲಾಕ್‌ಡೌನ್ ಮಾಡದೇ ನಿಯಂತ್ರಣ ಮಾಡಬಹುದು. ರಾಜ್ಯದಲ್ಲಿ ಕೊವಿಡ್ ನಿಯಂತ್ರಿಸಬಹುದು ಎಂಬ ವಿಶ್ವಾಸವಿದೆ. ಮಹಾರಾಷ್ಟ್ರದಿಂದ ಬರುವವರನ್ನ ತಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತೆ. ಲಾಕ್‌ಡೌನ್ ಮಾಡಿದ್ರೆ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಹೀಗಾಗಿ ಎಲ್ಲರೂ ಕೊವಿಡ್ ನಿಯಮ ಪಾಲಿಸುವುದು ಕಡ್ಡಾಯ ಎಂದರು.

ಇದನ್ನೂ ಓದಿ: ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಡಿಕೆಶಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ