AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಇನ್ನೂ ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ..’

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ ಸಲಹೆ ನೀಡಲು ಮನವಿ ಮಾಡಿದ್ದೇನೆ ಎಂದು […]

’ಇನ್ನೂ ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ..’
ಸಾಧು ಶ್ರೀನಾಥ್​
|

Updated on:Sep 29, 2020 | 3:35 PM

Share

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ ಸಲಹೆ ನೀಡಲು ಮನವಿ ಮಾಡಿದ್ದೇನೆ ಎಂದು ಟಿವಿ9ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ, ನನ್ನ ಪ್ರಕಾರ ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ ಎಂದು ಗಂಗಾವತಿಯಲ್ಲಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿರುವ ಅವರು ಸೋಂಕು ಕಡಿಮೆಯಾದ್ರೆ ಮಾತ್ರ ಶಾಲೆ ಆರಂಭಿಸಬೇಕು. ಅದು LKG ಇರಬಹುದು‌ PUC ಇರಬಹುದು ಎಂದು ಮುನವಳ್ಳಿ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಆರೋಗ್ಯವೇ ನಮಗೆ ಬಹಳ ಮುಖ್ಯ. ಆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಕೆಲಸ ಮಾಡ್ತಾರೆ. ಎರಡು ಮೂರು ತಿಂಗಳು ನೋಡಿಕೊಂಡು ಮುಂದೆ ಯೋಚನೆ ಮಾಡಲಿ ಅನ್ನೋದು ನನ್ನ ಅಭಿಪ್ರಾಯ ಎಂದು ಪರಣ್ಣ ಮುನವಳ್ಳಿ ಹೇಳಿದ್ದಾರೆ.

ಸೋಂಕು ಹೆಚ್ಚಾದ್ರೆ ಮಕ್ಕಳಿಗೆ ಕಷ್ಟ ಆಗತ್ತೆ. ಸಚಿವರು, ಸಂಸದರು ಸೇರಿದಂತೆ ಅನೇಕರು ಜೀವ ಕಳೆದುಕೊಂಡಿದ್ದಾರೆ. ಈ ಕೊರೊನಾ ನಮ್ಮ ದೇಶಕ್ಕೆ ದೊಡ್ಡ ಆತಂಕಕಾರಿಯಾಗಿದೆ, ನಾವು ಕಷ್ಟದಲ್ಲಿದ್ದೇವೆ. ಸೋಂಕು ಹೆಚ್ಚಾಗುತ್ತಾ ಹೋದ್ರೆ ಇನ್ನೂ ಎರಡು ಮೂರು ತಿಂಗಳು ಶಾಲೆ ತೆರೆಯಬಾರದು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯವೆಂದರು ಪರಣ್ಣ.

Published On - 10:37 am, Tue, 29 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!