AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ

ಇರಾನ್-ಇಸ್ರೇಲ್ ಯುದ್ಧದಲ್ಲಿ ಸಿಲುಕಿದ ಕನ್ನಡಿಗರ ಹಾಗೂ ಎಲ್ಲ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸನ್ನದ್ಧವಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಯಾರೂ ಆತಂಕ ಪಡಬೇಕಿಲ್ಲ. ಕೇಂದ್ರ ಸರ್ಕಾರ ಜನರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ
ಪ್ರಲ್ಹಾದ್ ಜೋಶಿImage Credit source: TV9 Network
ಗಣಪತಿ ಶರ್ಮಾ
|

Updated on: Mar 02, 2026 | 11:58 AM

Share

ನವದೆಹಲಿ, ಮಾರ್ಚ್ 2: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದು ಜೋಶಿ ಹೇಳಿದ್ದಾರೆ.

ಇರಾನ್-ಇಸ್ರೇಲ್ ಯುದ್ಧದ ಭೀಕರತೆಯಿಂದಾಗಿ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿಯಿದ್ದು, ಈ ಸಂಬಂಧ ಹಿರಿಯ ಸಚಿವರೊಂದಿಗೆ ತುರ್ತು ಚರ್ಚೆ ನಡೆಸಿದ್ದು, ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕನ್ನಡಿಗರಷ್ಟೇ ಅಲ್ಲ, ಯಾರೂ ಆತಂಕ ಪಡಬೇಕಿಲ್ಲ: ಪ್ರಲ್ಹಾದ್ ಜೋಶಿ

ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ, ಆತಂಕಿತ ಕುಟುಂಬಸ್ಥರಿಗೆ ಸ್ಥೈರ್ಯ ಹೇಳಿದ್ದಾರೆ.

ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕಾರಿ ಆಗಿದ್ದು, ತಜ್ಞರ ಸಲಹೆ ಪಡೆಯಲಾಗುತ್ತಿದೆ. ಭಾರತೀಯರ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದಿರುವ ಸಚಿವರು, ವಿಧಾನಪರಿಷತ್ ಸದಸ್ಯ ಭೋಜೇಗೌಡರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲಾ ಕನ್ನಡಿಗರ ರಕ್ಷಣೆಗೆ ಶ್ರಮಿಸುತ್ತೇವೆಂದು ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ

ದುಬೈನಲ್ಲಿ ಸಿಲುಕಿದ ಕನ್ನಡಿಗರನ್ನು ಕರೆತರುತ್ತೇವೆ ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವೇಳೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ನಮ್ಮ ಆದ್ಯತೆಯಾಗಿದೆ. ಯಾರೂ ಆತಂಕಪಡಬೇಕಿಲ್ಲ. ಸದ್ಯ ದುಬೈನಿಂದ ಯಾವುದೇ ವಿಮಾನ ಹಾರಾಟ ನಡೆಯುತ್ತಿಲ್ಲ. ಅಲ್ಲಿರುವವರನ್ನು ವಾಪಸ್ ಕರೆತರುವ ಬಗ್ಗೆ ಗಂಭೀರವಾಗಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಜೋಶಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!