ರಾಜ್ಯದಲ್ಲಿ ಲಾಕ್​ಡೌನ್​ ಇಲ್ಲ, ಮಾಸ್ಕ್​ ಧರಿಸದಿದ್ದರೆ ಶಿಸ್ತುಕ್ರಮ; ಸಿಎಂ ಬಿ.ಎಸ್.ಯಡಿಯೂರಪ್ಪ

|

Updated on: Mar 29, 2021 | 7:38 PM

Karnataka Coronavirus Update News: ಅಪಾರ್ಟ್​ಮೆಂಟ್​ಗಳಲ್ಲಿ ಲಸಿಕೆ ವಿತರಣೆ ಪ್ರಮಾಣವನ್ನು ಹೆಚ್ಚಿಸುತ್ತೇವೆ. ಪ್ಲಾಟ್​ಗಳಲ್ಲಿ ಬೇರೆ ಬೇರೆ ಪಾರ್ಟಿಗಳನ್ನು ಮಾಡಲು ಇನ್ಮುಂದೆ ಅವಕಾಶವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಲಾಕ್​ಡೌನ್​ ಇಲ್ಲ, ಮಾಸ್ಕ್​ ಧರಿಸದಿದ್ದರೆ ಶಿಸ್ತುಕ್ರಮ; ಸಿಎಂ ಬಿ.ಎಸ್.ಯಡಿಯೂರಪ್ಪ
ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ಯಾವಾಗ?
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಇಂದಿನಿಂದ 15 ದಿನ ಸತ್ಯಾಗ್ರಹ, ಚಳವಳಿಗಳನ್ನು ನಡೆಸುವಂತಿಲ್ಲ. ಕೊವಿಡ್​ ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿರಬೇಕು. ಎಲ್ಲರೂ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ನಾಳೆಯಿಂದ ಮಾಸ್ಕ್​ ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬರೆದಿದ್ದ ರಾಜ್ಯದ ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಬಗ್ಗೆ ಬರೆದ ಪತ್ರವನ್ನು ಓದಿದ ಸಿಎಂ ಯಡಿಯೂರಪ್ಪ, ಜನರನ್ನು ಭಯ ಪಡಿಸದೇ ಕೆಲ ನಿರ್ಣಯಗಳನ್ನ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್​ ಮತ್ತು ಲಸಿಕೆ ಹೆಚ್ಚಳ ಮಾಡುವ ಬಗ್ಗೆ ಸಲಹೆ ನೀಡಿದ್ದರು. ಅದನ್ನು ಕೂಡ ನಿಮ್ಮ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

ಸಂಪರ್ಕಿತರ ಪತ್ತೆಗೆ ಕಂದಾಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೂ ಬೆಡ್​ಗಳನ್ನು ನೀಡಲು ತಿಳಿಸಲಾಗಿದೆ. ಕೊವಿಡ್ ನಿಯಂತ್ರಣಕ್ಕೆ ಯಾವುದೇ ಹಣದ ಸಮಸ್ಯೆ ಇಲ್ಲ. ಸದ್ಯದ ಸಮಾಧಾನದ ವಿಚಾರವೆಂದರೆ ಸ್ಲಂಗಳಲ್ಲಿ ಕೊರೊನಾ ಪ್ರಕರಣಗಳು ಬಹಳ ವಿರಳವಾಗಿದ್ದು, ಅಪಾರ್ಟ್​ಮೆಂಟ್​ಗಳಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ, ಅಪಾರ್ಟ್​ಮೆಂಟ್​ಗಳಲ್ಲಿ ಲಸಿಕೆ ವಿತರಣೆ ಪ್ರಮಾಣವನ್ನು ಹೆಚ್ಚಿಸುತ್ತೇವೆ. ಪ್ಲಾಟ್​ಗಳಲ್ಲಿ ಬೇರೆ ಬೇರೆ ಪಾರ್ಟಿಗಳನ್ನು ಮಾಡಲು ಇನ್ಮುಂದೆ ಅವಕಾಶವಿಲ್ಲ ಎಂದು ತಿಳಿಸಿದರು.

ರಾಮನಗರದಲ್ಲಿ ನಿಷೇಧಾಜ್ಷೆ
ಕೋವಿಡ್ 19 ಹರಡದಂತೆ ಮುಂಜಾಗ್ರತಾ ಕ್ರಮಕ್ಕಾಗಿ ರಾಮನಗರ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ‌ನಿಷೇಧಾಜ್ಷೆ ಜಾರಿಗೊಳಿಸಿ ರಾಮನಗರ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಬ್ಬ, ಜಾತ್ರೆ, ಸಭೆ, ಸಮಾರಂಭ, ಸಾರ್ವಜನಿಕ ಸ್ಥಳಗಳಲ್ಲಿ ‌ಗುಂಪು ಸೇರುವುದಕ್ಕೆ ನಿಷೇಧ ಹೇರಲಾಗಿದೆ.  ‌ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸೂಚಿಸಿದೆ.

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಜನರ ಅಸಹಾಕಾರ; ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸಿಎಂ ಸೂಚನೆ

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

Published On - 7:20 pm, Mon, 29 March 21