ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ ಸಲಹೆ ನೀಡಲು ಮನವಿ ಮಾಡಿದ್ದೇನೆ ಎಂದು ಟಿವಿ9ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಕ್ಕಳ ಆರೋಗ್ಯವೇ ನಮಗೆ ಬಹಳ ಮುಖ್ಯ. ಆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಕೆಲಸ ಮಾಡ್ತಾರೆ. ಎರಡು ಮೂರು ತಿಂಗಳು ನೋಡಿಕೊಂಡು ಮುಂದೆ ಯೋಚನೆ ಮಾಡಲಿ ಅನ್ನೋದು ನನ್ನ ಅಭಿಪ್ರಾಯ ಎಂದು ಪರಣ್ಣ ಮುನವಳ್ಳಿ ಹೇಳಿದ್ದಾರೆ.
ಸೋಂಕು ಹೆಚ್ಚಾದ್ರೆ ಮಕ್ಕಳಿಗೆ ಕಷ್ಟ ಆಗತ್ತೆ. ಸಚಿವರು, ಸಂಸದರು ಸೇರಿದಂತೆ ಅನೇಕರು ಜೀವ ಕಳೆದುಕೊಂಡಿದ್ದಾರೆ. ಈ ಕೊರೊನಾ ನಮ್ಮ ದೇಶಕ್ಕೆ ದೊಡ್ಡ ಆತಂಕಕಾರಿಯಾಗಿದೆ, ನಾವು ಕಷ್ಟದಲ್ಲಿದ್ದೇವೆ. ಸೋಂಕು ಹೆಚ್ಚಾಗುತ್ತಾ ಹೋದ್ರೆ ಇನ್ನೂ ಎರಡು ಮೂರು ತಿಂಗಳು ಶಾಲೆ ತೆರೆಯಬಾರದು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯವೆಂದರು ಪರಣ್ಣ.
Published On - 10:37 am, Tue, 29 September 20